Udayavni Special

ಬಿಎಸ್ಸೆನ್ನೆಲ್ ಟವರ್‌ ದುರಸ್ತಿ ಆರಂಭ

ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ 200ಕ್ಕೂ ಹೆಚ್ಚು ಟವರ್‌ಗಳಿಗೆ ಮರು ಚಾಲನೆ

Team Udayavani, Aug 21, 2019, 5:27 PM IST

21-Agust-28

ಚಿಕ್ಕಮಗಳೂರು: ಮಲೆನಾಡು ಭಾಗದ ಅತಿವೃಷ್ಟಿ ಪ್ರದೇಶದಲ್ಲಿ ಹಾಳಾದ ಬಿಎಸ್‌ಎನ್‌ಎಲ್ ಲೈನ್‌ ದುರಸ್ತಿ ಕಾರ್ಯವನ್ನು ಡಿಜಿಎಂ ಕೆ.ಎಲ್.ಶಿವಣ್ಣ ವೀಕ್ಷಿಸಿದರು.

ಚಿಕ್ಕಮಗಳೂರು: ಧಾರಾಕಾರ ಮಳೆಯಿಂದ ಉಂಟಾದ ಭೂ ಕುಸಿತದ ಪರಿಣಾಮ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಬಿಎಸ್‌ಎನ್‌ಎಲ್ ಟವರ್‌ಗಳು ಕಾರ್ಯ ಸ್ಥಗಿತ ಗೊಳಿಸಿದ್ದು, ಅವುಗಳಿಗೆ ಮರು ಚಾಲನೆ ನೀಡುವ ಕೆಲಸವನ್ನು ಬಿರುಸಿನಿಂದ ಕೈಗೊಳ್ಳಲಾಗಿದೆ.

ಬಿಎಸ್‌ಎನ್‌ಎಲ್ನ ಡೆಪ್ಯೂಟಿ ಜನರಲ್ ಮ್ಯಾನೇಜರ್‌ ಕೆ.ಎಲ್.ಶಿವಣ್ಣ, ಎಜಿಎಂ ಪ್ರಸನ್ನಕುಮಾರ್‌, ಮೊಬೈಲ್ ಎಸ್‌ಡಿಇ, ಗೋಪಾಲಕೃಷ್ಣ ಮತ್ತವರ ತಂಡ ಕಳೆದ 6 ದಿನಗಳಿಂದ ಮೂಡಿಗೆರೆ, ಕಳಸ, ಬಾಳೆಹೊನ್ನೂರು ಮತ್ತು ಇತರ ಭಾಗದಲ್ಲಿದ್ದು, ಸ್ವತಃ ಮೇಲುಸ್ತುವಾರಿ ವಹಿಸಿ ತೀವ್ರ ಹಾಳಾಗಿರುವ ಲೈನ್‌ಗಳನ್ನು ಮರು ಜೋಡಿಸುವ ಕೆಲಸ ಕೈಗೊಂಡಿದ್ದಾರೆ.

ಮಳೆ, ಪ್ರವಾಹ ಮತ್ತು ಭೂಕುಸಿತದ ಸಂದರ್ಭದಲ್ಲಿ 35 ಕಡೆಗಳಲ್ಲಿ ಓಎಫ್ಸಿ ಕೇಬಲ್ ಹಾನಿ ಸಂಭವಿಸಿದೆ. ವಿದ್ಯುತ್‌, ಡಿಸೇಲ್ ಕೊರತೆಯಿಂದ 200ಕ್ಕೂ ಹೆಚ್ಚು ಟವರ್‌ ಗಳು ಕಾರ್ಯ ನಿಲ್ಲಿಸಿದ್ದವು ಎಂದು ಡಿಜಿಎಂ ಶಿವಣ್ಣ ತಿಳಿಸಿದ್ದಾರೆ.

ಬಿಎಸ್‌ಎನ್‌ಎಲ್ಗೆ ವಿದ್ಯುತ್‌ ಸಂಪರ್ಕ ಅತ್ಯವಶ್ಯಕವಾಗಿದೆ. ಆದರೆ, ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಸಾಕಷ್ಟು ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿ ಸಂಭವಿಸಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಟವರ್‌ಗಳು ಕಾರ್ಯನಿರ್ವಹಿಸದಂತಾಗಿದೆ. ಮಲೆನಾಡು ಭಾಗದ ಜನರು ಬಿಎಸ್‌ಎನ್‌ಎಲ್ ಸಂಪರ್ಕ ಅಗತ್ಯವಾಗಿ ಬೇಕಿದೆ ಎಂದು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಂಸ್ತೆಯು ಹಣಕಾಸಿನ ಸಮಸ್ಯೆ ಅನುಭವಿಸುತ್ತಿದೆ. ಆದರೂ, ಸಾಧ್ಯವಾದಷ್ಟು ಬೇಗನೆ ಸಂಪರ್ಕ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬಿಎಸ್‌ಎನ್‌ಎಲ್ನ ಅಧಿಕಾರಿಗಳು, ನೌಕರರು ಮತ್ತು ಗುತ್ತಿಗೆ ನೌಕರರೆಲ್ಲರ ಅವಿರತ ಶ್ರಮ ಮತ್ತು ಸಹಕಾರದೊಂದಿಗೆ ಹಗಲಿರುಳು ಕಾರ್ಯ ನಿರ್ವಹಿಸಿ 4 ದಿನದಲ್ಲಿ ಬಹುತೇಕ ಮೊಬೈಲ್ ಸಂಪರ್ಕವನ್ನು ಸರಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಓಎಫ್ಸಿ ಕೇಬಲ್ ಹಾನಿಯಾಗಿದ್ದು, ಸರಿಪಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಬಿಎಸ್‌ಎನ್‌ಎಲ್ನಲ್ಲಿ ಸುಮಾರು 7 ತಿಂಗಳಿನಿಂದ ಗುತ್ತಿಗೆ ನೌಕರರಿಗೆ ವೇತನ ನೀಡಲಾಗಿಲ್ಲ. ವಾಹನಗಳಿಗೆ, ಜನರೇಟರ್‌ಗೆ ಡಿಸೇಲ್ ಮತ್ತು ಅಧಿಕಾರಿಗಳು ಕೆಲಸ ಮಾಡಲು ಅಗತ್ಯವಾದ ಉಪಕರಣ ಖರೀದಿಗೆ ಮತ್ತು ಲೇಬರ್‌ಗಳ ವೆಚ್ಚ ಪಾವತಿಗೆ ಬಿಎಸ್‌ಎನ್‌ಎಲ್ನಿಂದ ಯಾವುದೇ ಹಣ ಬಿಡುಗಡೆಯಾಗದ ಈ ಸಂದರ್ಭದಲ್ಲೂ ಕೂಡ ಬಿಎಸ್‌ಎನ್‌ಎಲ್ ಅಧಿಕಾರಿಗಳು ತಮ್ಮ ಸ್ವಂತ ಹಣ ಖರ್ಚು ಮಾಡುವ ಮೂಲಕ ಇಂತಹ ಕಠಿಣ ಸಂದರ್ಭದಲ್ಲಿ ಪೂರ್ಣ ಸಹಕಾರ ನೀಡಿ ಸೇವೆ ಕೊಡುತ್ತಿದ್ದಾರೆಂದು ತಿಳಿಸಿದ್ದಾರೆ.

ಓಎಫ್ಸಿ ಕೇಬಲ್, ಭೂಗತ ಕೇಬಲ್ ಹಾನಿ ಮತ್ತು ಟವರ್‌ಗಳ ತಾಂತ್ರಿಕ ತೊಂದರೆ ಯಿಂದಾಗಿ ಬಿಎಸ್‌ಎನ್‌ಎಲ್ಗೆ ಸುಮಾರು 51ಲಕ್ಷ ರೂ.ಗೂ ಅಧಿಕ ನಷ್ಟವಾಗಿದೆ. ಇದರಿಂದ ಎಲ್ಲಾ ಪ್ರದೇಶಗಳಲ್ಲಿ ನೆಟ್ವರ್ಕ್‌ ಸಮಸ್ಯೆ ತೀವ್ರವಾಗಿತ್ತು. ಜಿಲ್ಲಾಧಿಕಾರಿಗಳು ತಮ್ಮ ನೆರೆ ಪರಿಹಾರ ನಿಧಿಯಿಂದ ತಕ್ಷಣ 3,000 ಲೀ. ಡಿಸೇಲ್ ಬಿಡುಗಡೆ ಗೊಳಿಸಿರುವುದರಿಂದ ಸಾಕಷ್ಟು ಪ್ರದೇಶದಲ್ಲಿ ಸಂಪರ್ಕ ನೀಡಲು ಸಾಧ್ಯವಾಯಿತು.
ಶಿವಣ್ಣ, ಡಿಜಿಎಂ, ಬಿಎಸ್ಸೆನ್ನೆಲ್

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯಲ್ಲಿ ಮತ್ತೆ ನಾಲ್ಕು ಕೋವಿಡ್ 19 ಪ್ರಕರಣ

ನಿಜಾಮುದ್ದೀನ್ ನಿಂದ ಬಂದ ನಾಲ್ವರಿಗೆ ಸೋಂಕು: ಬೆಳಗಾವಿಯಲ್ಲಿ ಮತ್ತೆ ನಾಲ್ಕು ಹೊಸ ಪ್ರಕರಣ

sm-tdy-1

ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಸೂಚನೆ

ಜಿಲ್ಲೆಯಲ್ಲಿಲ್ಲ ಕೊರೊನಾ ಪ್ರಕರಣ: ಸಿ.ಟಿ. ರವಿ

ಜಿಲ್ಲೆಯಲ್ಲಿಲ್ಲ ಕೋವಿಡ್ 19 ಪ್ರಕರಣ: ಸಿ.ಟಿ. ರವಿ

ಮನೋವೈದ್ಯರಿಂದ ಕೌನ್ಸೆಲಿಂಗ್‌

ಮನೋವೈದ್ಯರಿಂದ ಕೌನ್ಸೆಲಿಂಗ್‌

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌