ವಸತಿ ರಹಿತರ ಪ್ರತಿಭಟನೆ

ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ನಿವೇಶನಕ್ಕೆ ಆಗ್ರಹ

Team Udayavani, Sep 27, 2019, 3:09 PM IST

Udayavani Kannada Newspaper

ಚಿಕ್ಕಮಗಳೂರು: ಜಿಲ್ಲೆಯ ವಸತಿ ರಹಿತರಿಗೆ ನಿವೇಶನ ಮತ್ತು ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ಆವರಣದಿಂದ ಎಂಜಿ ರಸ್ತೆ ಮೂಲಕ ಮೆರವಣಿಗೆಯಲ್ಲಿ ಬಂದ ಮಹಿಳೆಯರು ಸೇರಿದಂತೆ ಹಲವಾರು ಕಾರ್ಯಕರ್ತರು, ಆಜಾದ್‌ ಪಾರ್ಕ್‌ನಲ್ಲಿ ಧರಣಿ ನಡೆಸಿದರು.

ಈ ವೇಳೆ ಭೂಮಿ, ನಿವೇಶನ ನೀಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಜಿಲ್ಲೆಯಲ್ಲಿ ಸಾವಿರಾರು ಎಕರೆ ಭೂಮಿಯನ್ನು ಬಲಾಡ್ಯರು ಒತ್ತುವರಿ ಮಾಡಿಕೊಂಡು ವಿಲಾಸಿ ಜೀವನ ನಡೆಸುತ್ತಿದ್ದಾರೆ. ಆದರೆ, ಸಹಸ್ರಾರು ಸಂಖ್ಯೆಯ ಬಡವರು ನಿವೇಶನ, ಮನೆ ಇಲ್ಲದೆ ನಿರ್ಗತಿಕರಾಗಿದ್ದಾರೆ.

ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಬಲಾಡ್ಯರ ಒತ್ತುವರಿ ಭೂಮಿಯನ್ನು ತೆರವು ಮಾಡಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು. ದಲಿತರಿಂದ ಬಲಾಡ್ಯರು ಕಬಳಸಿರುವ ಭೂಮಿಯನ್ನು ಅವರಿಗೆ ವಾಪಸ್‌ ಕೊಡಿಸಬೇಕು ಎಂದು ಆಗ್ರಹಿಸಿದರು. ಬಡವರಿಗೆ ಭೂಮಿ ಮತ್ತು ವಸತಿ ಕಲ್ಪಿಸಲು ರಾಜ್ಯ ಮಟ್ಟದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಆಗಿದೆ. ಭೂ, ವಸತಿ ರಹಿತರಿಗೆ ಭೂಮಿ ನೀಡಲು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಸಮಿತಿ ತೀರ್ಮಾನಿಸಿದೆ. ಈಗ ಬಂದಿರುವ ಹೊಸ ಸರ್ಕಾರಕ್ಕೂ ಈ ಸಮಿತಿಯ ಶಿಫಾರಸ್ಸು ಮನದಟ್ಟು ಮಾಡಲಾಗಿದೆ. ಆದರೆ, ಈವರೆಗೂ ಯಾರೊಬ್ಬರಿಗೂ ವಸತಿ, ನಿವೇಶನ ನೀಡಲಿಲ್ಲ ಎಂದು ಆರೋಪಿಸಿದರು.

ಆಲ್ದೂರು ಹೋಬಳಿ ಸತ್ತಿಹಳ್ಳಿ ಸರ್ವೆ ನಂಬರ್‌ 81ರಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಿರುವವರಿಗೆ ಹಕ್ಕುಪತ್ರ ಹಾಗೂ ಭೂ ಮಂಜೂರಾತಿ ನೀಡಬೇಕು. ಲಕ್ಯಾ ಹೋಬಳಿ ಲಕ್ಕಮ್ಮನಹಳ್ಳಿ ಹಾಗೂ ಆವತಿ ಹೋಬಳಿ ದಾನಿಹಳ್ಳಿ ಭೂರಹಿತರಿಗೆ ಭೂ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಮೂಡಿಗೆರೆ ತಾಲೂಕಿನ ಸಂಸ್ಥೆ, ಕೆಳಗೂರು, ಕುಂದೂರು, ನಾಗನಮಕ್ಕಿ, ಕೊಪ್ಪ ತಾಲೂಕಿನ ಹೊಸಕೊಪ್ಪ, ಜಯಪುರ, ಕಡೂರು ಕಸಬಾ ಹೋಬಳಿಯಲ್ಲಿ ದಲಿತರಿಗೆ ಕೂಡಲೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಕುಮಾರ್‌ ಸಮತಳ, ರಾಜರತ್ನಂ, ನಾಗರಾಜು, ಕೌಳಿರಾಮು, ಕೃಷ್ಣಮೂರ್ತಿ, ಗಣೇಶ್‌, ಗೌಸ್‌ ಮೊಯುದ್ದೀನ್‌, ವಸಂತಕುಮಾರ್‌ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.