ಚಾರ್ಮಾಡಿ ಘಾಟ್ ನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು, ಮತ್ತೋರ್ವ ಗಂಭೀರ
Team Udayavani, Dec 5, 2022, 5:27 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.
ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22 )ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.