ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 14, 2020, 8:47 AM IST
ಕೊಟ್ಟಿಗೆಹಾರ: ಬಣಕಲ್ ಗುಡ್ಡಟ್ಟಿ ರಸ್ತೆಯ ಕುವೆಂಪುನಗರ ಸಮೀಪದ ರಸ್ತೆ ಹೊಂಡಗುಂಡಿಗಳಿಂದ ತುಂಬಿದ್ದು, ಶೀಘ್ರ ದುರಸ್ತಿ ಮಾಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟಿಸಿದರು.
ಕುವೆಂಪುನಗರದ ರಿಯಾಜ್ ಮಾತನಾಡಿ, ಬಣಕಲ್ ಗುಡ್ಡಟ್ಟಿ ರಸ್ತೆಯ ಕುವೆಂಪುನಗರ ಸಮೀಪ ರಸ್ತೆ ಹೊಂಡ ಗುಂಡಿಗಳಿಂದ ತುಂಬಿದ್ದು, ಸೇತುವೆಗೆ ತಡೆಗೋಡೆ ಕೂಡ ಇಲ್ಲ. ದಿನನಿತ್ಯ ಈ ಮಾರ್ಗವಾಗಿ ನೂರಾರು ವಾಹನಗಳು ಸಂಚರಿಸುತ್ತವೆ. ಪಾದಚಾರಿಗಳು ಹೊಂಡ ಗುಂಡಿಗಳ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ರಮೇಶ್, ಅರುಣ್ ಪೂಜಾರಿ ಮಾತನಾಡಿದರು. ಈ ಸಂದರ್ಭದಲ್ಲಿ ಲೋಕೇಶ್, ಸಿದ್ದೀಕ್, ಉಲ್ಲಾಸ್, ಜಾವೀದ್, ಪೃಥ್ವಿ, ಅಲ್ಪಾಸ್, ಸದಾಶಿವ, ಸಂತೋಷ್ ದೇವಾಡಿಗ ಮುಂತಾದವರು ಇದ್ದರು. ಗ್ರಾಪಂ ಅಧ್ಯಕ್ಷರ ಸ್ಪಷ್ಟನೆ: ರಸ್ತೆ ಅಭಿವೃದ್ಧಿಗೆ ಶಾಸಕರ ಅನುದಾನದಲ್ಲಿ ಹಣ ತೆಗೆದಿ ಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕೊರೊನಾ ಆತಂಕ ಕಡಿಮೆಯಾದ ನಂತರ ಕಾಮಗಾರಿ ಪ್ರಾರಂಭವಾಗುವುದು ಎಂದು ಬಣಕಲ್ ಗ್ರಾಪಂ ಅಧ್ಯಕ್ಷ ಸತೀಶ್ ಮತ್ತಿಕಟ್ಟೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ