ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!
Team Udayavani, Dec 3, 2020, 8:12 AM IST
ಚಿಕ್ಕಮಗಳೂರು: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಬುಧವಾರ ರಾತ್ರಿ ನಡೆದಿದೆ.
ಚಿಕ್ಕಮಗಳೂರು ನಗರದಲ್ಲಿ ವಾಸವಾಗಿದ್ದ 48 ವರ್ಷದ ಪೊಲೀಸ್ ಮುಖ್ಯ ಪೇದೆ ಸಿದ್ದರಾಮಪ್ಪ ಮೃತ ದುರ್ದೈವಿ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಗಳೂರಿಗೆ ಬರುವಾಗ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸುಶಾಂತ್-ರಿಯಾ: ಜಾಲತಾಣದಲ್ಲಿ ಅತಿಹೆಚ್ಚು ಸರ್ಚ್ ಆದ ಹೆಸರು; ಯಾಹೂ ವರದಿಯಲ್ಲಿ ಉಲ್ಲೇಖ
ಮೂಲತಃ ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿವಾದ ಸಿದ್ದರಾಮಪ್ಪ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು ಗುರುವಾರ ಎಎಸ್ ಐ ಆಗಿ ಭಡ್ತಿ ಪಡಿಯುತ್ತಿದ್ದರು. ಪ್ರಮೋಷನ್ ಸಿಕ್ಕ ಖುಷಿಯಲ್ಲಿ ಎಎಸ್ ಐ ಸಮವಸ್ತ್ರ ಕೂಡ ರೆಡಿ ಮಾಡಿಕೊಂಡಿದ್ದ ಸಿದ್ದರಾಮಪ್ಪ ಖುಷಿಯಿಂದ ಕರ್ತವ್ಯ ಮುಗಿಸಿ ಮನೆಗೆ ಬರುವಾಗ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ