Udayavni Special

ಎಲ್ಲಾ ಜೀವನದಲ್ಲಿ ಹೊಸತನ ಮೂಡಿಬರಲಿ


Team Udayavani, Apr 15, 2021, 6:42 PM IST

ದ್ಗಹದ್ಸ್ಸ

ಬಾಳೆಹೊನ್ನೂರು : ವಸಂತ ಮಾಸದಲ್ಲಿ ಹೊಸತನ ಸೃಷ್ಟಿಯಲ್ಲಿ ಕಾಣುವಂತೆ ಮನುಷ್ಯ ಜೀವನದಲ್ಲಿಯೂ ಸಹ ಹಳೆಯ ಕಹಿ ನೆನಪುಗಳನ್ನು ಕಳೆದುಕೊಂಡು ಹೊಸತನದಿಂದ ಬಾಳುವುದೇ ಯುಗಾದಿ ಹೊಸ ವರುಷದ ಸಂದೇಶವಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಹುಬ್ಬಳ್ಳಿಯ ತಿರುಮಲಕೊಪ್ಪ ವ್ಯಾಪ್ತಿಯಲ್ಲಿ ಬರುವ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಮಹಾರಥೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪರಶಿವನ ಪಂಚ ಮುಖಗಳಿಂದ ಅವತರಿಸಿದವರು ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು. ಜಾತಿ, ಮತ, ಪಂಥಗಳ ಸಂಕೋಲೆ ಮೀರಿ ಶಿವಾದ್ವೈತ ಸಿದ್ಧಾಂತವನ್ನು ಭೋಧಿಸಿ ಸಕಲರನ್ನು ಉದ್ಧರಿಸಿದರು. ಸತ್ಯ ಧರ್ಮ ಸಂಸ್ಕೃತಿ ಪರಂಪರೆ ಆದರ್ಶ ಮೌಲ್ಯಗಳ ಪುನರುತ್ಥಾನಕ್ಕಾಗಿ ಶ್ರಮಿಸಿದ್ದನ್ನು ಮರೆಯಲಾಗದು ಎಂದರು. 5 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಮಂಗಲ ಶಿಲಾಮೂರ್ತಿಯ ಸಂಪೂರ್ಣ ಸೇವೆಯನ್ನು ಹುಬ್ಬಳ್ಳಿ ನಗರದ ಶಿವಮೂರ್ತಯ್ಯ ಚಿಕ್ಕಮಠ ಒಪ್ಪಿಕೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಶ್ರೀ ಮದ್ವೀರಶೈವ ಸದ್ಭೋಧನ ಸಂಸ್ಥೆ ಹುಬ್ಬಳ್ಳಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ ಮಾತನಾಡಿ, ನಾಲ್ಕು ತಾಲೂಕು ಕೇಂದ್ರಗಳ ಮಧ್ಯವರ್ತಿಯಾಗಿರುವ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸ ಪರಿಸರದಲ್ಲಿ ಹಲವಾರು ಯೋಜನೆ ರೂಪಿಸುವ ಉದ್ದೇಶವಿದೆ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕೆಂದರು.

ಸುಳ್ಳದ ಶಿವಸಿದ್ಧರಾಮೇಶ್ವರ ಶ್ರೀಗಳು, ಬಂಕಾಪುರ ರೇವಣಸಿದ್ಧ ಶ್ರೀಗಳು, ಸೂಡಿ ಡಾ| ಕೊಟ್ಟೂರು ಬಸವೇಶ್ವರ ಶ್ರೀಗಳು ಮಳಲಿಮಠದ ಡಾ| ನಾಗಭೂಷಣ ಶ್ರೀಗಳು ಯುಗಾದಿ ಹೊಸ ವರುಷದ ಆಚರಣೆ ಮತ್ತು ಶ್ರೀ ಜಗದ್ಗುರು ಪಂಚಾಚಾರ್ಯರು ಭೋಧಿಸಿದ ವಿಚಾರಗಳು ಕುರಿತು ಉಪದೇಶಾಮೃತವನ್ನಿತ್ತರು.

ಅಧ್ಯಕ್ಷತೆ ವಹಿಸಿದ್ದ ಅಖೀಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷರಾದ ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶ್ರೀಗಳು ಮಾತನಾಡಿ, ಪರಮ ತಪಸ್ವಿ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ತಪಸ್ಸಿನ ಫಲವಾಗಿ ಈ ಕ್ಷೇತ್ರ ಸ್ಥಾಪಿತಗೊಂಡಿದೆ. ಅವರ ಆದರ್ಶಗಳನ್ನು ಇಂದಿನ ಶ್ರೀ ರಂಭಾಪುರಿ ಜಗದ್ಗುರುಗಳು ಸಾಕಾರಗೊಳಿಸುತ್ತಿರುವುದು ಭಕ್ತ ಸಮುದಾಯಕ್ಕೆ ಹರುಷ ತಂದಿದೆ ಎಂದರು.

ಸಮಿತಿಯ ಮುಖ್ಯಸ್ಥರಾದ ಶ್ರೀಕಂಠಗೌಡ ಹಿರೇಗೌಡರು ಸ್ವಾಗತಿಸಿ ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಹುಬ್ಬಳ್ಳಿಯ ವಿಶ್ವನಾಥ ಹಿರೇಗೌಡ್ರ ಮತ್ತು ಅಗಡಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಆಶೀರ್ವಾದ ಪಡೆದರು. ಶಾಂತನಗೌಡ ಹನುಮಂತಗೌಡ್ರ ಮತ್ತು ಪಿ.ಎಸ್‌. ಹಿರೇಮಠ ಶಿಕ್ಷಕರು ನಿರೂಪಿಸಿದರು. ಹಿರೇಬೂದಿಹಾಳದ ಪ್ರಕಾಶ ಶಾಸ್ತ್ರಿಗಳ ವೈದಿಕತ್ವದಲ್ಲಿ ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು 65 ಜಂಗಮ ವಟುಗಳಿಗೆ ಶಿವದೀಕ್ಷೆ ಅಯ್ನಾಚಾರ ನೆರವೇರಿಸಿ ಶುಭ ಹಾರೈಸಿದರು. ಸಮಾರಂಭಕ್ಕೂ ಮುನ್ನ ಶ್ರೀ ಜಗದ್ಗುರು ರೇಣುಕಾಚಾರ್ಯ ಮಹಾರಥೋತ್ಸವ ಭಕ್ತ ಸಮೂಹದ ಮಧ್ಯೆ ಸಂಭ್ರಮದಿಂದ ಜರುಗಿತು. ಹಲವರು ಭಜನಾ ಸಂಘ, ಸುರಶೆಟ್ಟಿಕೊಪ್ಪದ ಜಗ್ಗಲಿ ಮೇಳದವರು ಪಾಲ್ಗೊಂಡಿದ್ದರು.

 

 

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The oxygen supply challenge

ಜಿಲ್ಲಾಡಳಿತದ ಮುಂದಿದೆ ಆಕ್ಸಿಜನ್‌ ಪೂರೈಕೆ ಸವಾಲು

ಚಿಕ್ಕಮಗಳೂರು: ಆನೆ ಓಡಿಸಲು ಹೋದ ಸಿಬ್ಬಂದಿಯ ಮೇಲೆ ಆನೆ ದಾಳಿ!

ಚಿಕ್ಕಮಗಳೂರು: ಆನೆ ಓಡಿಸಲು ಹೋದ ಸಿಬ್ಬಂದಿಯ ಮೇಲೆ ಆನೆ ದಾಳಿ!

6-19

ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡನೀಯ: ಸಿ.ಟಿ.ರವಿ

6-18

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ

6-17

ಕೊರೊನಾ ತಡೆಗೆ ಸಮನ್ವಯದಿಂದ ಕೆಲಸ ಮಾಡಿ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

ದ್ವಿಚಕ್ರ ವಾಹನಗಳಿಂದ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ

ದ್ವಿಚಕ್ರ ವಾಹನಗಳಿಂದ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ

ಶಾಂತಿಮೊಗರು: ಪ್ರಗತಿಯಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿ

ಶಾಂತಿಮೊಗರು: ಪ್ರಗತಿಯಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.