ಕೊಪ್ಪ: ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳು
Team Udayavani, Jan 3, 2022, 11:54 AM IST
ಚಿಕ್ಕಮಗಳೂರು: ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ.
ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿಗೆ ಸ್ಕಾರ್ಫ್ ಧರಿಸಿ ಬರುವುದನ್ನು ಖಂಡಿಸಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದಿದ್ದಾರೆ.
ಇದನ್ನೂ ಓದಿ:ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಕೆಲ ದಿನಗಳ ಹಿಂದೆ ಉಡುಪಿಯ ಕಾಲೇಜೊಂದರಲ್ಲಿ ಇಂತಹ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆರೆ ರಾಜ್ಯಗಳಿಗೆ 831.53 ಮಿ.ಯೂ. ವಿದ್ಯುತ್ ಮಾರಾಟ
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಸಹೋದರಿಯ ಮದುವೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು : ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ
ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ