ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಾಳೆಹೊನ್ನೂರು ಸ್ವಯಂ ಪ್ರೇರಿತ ಬಂದ್
Team Udayavani, Jul 29, 2022, 8:41 AM IST
ಚಿಕ್ಕಮಗಳೂರು : ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಇಂದು (ಶುಕ್ರವಾರ ಜು.29) ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ.
ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಸ್ವಯಂ ಪ್ರೇರಿತ ಬೆಂಬಲ ನೀಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಬಾಳೆಹೊನ್ನೂರು ಪಟ್ಟಣ ಬಂದ್ ಗೆ ಕರೆ ನೀಡಿರುವ ಹಿಂದೂಪರ ಸಂಘಟನೆಗಳು, ಪ್ರವೀಣ್ ಹತ್ಯೆ ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಸಂಘಟನೆಗಳು ತೀರ್ಮಾನಿಸಿದ್ದು, ನಿನ್ನೆ ಕೊಪ್ಪ ಸೇರಿದಂತೆ ಜಯಪುರ, ಹರಿಹರಪುರ ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ