ಜನಸಂಖ್ಯಾ ನಿಯಂತ್ರಣದ ಅರಿವು ಅಗತ್ಯ

ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಭಿಮತ

Team Udayavani, Jul 12, 2019, 3:18 PM IST

ಚಿಕ್ಕಮಗಳೂರು: ನಗರದಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಉದ್ಘಾಟಿಸಿದರು.

ಚಿಕ್ಕಮಗಳೂರು: ಜನಸಾಮಾನ್ಯರಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವುದು ತೀರಾ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿವಿಧ ನರ್ಸಿಂಗ್‌ ಶಾಲೆಗಳು ಹಾಗೂ ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಶ್ರಾಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದೇಶ ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಮೊದಲನೇ ಸ್ಥಾನ ಪಡೆಯುವ ದಿನಗಳು ಸನಿಹವಿದೆ. ಆದ್ದರಿಂದ, ಜನಸಂಖ್ಯಾ ನಿಯಂತ್ರಣದ ಕುರಿತು ಅರಿವು ಕಾರ್ಯಕ್ರಮಗಳಾಗಬೇಕು. ಜನಸಂಖ್ಯಾ ಸ್ಫೋಟದಿಂದ ಬಡತನ, ನೀರುದ್ಯೋಗ, ವಸತಿ ಹೀಗೆ ಹಲವಾರು ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಹೇಳಿದರು.

ಬೃಹತ್‌ ಗಾತ್ರದಲ್ಲಿ ಬೆಳೆಯುತ್ತಿರುವ ಜನಸಂಖ್ಯೆಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ಭಾರತವನ್ನು ಊಹಿಸಿಕೊಳ್ಳಲು ಅಸಾಧ್ಯವಾದ ಜನಸಂಖ್ಯೆಯನ್ನು ಕಾಣಬಹುದು. ಅನಕ್ಷರತೆಯೇ ಜನಸಂಖ್ಯಾ ಸ್ಫೋಟಕ್ಕೆ ಕಾರಣವಾಗಿದೆ. ಆದ್ದರಿಂದ, ಪ್ರತಿಯೊಬ್ಬ ಯುವಕ-ಯುವತಿಯರು ಜನಸಂಖ್ಯೆ ನಿಯಂತ್ರಣದ ಕುರಿತು ಹಾಗೂ ಜನಸಂಖ್ಯಾ ಸ್ಫೋಟದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿಸಿ ಜಾಗೃತಿ ಮೂಡಿಸಿದಾಗ ಇಂತಹ ಕಾರ್ಯಕ್ರಮಗಳು ಸಫಲವಾಗುತ್ತವೆ ಎಂದು ಹೇಳಿದರು.

ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್ ಕುಮಾರ್‌ ಮಾತನಾಡಿ, ಭಾತರದಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಎಷ್ಟೇ ಅರಿವು ಕಾರ್ಯಕ್ರಮ ಹಮ್ಮಿಕೊಂಡರೂ ಸಹ ಜನಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನ್ನಿಟ್ಟಿನಲ್ಲಿ ಆಶಾಕಾರ್ಯಕರ್ತೆಯರು ಮನೆ ಮನೆಗೂ ಬೇಟಿ ನೀಡಿ ಜನಸಂಖ್ಯಾ ನ್ಪೋಟದ ಬಗ್ಗೆ ಮಾಹಿತಿ ನೀಡಬೇಕಾಗಿದೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಅರಿವು ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ನೀಡಬೇಕು. ಆದರೆ ಶಿಕ್ಷಣವಂತರೆ ಅನೇಕ ತಪ್ಪುಗಳನ್ನು ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ. ಆದ್ದರಿಂದ, ವಿದ್ಯಾರ್ಥಿಗಳು ಅರಿವು ಕಾರ್ಯಕ್ರಮಗಳ ಬಗ್ಗೆ ಶಿಕ್ಷಣ ಹೊಂದಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ವಿಶ್ವ ಸಂಸ್ಥೆಯು ಜನಸಂಖ್ಯೆ ನಿಯಂತ್ರಣ ಮಾಡುವ ಉದ್ದೇಶದಿಂದ 1998ರಲ್ಲಿ ಜನಸಂಖ್ಯೆ ದಿನವನ್ನು ಘೋಷಿಸಿದ ನಂತರ ಹಲವಾರು ಸಂಘ ಸಂಸ್ಥೆಗಳು ಜನಸಂಖ್ಯೆ ನಿಯಂತ್ರಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿವೆ. ಆದರೆ ಅಲ್ಲಿಂದ ಇಲ್ಲಿಯವರೆಗೂ ಜನಸಂಖ್ಯೆ ಹೆಚ್ಚಾಳವಾಗುತ್ತಿದೆಯೋ ಹೊರೆತು ನಿಯಂತ್ರಣವಾಗಿತ್ತಿಲ್ಲ ಎಂದು ವಿಷಾದಿಸಿದರು.

ರಾಜಕೀಯ, ಉದ್ಯೋಗ, ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ಮೀಸಲಾತಿ ಇದೆ. ಅದೇ ರೀತಿ, ಭೂಮಿತಾಯಿಗೂ ಶೇ.33ರಷ್ಟು ಅರಣ್ಯ ಪ್ರದೇಶ ಹೊಂದಲು ಅವಕಾಶವಿದೆ. ಆದರೆ, ಮನುಷ್ಯನ ಸ್ವಾರ್ಥದಿಂದ ಇಂದು ಶೇ.13.14ರಷ್ಟು ಮಾತ್ರ ಅರಣ್ಯ ಪ್ರದೇಶವನ್ನು ಹೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್‌ಟಿಜೆ ಕಾಲೇಜಿನ ಉಪನ್ಯಾಸಕ ಚಂದ್ರಶೇಖರ್‌ ಉಪನ್ಯಾಸ ನೀಡಿದರು. ಸಭೆಯಲ್ಲಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಮಲ್ಲಿಕಾರ್ಜುನಪ್ಪ, ಜಿಲ್ಲಾ ಆರ್‌.ಸಿ.ಎಚ್.ಅಧಿಕಾರಿ ಡಾ.ಕೆ.ಭರತ್‌ಕುಮಾರ್‌, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್‌.ಅಶೋಕ್‌ ಬಾಬು, ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಗೀತಾ, ಬಿಇಒ ವೆಂಕಟರಾಮು ಮತ್ತಿತರರು ಉಪಸ್ಥಿತರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ