ಕಾಫಿನಾಡಿನ ವಿವಿಧೆಡೆ ಸಾಧಾರಣ ಮಳೆ

ಕಾಫಿ ಕೊಯ್ಲು ಸಂಸ್ಕರಣೆಗೆ ತೊಂದರೆ |ಅಕಾಲಿಕ ಮಳೆಗೆ ರೈತ ಸಮುದಾಯ ಕಂಗಾಲು

Team Udayavani, Feb 20, 2021, 4:29 PM IST

Rain in Chikkamagaluru

ಚಿಕ್ಕಮಗಳೂರು: ಹವಾಮಾನ ವೈಪರೀತ್ಯದಿಂದ ಜಿಲ್ಲೆಯ ಕೆಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ ಮತ್ತು ಶೃಂಗೇರಿ ಸುತ್ತಮುತ್ತ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಕಡೂರು, ತರೀಕೆರೆ ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಹವಾಮಾನ ಇಲಾಖೆ ಫೆ.18 ರಿಂದ 20ರ ವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ್ದು ಜಿಲ್ಲೆಯಲ್ಲಿ ಫೆ.18ರಂದು ಮೋಡ ಕವಿದ ವಾತಾವರಣ ಉಂಟಾಗಿತ್ತು. ರಾತ್ರಿ ವೇಳೆ ತುಂತುರು  ಮಳೆಯಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು ಮಧ್ಯಾಹ್ನದ ವೇಳೆ ಚಿಕ್ಕಮಗಳೂರು ನಗರದಲ್ಲಿ ಮಳೆಯಾಗಿದೆ. ಮೂಡಿಗೆರೆ, ಕೊಪ್ಪ ಮತ್ತು ಶೃಂಗೇರಿ ಸುತ್ತಮುತ್ತಲ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಕಡೂರು ಕಸಬಾ, ಸಿಂಗಟಗೆರೆ, ಪಂಚನಹಳ್ಳಿ ಸಖರಾಯಪಟ್ಟಣ, ಬೀರೂರು, ಎಮ್ಮೆದೊಡ್ಡಿ, ಬಾಸೂರು ಗ್ರಾಮಗಳಲ್ಲಿ ಕನಿಷ್ಟ 8 ಮಿ.ಮೀ.ಯಿಂದ ಗರಿಷ್ಟ 46 ಮಿಮೀ ವರೆಗೂ ಮಳೆ ಬಿದ್ದಿದೆ. ತರೀಕೆರೆ ತಾಲೂಕು ಲಕ್ಕವಳ್ಳಿ, ರಂಗೇನಹಳ್ಳಿ, ಹುಣಸಘಟ್ಟ, ತಣಿಗೆಬೈಲು, ಉಡೇವಾ, ತ್ಯಾಗದಬಾಗಿ, ಲಿಂಗದಹಳ್ಳಿಯಲ್ಲಿ ಕನಿಷ್ಠ 4 ಮಿ.ಮೀ.ನಿಂದ ಗರಿಷ್ಟ 18 ಮಿಮೀವರೆಗೂ ಮಳೆಯಾಗಿದ್ದರೆ, ಅಜ್ಜಂಪುರ ತಾಲೂಕು ಶಿವನಿ, ಬುಕ್ಕಾಂಬುಧಿ ಮತ್ತು ಚೌಳಹಿರಿಯೂರಿನಲ್ಲೂ ಕನಿಷ್ಟ 2.3ಮಿ.ಮೀ.ನಿಂದ ಗರಿಷ್ಟ 20ಮಿಮೀ ವರೆಗೂ ಮಳೆಯಾಗಿದೆ.

ಕಾಫಿಗೆ ಮತ್ತೆ ಸಂಕಷ್ಟ: ಅರೇಬಿಕಾ ಕಾಫಿ ಕೊಯ್ಲು ಮುಗಿದು, ರೋಬಾಸ್ಟಾ ಕಾಫಿ ಕೊಯ್ಲು ಆರಂಭವಾಗಿದೆ. ಮೋಡ ಕವಿದ ವಾತಾವರಣದಿಂದ ಕಾಫಿ ಒಣಗಿಸಲು ತೊಂದರೆಯಾದರೆ ಮಳೆಯಿಂದ ಕಾಫಿ ಹಣ್ಣು ನೆಲಕಚ್ಚುತ್ತಿದ್ದು ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಲಿದೆ.

ಕಾರ್ಮಿಕರ ಕೊರತೆಯಿಂದ ಕಾಫಿಕೊಯ್ಲಿಗೂ ಸಮಸ್ಯೆ ಎದುರಾಗಿದ್ದು, ಗಿಡಗಳಲ್ಲೇ ಕಾಫಿ ಬೀಜ  ಒಣಗುತ್ತಿದೆ. ಕಾಫಿ ಬೀಜ ಹೂವಾಗಲು ಮಳೆ ಸಹಕಾರಿಯಾದರೂ ಕೊಯ್ಲು ಮುಗಿಯದೆ ಮಳೆ ಬಂದರೆ ಹಣ್ಣುಗಳ ನಡುವೆ ಹೂವಾಗಿ ಕೊಯ್ಲಿಗೆ ತೊಡಕಾಗುವ ಸಾಧ್ಯತೆಗಳಿವೆ ಎಂಬುದು ಬೆಳೆಗಾರರ ಅಭಿಪ್ರಾಯವಾಗಿದೆ.

ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆಗಾರರು ನಷ್ಟಕ್ಕೆ ತುತ್ತಾಗಿದ್ದಾರೆ. ಶೇ.40ರಷ್ಟು ಕಾಫಿ ಹೂವಾಗುತ್ತಿದ್ದು, ಈಗ ಬಿದ್ದ ಮಳೆಗೆ ಶೇ.25ರಷ್ಟು ಹೂವಾಗುತ್ತಿದೆ. ಮೂರು ಹಂತದಲ್ಲಿ ಹೂವು  ಬಿಡುತ್ತಿದ್ದು, ಮಳೆಯಿಂದ ಯಾವ ಹಂತ ಉಳಿಯುತ್ತದೋ? ಯಾವ ಹಂತದ ಹೂವು ಹಾಳಾಗುತ್ತದೋ ತಿಳಿಯದಂತಾಗಿದೆ ಎಂದು ಕಾಫಿ ಬೆಳೆಗಾರರ ಒಕ್ಕೂಟದ ಕಾರ್ಯದರ್ಶಿ ಕೆ.ಬಿ. ಕೃಷ್ಣಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.