ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ಇಲಾಖೆ ವಿರುದ್ಧ ಪಿತೂರಿ; ಪೊಲೀಸ್ ಸಿಬ್ಬಂದಿ ಅಮಾನತು
Team Udayavani, Mar 1, 2023, 12:35 PM IST
ಮೂಡಿಗೆರೆ: ಇಲಾಖೆ ಸಿಬ್ಬಂದಿಗಳ ವಿರುದ್ಧವೇ ಪಿತೂರಿ ನಡೆಸಿದ್ದ ಹಿನ್ನೆಲೆಯಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಉಮೇಶ್ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಳ್ಳತನದ ಆರೋಪದ ಮೇಲೆ ದೂರಿನನ್ವಯ ತಾಲೂಕಿನ ದಾರದಹಳ್ಳಿಯ ಮಂಜು ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಫೆ.14ರಂದು ಮೂಡಿಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ವಸಂತ ಮತ್ತು ಲೋಹಿತ್ ಎಂಬುವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿ ಆದೇಶಿಸಿದ್ದರು.
ಇದೇ ಠಾಣೆಯ ಕಾನ್ಸ್ಟೇಬಲ್ ಉಮೇಶ್ ಎಂಬುವರು ಇಲಾಖೆ ಬಗ್ಗೆ ಕೆಲವರೊಂದಿಗೆ ಚರ್ಚಿಸುವ ಜೊತೆಗೆ ಇಲಾಖೆಯ ಸಹೋದ್ಯೋಗಿಗಳಾದ ವಸಂತ ಮತ್ತು ಲೋಹಿತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಅವರಿಂದ 50 ಸಾವಿರ ರೂ. ಪಡೆದುಕೊಳ್ಳುವಂತೆ ಇಲಾಖೆ ಸಿಬ್ಬಂದಿ ವಿರುದ್ಧವೇ ಪಿತೂರಿ ನಡೆಸಿ ಬೇಜವಾಬ್ದಾರಿ ಪ್ರದರ್ಶಿಸಿದ್ದ ಕಾರಣದಿಂದಾಗಿ ಕಾನ್ಸ್ಟೇಬಲ್ ಉಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !