ಬಸವನಕೋಟೆ ಅರಣ್ಯದಲ್ಲಿ ಹುಲಿ ಸಂಚಾರ?
Team Udayavani, Apr 27, 2022, 5:17 PM IST
ಬಾಳೆಹೊನ್ನೂರು: ಬಾಳೆಹೊನ್ನೂರು ಸುತ್ತಮುತ್ತಲ ಹಲವು ಅರಣ್ಯ ಪ್ರದೇಶಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳ ಎರಡು ಪ್ರತ್ಯೇಕ ಜಾಗದಲ್ಲಿ ಎರಡು ಹುಲಿಗಳ ಒಡಾಟದ ದೃಶ್ಯಗಳು ದಾಖಲಾಗಿವೆ. ಇತ್ತೀಚೆಗೆ ನಡೆದ ಹುಲಿ ಗಣತಿಯಲ್ಲಿ ಅರಣ್ಯ ಇಲಾಖೆ ಹಲವು ಕಡೆಗಳಲ್ಲಿ ಗುಪ್ತವಾಗಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ಅವುಗಳಲ್ಲಿ ಬಾಳೆಹೊನ್ನೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಬಸವನಕೋಟೆ ಅರಣ್ಯ ಪ್ರದೇಶ ಹಾಗೂ ಸಾರಗೋಡು ಬಳಿಯಲ್ಲಿ ತಲಾ ಒಂದೊಂದು ಹುಲಿಗಳು ಕಾಡಿನೊಳಗೆ ನಿಧಾನವಾಗಿ ಹೆಜ್ಜೆ ಹಾಕುತ್ತಿರುವ ದೃಶ್ಯ ಸೆರೆಯಾಗಿದೆ.
ಹಲವು ಕಡೆಗಳಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಸಿಕ್ಕ ದೃಶ್ಯಗಳ ವಿವರಗಳನ್ನು ಇಲಾಖೆಯು ಕಂಪ್ಯೂಟರ್ಗೆ ವರ್ಗಾಯಿಸುವ ಕಾರ್ಯ ಮಾಡುತ್ತಿದೆ. ಮತ್ತಷ್ಟು ಮಾಹಿತಿ ಸಿಗುವ ಸಂಭವವಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಭಾಗದಲ್ಲಿ ಹುಲಿಗಳ ಓಡಾಟ ಕ್ಯಾಮೆರಾದಲ್ಲಿ ಸೆರೆಯಾಗಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಭಯ ಬೀಳುವ ಅಗತ್ಯವಿಲ್ಲ. ಹುಲಿಗಳು ಪ್ರಾಕೃತಿಕವಾಗಿ ಜೀವನ ನಡೆಸುವ ತಮ್ಮ ವ್ಯಾಪ್ತಿಯಲ್ಲಿ ದೊರೆಯುವ ಆಹಾರಗಳನ್ನು ಸ್ವೀಕರಿಸಿಕೊಂಡು ಇರುತ್ತವೆ. ಬಹುತೇಕ ಜಿಲ್ಲೆಯ ಅನೇಕ ದಟ್ಟ ಕಾಡಿನಲ್ಲಿ ಕಾಡುಪ್ರಾಣಿಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ರಕ್ಷಣೆಗಾಗಿ ಅರಣ್ಯ ಇಲಾಖೆ ಆಧುನಿಕ ಸ್ಪರ್ಶ ನೀಡಿ ಅಗತ್ಯ ಕ್ರಮ ಕೈಗೊಂಡಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ