ಕಂದಾಯ ಭೂಮಿ ಅತಿಕ್ರಮಣ ಪ್ರಕರಣ: ತಹಶೀಲ್ದಾರ್‌ ಭೇಟಿ

Team Udayavani, Jul 3, 2021, 10:48 AM IST

ಕಂದಾಯ ಭೂಮಿ ಅತಿಕ್ರಮಣ  ಪ್ರಕರಣ: ತಹಶೀಲ್ದಾರ್‌ ಭೇಟಿ

ಬಾಳೆಹೊನ್ನೂರು: ಬಿ. ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರನಗರದ ಗ್ರಾಮದ ಅಂಚೆ ರಸ್ತೆಯ ಸ.ನಂ.136ರಲ್ಲಿ ಗ್ರಾಪಂ ಮಾಜಿ ಅಧ್ಯಕ್ಷರೊಬ್ಬರು ಕಂದಾಯ ಇಲಾಖೆಗೆ ಸೇರಿದ ಜಾಗವನ್ನು ಅತಿಕ್ರಮಿಸಿ ಆ ಜಾಗದಲ್ಲಿದ್ದ ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ ಎಂಬ ಘಟನೆ ಹಿನ್ನೆಲೆಯಲ್ಲಿ ಎನ್‌.ಆರ್‌.ಪುರ ತಹಶೀಲ್ದಾರ್‌ ಸಿ.ಜಿ. ಗೀತಾ ಅವರು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್‌ ಸಿ.ಜಿ. ಗೀತಾ, ಬಿ. ಕಣಬೂರು ಗ್ರಾಮದ ಸ.ನಂ.136ರಲ್ಲಿ ಅಕ್ರಮವಾಗಿ ಮರ ಕಡಿದು ಅನಧಿಕೃತ ಸಾಗುವಳಿ ಮಾಡುತ್ತಿದ್ದಾರೆ ಎಂಬ ದೂರು ಬುಧವಾರ ಬಂದಿದ್ದು, ತಕ್ಷಣವೇ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅನ ಧಿಕೃತವಾಗಿ ಸಾಗುವಳಿ ಮಾಡುವುದನ್ನು ಸ್ಥಗಿತಗೊಳಿಸಿ ಜಾಗಕ್ಕೆ ಟ್ರೆಂಚ್‌ ಹೊಡೆದು ಯಾರೂ ಅತಿಕ್ರಮ ಪ್ರವೇಶ ಮಾಡದಂತೆ ತಡೆಯಲಾಗಿದೆ. ಒತ್ತುವರಿ ಮಾಡಿರುವ ವ್ಯಕ್ತಿ ನಮೂನೆ 57ರಲ್ಲಿ ಅಕ್ರಮ ಸಕ್ರಮದಲ್ಲಿ ಅರ್ಜಿ ಹಾಕಿದ್ದೇವೆ ಎಂದು ಹೇಳಿದ್ದು, ಅದನ್ನು ನಾವು ಪರಿಶೀಲನೆ ನಡೆಸುತ್ತೇವೆ. ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಹೊಸದಾಗಿ ಗಿಡ ನೆಡುತ್ತಿರುವುದು ಕಂಡುಬಂದಿದೆ. ಈ ಪ್ರದೇಶದಲ್ಲಿ 19 ಎಕರೆಯಷ್ಟು ಅರಣ್ಯ ಜಾಗವೂ ಇದ್ದು ಈ ಹಿನ್ನೆಲೆಯಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ನಡೆಸಲಾಗುವುದು ಎಂದರು.

ನಾಡಕಚೇರಿ ಉಪತಹಶೀಲ್ದಾರ್‌ ನಾಗೇಂದ್ರ, ಕಂದಾಯ ನಿರೀಕ್ಷಕ ಮಂಜುನಾಥ್‌, ಗ್ರಾಮ ಲೆಕ್ಕಿಗ ರಜತ್‌ಮತ್ತಿತರರು ಇದ್ದರು. ಒತ್ತುವರಿ ಹಾಗೂ ಮರ ಕಡಿತ ಪ್ರಕರಣಕ್ಕೆ ಸಂಬಂಧಿ ಸಿದಂತೆ ತಹಶೀಲ್ದಾರ್‌ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ಸ್ಥಳೀಯ ಗ್ರಾಮಸ್ಥರು ದೂರಿದ್ದಾರೆ.

ಕಂದಾಯ ಭೂಮಿಯಲ್ಲಿನ ಸಾವಿರಾರು ರೂ.ಬೆಲೆ ಬಾಳುವ ಹತ್ತಾರು ಮರಗಳನ್ನು ಅಕ್ರಮವಾಗಿ ಕಡಿದಿದ್ದರೂ ಸಹ ಕಣ್ಣೊರೆಸುವ ತಂತ್ರಕ್ಕಾಗಿ ಮಾತ್ರ ಸಣ್ಣ ಕೇಸ್‌ ದಾಖಲಿಸಿ ಬೆಲೆ ಬಾಳುವ ಮರಗಳನ್ನು ಕಡಿತಲೆ ಹಾಗೂ ಬೇಲಿಗೆ ಹಾಕಿರುವ ಅರಣ್ಯದ ಮರಗಳ ಕಡಿತ ಮಾಡಿರುವ ಬಗ್ಗೆ ಯಾವುದೇ ಕ್ರಮ

ಕೈಗೊಂಡಿಲ್ಲ. ತಹಶೀಲ್ದಾರ್‌ ಭೇಟಿ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದು ಈ ಬಗ್ಗೆ ಮಾಹಿತಿ ನೀಡಿ ಕ್ರಮ ಕೈಗೊಳ್ಳಬೇಕಿತ್ತು. ಸಾವಿರಾರು ರೂ. ಬೆಲೆ ಬಾಳುವ ಮರಗಳನ್ನು ಬೇಲಿ ಕಂಬವಾಗಿ ಪರಿವರ್ತಿಸಿದ್ದು ಈ ಬಗ್ಗೆ ಕಣ್ಣೆದುರೇ ಸಾಕ್ಷಿ ಇದ್ದರೂ ಸಹ ಅದನ್ನುಇನ್ನೂ ವಶಪಡಿಸಿಕೊಂಡಿಲ್ಲ. ಅರಣ್ಯ ಇಲಾಖೆಯ ಸಿಬ್ಬಂದಿಗಳೂ ಸಹ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಗ್ರಾಪಂ ಸದಸ್ಯ ಯು. ಅಶ್ರಫ್‌ ದೂರಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.