Udayavni Special

ನೀತಿ ಸಂಹಿತೆ ನಿಯಮ ಪಾಲಿಸಿ


Team Udayavani, Mar 14, 2019, 11:10 AM IST

chik.jpg

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ನ್ನು ಶಾಂತಿಯುತ ಹಾಗೂ ಮುಕ್ತವಾಗಿ ನಡೆಸಲು ಎಲ್ಲರೂ ಸಹಕಾರ ನೀಡಬೇಕು ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ಸಂಪರ್ಕ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ವಿಕಲಚೇತನರು, ವಯೋವೃದ್ಧರು, ಮಹಿಳೆಯರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಮತಗಟ್ಟೆಗಳನ್ನು ಸಿದ್ಧಪಡಿಸಲಾಗುವುದು ಎಂದರು.

ಚುನಾವಣಾ ಘೋಷಣೆಯಾದ 24 ಗಂಟೆಗಳೊಳಗೆ ಹೆದ್ದಾರಿ ಫಲಕಗಳಲ್ಲಿ ಹಾಗೂ ಗೋಡೆ ಬರಹಗಳು ಸೇರಿದಂತೆ
ಅಳವಡಿಸಲಾಗಿದ್ದ ರಾಜಕೀಯ ಪಕ್ಷಗಳ ಹಾಗೂ ಸರ್ಕಾರದ ಸಾಧನೆಗಳ ಕುರಿತಾದ ಬ್ಯಾನರ್‌ಗಳನ್ನು ತೆರವು ಮಾಡಲಾಗಿದೆ. ರಾಜಕೀಯ ಪಕ್ಷಗಳು ಯಾವುದೇ ಜಾಹೀರಾತು ಪ್ರಕಟಿಸಬೇಕಾದರೂ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ, ರ್ಯಾಲಿ ವಾಹನಗಳಿಗೆ ತಾತ್ಕಾಲಿಕ ಪಕ್ಷದ ಕಚೇರಿಗೆ, ಧ್ವನಿವರ್ಧಕಗಳಿಗೆ ಪರವಾನಿಗೆ ಕೋರಿ ಸುವಿಧಾ ಅಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ನಿರ್ವಹಣಾ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ
ದೂರು ಮಾಹಿತಿಗಳನ್ನು 1950 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಇದುವರೆಗೆ ಒಟ್ಟು 105 ದೂರವಾಣಿ
ಕರೆಗಳು ಬಂದಿದ್ದು, ಸದರಿ ಕರೆಗಳು ಮಾಹಿತಿಗೆ ಸಂಬಂಧಿಸಿದ್ದು, ಮಾಹಿತಿ ನೀಡಿ ಮುಕ್ತಾಯಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್‌, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು. 

ಸಿ- ವಿಜಿಲ್‌ ಆ್ಯಪ್‌ನಲ್ಲಿ ದಾಖಲಾಗುವ ದೂರುಗಳತ್ತ ಹೆಚ್ಚಿನ ಗಮನ
ಚಿಕ್ಕಮಗಳೂರು:
ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ತಮ್ಮ ಗಮನಕ್ಕೆ ಬರುವಂತಹ ಚುನಾವಣಾ
ಆಕ್ರಮಗಳನ್ನು ನಾಗರಿಕರೇ ಚಿತ್ರೀಕರಿಸಿ ಆಕ್ರಮಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ದಾಖಲಿಸಬಹುದಾದ ಸಿ-ವಿಜಿಲ್‌
(ಸಿಟಿಜನ್‌ ವಿಜಿಲ್‌) ಆ್ಯಪ್‌ನಲ್ಲಿ ದಾಖಲಾಗುವ ದೂರುಗಳತ್ತ ವಿಶೇಷ ಗಮನಹರಿಸಲಾಗುವುದು ಎಂದು ಜಿಲ್ಲಾಧಿಕಾರಿ
ಡಾ|ಬಗಾದಿ ಗೌತಮ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಚುನಾವಣಾ ಕಣದಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸಬೇಕು. ಈ ಹಿನ್ನೆಲೆಯಲ್ಲಿ ಚುನಾವಣಾ ಆಕ್ರಮ ತಡೆಗಟ್ಟಲು ಪ್ರಥಮಾಧ್ಯತೆ ಮತ್ತು ಪರಮಾಧ್ಯತೆ ನೀಡಬೇಕು. ಚುನಾವಣಾ ಆಕ್ರಮ ತಡೆಯುವ ಕರ್ತವ್ಯ ಮತ್ತು ಜವಾಬ್ದಾರಿ ಕೇವಲ ಅಧಿಕಾರಿಗಳದ್ದು ಮಾತ್ರವಲ್ಲ. ರಾಜಕೀಯ ಪಕ್ಷಗಳು, ರಾಜಕೀಯ ನಾಯಕರು ಅಷ್ಟೇ ಏಕೆ? ಮತದಾರರು ಹಾಗೂ ಜನಸಾಮಾನ್ಯರದ್ದು ಇದೆ. ಒಂದೇ ಮಾತಿನಲ್ಲಿ ಬಣ್ಣಿಸಬಹುದಾದರೆ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣಾ ವೇದಿಕೆ ಕಲ್ಪಿಸುವುದು ನಮ್ಮೆಲ್ಲರ ಹೊಣೆ.  ಆದ ಕಾರಣ ಚುನಾವಣಾ ಆಕ್ರಮಗಳ ಕುರಿತು ನಾಗರಿಕ ಸ್ನೇಹಿ ಸಿ-ವಿಜಿಲ್‌ ಆ್ಯಪ್‌ ಮೂಲಕ ದಾಖಲಾಗುವ ದೂರುಗಳನ್ನು 100 ನಿಮಿಷಗಳೊಳಗೆ ಎಂ.ಸಿ.ಸಿ ಕ್ರಮ ಕೈಗೊಳ್ಳಲಿದೆ ಎಂದ ಅವರು, ಪೋಟೋ ಮತ್ತು ವೀಡಿಯೋಗಳು ಇರುವುದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

ಚುನಾವಣೆಯಲ್ಲಿ ನಿರತವಾಗಿರುವ ಎಸ್‌.ಎಸ್‌.ಟಿ, ವಿ.ಎಸ್‌ .ಟಿ, ಎಸ್‌.ಒ, ಎಫ್‌.ಎಸ್‌.ಟಿಗಳನ್ನು ಜಿ.ಪಿ.ಎಸ್‌ ಮೂಲಕ
ಟ್ರ್ಯಾಫಿಕ್‌ ಮಾಡಲಾಗುತ್ತಿರುತ್ತದೆ. ಹೀಗಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ದೂರಿನ ಬಗ್ಗೆ ಕ್ರಮ ವಹಿಸಲು ಸಾಧ್ಯವಾಗುತ್ತದೆ
ಎಂದು ಹೇಳಿದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಪರ ಜಿಲ್ಲಾಧಿಕಾರಿ ಕುಮಾರ್‌ ಹಾಜರಿದ್ದರು.

ಸಹಾಯಕ ಚುನಾವಣಾಧಿಕಾರಿಗಳ ನೇಮಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಗೆ ಒಳಪಡುವ ಕ್ಷೇತ್ರವಾರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ನಾಗರಾಜ್‌, ಯೋಜನಾ ನಿರ್ದೇಶಕರು, ಜಿಲ್ಲಾ ಗ್ರಾಮೀಣಾಭಿವೃದ್ಧಿ, ಜಿಲ್ಲಾ ಪಂಚಾಯತ್‌ ಮೊ.ಸಂ:9480860002. ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಶಿವಕುಮಾರ್‌ ಮೊ.ಸಂ:9448357490. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಜಿ.ಪಂ. ಉಪಕಾರ್ಯದರ್ಶಿ ವಿ.ಎಸ್‌ .ಹಿರೇಮಠ್ ಮೊ.ಸಂ:9480860001. ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ತರೀಕೆರೆ  ಉಪವಿಭಾಗಾಧಿಕಾರಿ ಬಿ.ಆರ್‌.ರೂಪಾ ಮೊ.ಸಂ: 9448263897. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕಡೂರು ಕ್ಷೇತ್ರಕ್ಕೆ ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಂಗಲ್‌ದಾಸ್‌ ಮೊ.ಸಂ: 7406844691 ಅವರನ್ನು ನೇಮಿಸಲಾಗಿದೆ ಎಂದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

chikkamagalore news

ಕಾಫಿನಾಡಲ್ಲಿ ಪ್ರವಾಸಿ ತಾಣಕ್ಕೆ ಮುಗಿ ಬಿದ್ದ ಜನ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

chikkamagalore news

ಹೊಸಹಳ್ಳಿಯಲ್ಲಿ ಹೊಯ್ಸಳರ ಕಾಲದ ವೀರಗಲ್ಲು ಪತ್ತೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.