ರಾಜ್ಯಪಾಲರು ಕೇಂದ್ರದ ಕೈಗೊಂ¸

Team Udayavani, May 18, 2018, 3:19 PM IST

chikk.jpg

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರ ರಚನೆ ವಿಷಯದಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಗುರುವಾರ ನಗರದಲ್ಲಿ ಕಾಂಗ್ರೆಸ್‌ ಹಾಗೂ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್‌, ಸಿಪಿಐ ಮುಖಂಡರು ಹಾಗೂ ಕಾರ್ಯಕರ್ತರು, ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿ ಕೇಂದ್ರ ಬಿಜೆಪಿ ಸರ್ಕಾರದ ಸಂವಿಧಾನ ವಿರೋಧಿತನದ ಬಗ್ಗೆ ಘೋಷಣೆಗಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಡಿ.ಎಲ್‌. ವಿಜಯಕುಮಾರ್‌, ಪ್ರಜಾಪ್ರಭುತ್ವದಲ್ಲಿ ಸಂವಿಧಾನದಲ್ಲಿರುವ ಎಲ್ಲ ಆಶಯಗಳನ್ನು ಗಾಳಿಗೆ ತೂರಿ ಪ್ರಧಾನಿ ನರೇಂದ್ರ ಮೋದಿ ಹೇಗಾದರೂ ಮಾಡಿ ಸರ್ಕಾರ ರಚಿಸಿ ಎಂದು ಹೇಳುವ ಮೂಲಕ ಕುದುರೆ ವ್ಯಾಪಾರಕ್ಕೆ ಹಸಿರು ನಿಶಾನೆ ತೋರಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ.

ಕಾಂಗ್ರೆಸ್‌-ಜೆಡಿಎಸ್‌ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ಕೊಡಬೇಕಿತ್ತು ಎಂದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್‌.ಎಂ. ರೇಣುಕಾರಾಧ್ಯ ಮಾತನಾಡಿ, ಆರೆಸ್ಸೆಸ್‌ ಅಜೆಂಡಾ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿದರು. ಜಿಲ್ಲಾ ಕಾಂಗ್ರೆಸ್‌ ವಕ್ತಾರ ಎಂ.ಸಿ. ಶಿವಾನಂದಸ್ವಾಮಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವರ್ತನೆಗಳನ್ನು ಖಂಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಶಾಂತೇಗೌಡ, ಅರಣ್ಯ ವಸತಿ ವಿಹಾರದಾಮಗಳ ಅಧ್ಯಕ್ಷ ಎ.ಎನ್‌. ಮಹೇಶ್‌, ಸಿಡಿಎ ಮಾಜಿ ಅಧ್ಯಕ್ಷ ಡಿ.ಎಸ್‌. ಚಂದ್ರೇಗೌಡ, ಕಾಂಗ್ರೆಸ್‌ ಮುಖಂಡರಾದ ನಿಸಾರ್‌, ಸಿಲ್ವಸ್ಟರ್‌, ಎನ್‌.ಡಿ. ಚಂದ್ರಪ್ಪ, ಎಚ್‌.ಪಿ. ಮಂಜೇಗೌಡ, ಕಾರ್ತಿಕ್‌ ಚೆಟ್ಟಿಯಾರ್‌, ಬಿ.ಎಂ. ಸಂದೇಶ್‌, ಕೆ.ವಿ.ಶಿವಕುಮಾರ್‌, ಪ್ರಕಾಶ್‌, ಬದ್ರು, ವಾಣಿ, ಮಲ್ಲೇಶ ಸ್ವಾಮಿ, ಹಿರೆಮಗಳೂರು ರಾಮಚಂದ್ರ, ಸಿಪಿಐನ ಗುಣಶೇಖರ್‌, ರಘು ಮುಂತಾದವರು ಪ್ರತಿಭಟನೆಯ ನೇತೃತ್ವವಹಿಸಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.