ದುರಸ್ತಿಯಾಗದ ಚರಂಡಿ: ವಿದ್ಯಾರ್ಥಿಗಳಿಗೆ ಸಂಕಷ್ಟ!

Team Udayavani, Jan 4, 2020, 2:37 PM IST

cm–tdy-1

ಕಡೂರು: ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಎರಡು ವಿದ್ಯಾರ್ಥಿ ನಿಲಯಗಳ ಮುಂದೆ ಕಳೆದ 20 ದಿನಗಳಿಂದ ಶೌಚಾಲಯದ ನೀರು ಕೊಳಚೆ ನಿಂತು ದುರ್ವಾಸನೆ ಬೀರುತ್ತಿದೆ. ಆದರೆ, ಅಧಿಕಾರಿಗಳ ಮಧ್ಯೆ ಗೊಂದಲ ಉಂಟಾಗಿ ಚರಂಡಿ ದುರಸ್ತಿ ಮಾಡಿಸಲು ಸಾಧ್ಯವಾಗದ ಕಾರಣ ಹಾಸ್ಟೆಲ್‌ ಮಕ್ಕಳು ಮೂಗು ಮುಚ್ಚಿಕೊಂಡೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮೆಟ್ರಿಕ್‌ ನಂತರದ 2 ವಿದ್ಯಾರ್ಥಿ ನಿಲಯಗಳಿಂದ ಸುಮಾರು 250ಕ್ಕೂ ಹೆಚ್ಚಿನ ಮಕ್ಕಳು ನಿಲಯದಲ್ಲಿದ್ದಾರೆ. ಶೌಚಾಲಯದ ನೀರು ಮತ್ತು ಕಸ ಹೊರ ಹೋಗುವ ಪೈಪ್‌ ಲೈನ್‌ ಇಲ್ಲದ ಕಾರಣ ಮುಂದಿನ ರಸ್ತೆಗೆ ಬಿಡಲಾಗುತ್ತಿದೆ. ಇದರಿಂದ ಬಿಆರ್‌ಸಿ ಕಚೇರಿ, ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿ ನಿಲಯದೊಳಗೆ ತೆರಳಲು ಸಮಸ್ಯೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಬಿಸಿಎಂ ಅಧಿಕಾರಿ ದುರಸ್ತಿಗೆ ಮುಂದಾದಾಗ ಕ್ಷೇತ್ರ ಶಿಕ್ಷಾಣಾಧಿಕಾರಿ ನಮ್ಮ ಕಚೇರಿಯ ಮುಂದೆ, ಹಿಂದೆ ಪೈಪ್‌ಲೈನ್‌ ತೆಗೆದುಕೊಂಡು ಹೋಗಬೇಡಿ ಎಂದರು.

ಪುರಸಭೆ ಮುಖ್ಯಾಧಿಕಾರಿ ಹಾಗೂ ಸಂಬಂಧಿಸಿದ ವಾರ್ಡ್‌ ಸದಸ್ಯರು ಕೆಲಸ ಮಾಡಬೇಡಿ. ಪುರಸಭೆಯಿಂದ ಮಾಡಿಸುತ್ತೇವೆ ಎಂದು ಹೇಳಿದ್ದರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಇಲ್ಲಿಯವರೆಗೂ ಅನೇಕ ಬಾರಿ ಮನವಿ ಮಾಡಿದರೂ ಯಾರೊಬ್ಬರು ಸಹ ಸ್ಪಂದಿಸುತ್ತಿಲ್ಲ ಎಂದು ಬಿಸಿಎಂ ಅಧಿಕಾರಿ ನಾಗವಲ್ಲಿ ತಿಳಿಸಿದರು. ಅಲ್ಲದೇ, ಒಂದೆರಡು ದಿನಗಳು ಕಳೆದರೆ ಇಲಾಖೆಯಿಂದಲೇ ಗುಂಡಿಯನ್ನು ಮುಚ್ಚಿಸುವುದಾಗಿ ನಾಗವಲ್ಲಿ ಹೇಳಿದರು. ಕಳೆದ 20 ದಿನಗಳ ಹಿಂದೆ ದುರಸ್ತಿಗೆ ಗುಂಡಿ ತೆಗೆಯಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಮತ್ತೂಂದು ವಿದ್ಯಾರ್ಥಿ ನಿಲಯ ಇಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಬಾಲಕಿಯರು ಪ್ರತಿ ದಿನ ಚರಂಡಿ ದಾಟುವುದೇ ಕಷ್ಟವಾಗಿದೆ. ಗ್ಯಾಸ್‌ ಸಿಲಿಂಡರ್‌ ತರುವುದು, ತರಕಾರಿ, ರೇಷನ್‌ ಒಳಗೆ ತರುವುದು ಸಮಸ್ಯೆಯಾಗಿದೆ. ನೀರು ದುರ್ವಾಸನೆ ಬೀರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಮಸ್ಯೆಯಾಗಿದೆ ಎಂಬ ಅಳಲನ್ನು ಬಾಲಕಿಯರು ತೋಡಿಕೊಂಡರು.

ಬಿಆರ್‌ಸಿ ಕಚೇರಿಗೆ ತೆರಳುವ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಶಿಕ್ಷಕ ವೃಂದ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಧಿಕಾರಿಗಳ ಮುಸುಕಿನ ಗುದ್ದಾಟದಿಂದ ಬಾಲಕಿಯರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವವರೇ ಇಲ್ಲವೇ ಎಂಬ ಪ್ರಶ್ನೆ ಪೋಷಕರಿಂದ ಕೇಳಿ ಬರುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು, ಇಲಾಖೆಯ ಮುಖ್ಯಸ್ಥರು ಗುಂಡಿ ಮುಚ್ಚಿಸಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಲಿ ಎಂಬ ಮಾತು ಕೇಳಿ ಬರುತ್ತಿದೆ.

-ಏ.ಜೆ.ಪ್ರಕಾಶ್‌ ಮೂರ್ತಿ

ಟಾಪ್ ನ್ಯೂಸ್

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೆ ದಂಡ

Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೂ ಬಿತ್ತು ದಂಡ

ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

Chikmagalur: ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

Chikkamagaluru: ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಪತ್ತೆ

Chikkamagaluru: ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಪತ್ತೆ

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

Tragedy: ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.