
ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ: ಸಿ.ಟಿ ರವಿ
Team Udayavani, Jun 6, 2023, 4:10 PM IST

ಚಿಕ್ಕಮಗಳೂರು: ಚಕ್ರವರ್ತಿ ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಕಾಂಗ್ರೆಸ್ ಕಣ್ಣಿಗೆ ಸೂಲಿಬೆಲೆ ಲಾಡೆನ್ ರೀತಿ ಕಾಣುತ್ತಿದ್ದಾರಾ? ಲಾಡೆನ್ ಬಂದರೆ ಬಿಟ್ಟುಕೊಳ್ಳುತ್ತಾರೆ, ಚಕ್ರವರ್ತಿ ವಿಚಾರಗೋಷ್ಠಿ ರದ್ದು ಮಾಡುತ್ತಾರೆ, ಇವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವವರು ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಘೋಷಿತ ತುರ್ತು ಪರಿಸ್ಥಿತಿಯೆಂದು ಕರೆಯುವುದಲ್ಲ. ಅಧಿಕಾರದ ಅತಿಯಾದ ಮದ ಎಂದು ಹೇಳಬಹುದು. ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಇರಲು ಸಾಧ್ಯವಿಲ್ಲ ಎಂದರು.
ಹಿಂದೆ ಕಾಂಗ್ರೆಸ್, ಸಂವಿಧಾನವನ್ನೇ ಬುಡಮೇಲು ಮಾಡಿ ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನು ನೆನಪಿಟ್ಟುಕೊಳ್ಳಬೇಕು. ಮದ ಇಳಿಯುದಕ್ಕೆ-ಇಳಿಸಿಯುವುದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಸಿ.ಟಿ.ರವಿ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ