ವಿದ್ಯುತ್‌ ಉಪಕೇಂದ್ರ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ರಾಜೇಗೌಡ

Team Udayavani, Nov 15, 2021, 3:02 PM IST

Untitled-1

ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಜೇನುಗದ್ದೆಯಲ್ಲಿ 66/11 ಕೆ.ವಿ ವಿದ್ಯುತ್‌ ಉಪಕೇಂದ್ರ ನಿರ್ಮಾಣಕ್ಕೆ ಡಿ. 4, 2018ರಲ್ಲಿ ಅನುಮೋದನೆಗೊಂಡಿದ್ದು, ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದು ಇದೀಗ ಪುನರ್‌ ಅನುಮೋದನೆಗೊಂಡಿದ್ದು ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್‌ ಅವರು ಶ್ರೀ ರಂಭಾಪುರಿ ಮಠಕ್ಕೆ ಬಂದಾಗ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದ್ದು ಅನುಮತಿ ನೀಡಿದ ತಕ್ಷಣವೇ ಕಾಮಗಾರಿ ಪ್ರಾರಂಭವಾಗುವುದು. ಈ ಉಪಕೇಂದ್ರ ಸ್ಥಾಪನೆಯಿಂದ ಬಸರವಳ್ಳಿ, ಅರೆನೂರು, ಕಣತಿ, ಐದಳ್ಳಿ, ಮಾಗೋಡು, ಹ್ಯಾರಂಬಿ, ಜೇನುಗದ್ದೆ, ಕಡಬಗೆರೆ, ಬೆಳಸೆ, ಕಡವಂತಿ, ಬಾಸಾಪುರ, ಬೆಳಗೊಳ, ಬೊಗಸೆ, ಗುಡ್ಡೆಕೊಪ್ಪ, ಮಸಿಗದ್ದೆ, ಸಾರಗೋಡು, ಹುಯಿಗೆರೆ, ಉಜ್ಜಯಿನಿ, ಬಿದರೆ ಸೇರಿದಂತೆ 19ಕ್ಕೂ ಹೆಚ್ಚು ಗ್ರಾಮದವರಿಗೆ ಹಾಗೂ ಕಾಫಿ, ಅಡಕೆ ಬೆಳೆಗಾರರ ವಿದ್ಯುತ್‌ ಸಮಸ್ಯೆ ಬಗೆಹರಿಯುತ್ತದೆ. ಜೇನುಗದ್ದೆಯಲ್ಲಿ 2ಎಕರೆ ಪ್ರದೇಶದಲ್ಲಿ ಉಪಕೇಂದ್ರವು 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದರು.

ಮಕ್ಕಿಕೊಪ್ಪ, ಬಸ್ರಿಕಟ್ಟೆ ಹಾಗೂ ಮೇಗೂರು ಸೇರಿದಂತೆ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗೆ 28 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಪೆಬ್ರವರಿಯಿಂದ ಕಾಮಗಾರಿ ಪ್ರಾರಂಭಿಸಲಾಗಿದೆ. ಮಳೆಯ ಕಾರಣದಿಂದ ಕಾಮಗಾರಿಗೆ ಅಡಚಣೆಯುಂಟಾಗಿದೆ. ಮಾಜಿ ಶಾಸಕರಿಗೆ ಸಮಸ್ಯೆಯ ಅರಿವಿದ್ದರೂ ಸಹ ಕಳಪೆ ಕಾಮಗಾರಿ ಎಂದು ಪ್ರತಿಭಟನೆ ಮಾಡಿರುವುದು ಸರಿಯಲ್ಲ. ಮಾಜಿ ಶಾಸಕರ ಅವ ಧಿಯಲ್ಲಿ ನಡೆದ ವಿರಾಜಪೇಟೆ- ಬೈಂದೂರು ರಾಜ್ಯ ಹೆದ್ದಾರಿಯ ಬಾಳೆಹೊನ್ನೂರು ಹಾಗೂ ಜಯಪುರದಲ್ಲಿ ಕಾಂಕ್ರೀಟ್‌ ಕಾಮಗಾರಿ ಕಳಪೆಯಾಗಿದ್ದನ್ನು ಅವಲೋಕನ ಮಾಡಿಕೊಳ್ಳಲಿ ಎಂದರು.

ಬಾಳೆಹೊನ್ನೂರು ಭದಾನದಿ ಸೇತುವೆ ಕಾಮಗಾರಿ ಅನುದಾನವಿಲ್ಲದೆ ಸ್ಥಗಿತಗೊಂಡಿದೆ. ಜಿಲ್ಲಾದ್ಯಂತ ಕಾಮಗಾರಿ ನಡೆಯುತ್ತಿಲ್ಲ. ಗ್ರಾಪಂ ಕ್ರೋಢೀಕರಿಸಿದ ಆದಾಯದ ಮೇಲೆ ಸರಕಾರದ ಕಣ್ಣು ಬಿದ್ದಿದ್ದು, ಪಂಚಾಯ್ತಿ ಆದಾಯವನ್ನು ಕಸಿದುಕೊಳ್ಳಲು ಮುಂದಾಗಿರುವುದು ಸರಿಯಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಜಿ.ಎಂ. ನಟರಾಜ್‌, ಬಾಳೆಹೊನ್ನೂರು ಹೋಬಳಿ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಹನೀಫ್‌, ವಕ್ತಾರ ಹಿರಿಯಣ್ಣ, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್‌. ಜಯಪ್ರಕಾಶ್‌, ಬಿ. ಕಣಬೂರು ಗ್ರಾಪಂ ಉಪಾಧ್ಯಕ್ಷ ಎಂ.ಜೆ. ಮಹೇಶ್‌ ಆಚಾರ್ಯ, ಬಿ.ಕೆ. ಮಧುಸೂಧನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.