ಕೆಮ್ಮಣ್ಣುಗುಂಡಿ ಅಭಿವೃದ್ಧಿಗೆ ಶ್ರಮಿಸಿ

ಅಧಿಕಾರಿಗಳಿಗೆ ಶಾಸಕ ರಘುನಾಥ್‌ ರಾವ್‌ ಮಲ್ಕಾಪೂರೆ ಸೂಚನೆ

Team Udayavani, May 6, 2022, 3:46 PM IST

chitra-durga

ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿ ಆಕರ್ಷಕ ಪ್ರವಾಸಿ ತಾಣವಾಗಿದ್ದು, ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಕರ್ನಾಟಕ ವಿಧಾನ ಪರಿಷತ್‌ ಅರ್ಜಿಗಳ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಘುನಾಥ್‌ ರಾವ್‌ ಮಲ್ಕಾಪೂರೆ ಅವರು ತಿಳಿಸಿದರು.

ತರೀಕೆರೆ ತಾಲೂಕು ಕೆಮ್ಮಣ್ಣಗುಂಡಿಯಲ್ಲಿ ವಿಧಾನ ಪರಿಷತ್‌ ಅರ್ಜಿಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟಗಾರಿಕೆ, ಅರಣ್ಯ ಇಲಾಖೆ ಸೇರಿದಂತೆ ಅಂಗ ಸಂಸ್ಥೆಗಳು ಸಮನ್ವಯತೆಯಿಂದ ಕೆಮ್ಮಣ್ಣುಗುಂಡಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸೂಚಿಸಿದರು.

ಕೆಮ್ಮಣ್ಣುಗುಂಡಿ ಚಾರಣ ಮತ್ತು ಸಾಹಸ ಕ್ರೀಡೆಗಳಿಗೆ ಯೋಗ್ಯವಾಗಿದ್ದು, ಯೋಜನಾ ವರದಿ ಸಿದ್ಧಗೊಳಿಸಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಮತ್ತು ಆದಾಯ ಹೆಚ್ಚಳಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಡಳಿತ ಸೇರಿದಂತೆ ಇತರೆ ಇಲಾಖೆಗಳು ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಪ್ರವಾಸಿ ತಾಣದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಫ್ಟಿಂಗ್ ಸಾಹಸಿ ಕ್ರೀಡೆಗೆ ಜೀವ ರಕ್ಷಣೆಗೆ ಅಗತ್ಯವಾದ ನಿಯಮ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಈ ಹಿನ್ನಲೆಯಲ್ಲಿ ತಾಂತ್ರಿಕ ಸಲಹೆಗಾರರ ಜೊತೆ ಚರ್ಚಿಸುವಂತೆ ಸೂಚಿಸಿದ ಅವರು, ರೋಪ್‌ ವೇ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಎನ್.ರಮೇಶ್‌ ಮಾತನಾಡಿ, ಕೆಮ್ಮಣ್ಣುಗುಂಡಿ ಪ್ರದೇಶದಲ್ಲಿ ಪ್ರವಾಸಿಗರಿಗೆ ಅಗತ್ಯವಾದ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ. ಇಲ್ಲಿನ ವಸತಿಗೃಹ ವ್ಯವಸ್ಥೆ ಯನ್ನು ಜಂಗಲ್‌ ಲಾಡ್ಜ್ ಸಂಸ್ಥೆಗೆ ವಹಿಸಲಾಗಿದೆ. ಪ್ರವಾಸಿಗರ ಬೇಡಿಕೆಗೆ ಸ್ಪಂದಿಸಲಾಗುತ್ತಿದೆ. ಇತರೆ ಗಿರಿಧಾಮಗಳ ಮಾದರಿಯಲ್ಲಿ ಸೌಲಭ್ಯ ಒದಗಿಸಲಾಗುವುದು ಎಂದರು.

ಸಭೆಯ ಶಿಫಾರಸ್ಸುಗಳನ್ನು ಮತ್ತು ಸೂಚನೆಗಳ ಅನ್ವಯ ತಗೆದುಕೊಂಡ ಕ್ರಮಗಳ ಕುರಿತ ಅನುಪಾಲನಾ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸುವಂತೆ ಸಮಿತಿ ಸದಸ್ಯರು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್.ಎಲ್. ಭೋಜೇಗೌಡ, ಸುನೀಲ್‌ ವಲ್ಯಾಪುರೆ, ಮೋಹನ್‌ಕುಮಾರ್‌ ಕೊಂಡಜ್ಜಿ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ| ಎಚ್.ಎಲ್. ನಾಗರಾಜ್‌, ತರೀಕೆರೆ ಉಪವಿಭಾಗಾಧಿಕಾರಿ ಸಿದ್ಧಲಿಂಗ ರೆಡ್ಡಿ, ಪ್ರವಾಸೋದ್ಯಮ, ತೋಟಗಾರಿಕೆ ಇಲಾಖೆ, ಜಂಗಲ್‌ ಲಾಡ್ಜ್ ಸಂಸ್ಥೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.