ಪ್ರವಾಸಿ ತಾಣ ಅಭಿವೃದ್ಧಿಗೆ 80ಕೋಟಿಗೂ ಹೆಚ್ಚು ಅನುದಾನ

ಇತಿಹಾಸ ಪ್ರಸಿದ್ಧ ಅಯ್ಯನಕೆರೆಗೆ ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ರವಿ

Team Udayavani, Oct 3, 2019, 1:31 PM IST

3-Sepctember-12

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 80 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದರು.

ತುಂಬಿ ಕೋಡಿ ಬಿದ್ದಿರುವ ಇತಿಹಾಸ ಪ್ರಸಿದ್ಧ ಅಯ್ಯನಕೆರೆಗೆ ಬುಧವಾರ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿದ್ದು, ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅಯ್ಯನಕೆರೆ ಸಮಗ್ರ ಅಭಿವೃದ್ಧಿ ಹಾಗೂ ಬೋಟಿಂಗ್‌ ವ್ಯವಸ್ಥೆಗೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಕೆರೆಯಲ್ಲಿ ಜಿಟ್ಟಿ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ಖಾಸಗಿಯವರಿಂದ ಬೋಟಿಂಗ್‌ ವ್ಯವಸ್ಥೆ ಕಲ್ಪಿಸಲು ಟೆಂಡರ್‌ ಕರೆಯಲಾಗುವುದು ಎಂದರು.

ನಗರದ ಬಸವನಹಳ್ಳಿ ಕೆರೆ ಸಮಗ್ರ ಅಭಿವೃದ್ಧಿಗೆ 10 ಕೋಟಿ, ಕೋಟೆ ಕೆರೆಗೆ 2 ಕೋಟಿ, ಹಿರೇಕೊಳಲೆ ಕೆರೆಗೆ 1.50 ಕೋಟಿ, ಹಿರೇಮಗಳೂರಿಗೆ 3 ಕೋಟಿ, ಸೀತಾಳಯ್ಯನಗಿರಿಗೆ 1, ಮಾಣಿಕ್ಯದಾರಾಕ್ಕೆ 2 ಕೋಟಿ, ದೇವೀರಮ್ಮ ದೇವಾಲಯ ಅಭಿವೃದ್ಧಿಗೆ 4, ಬೋಳರಾಮೇಶ್ವರ ದೇವಾಲಯಕ್ಕೆ 2 ಕೋಟಿ, ಶಕುನಿ ರಂಗನಾಥ ಸ್ವಾಮಿ ದೇವಾಲಯ, ಅಕ್ಕನಾಗಲಾಂಬಿಕಾ ದೇವಿ ಗದ್ದುಗೆ, ಸಿರಿಮನೆ ಫಾಲ್ಸ್‌, ದುಬಾದುಬಿ ಫಾಲ್ಸ್‌ ಸೇರಿದಂತೆ ವಿವಿಧ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ 80 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಕಡೂರು, ಚಿಕ್ಕಮಗಳೂರು ಹಾಗೂ ತರೀಕೆರೆ ತಾಲ್ಲೂಕುಗಳ 167 ಕೆರೆಗಳಿಗೆ ಭದ್ರಾ ಜಲಾಶಯದಿಂದ ನೀರು ಹರಿಸುವ 1200 ಕೋಟಿ ರೂ.ಗಳ ಪ್ರಸ್ತಾವನೆ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಲಿದೆ. ಈಗಾಗಲೇ ಈ ಕುರಿತು ಇಲಾಖೆಯಲ್ಲಿ ಚರ್ಚಿಸಲಾಗಿದೆ. ಈ ತಿಂಗಳಲ್ಲಿಯೇ ಮಂಡಳಿಯ ಸಭೆಯಲ್ಲಿ ವಿಚಾರ ಮಂಡಿಸಲಾಗುವುದು. ಅಲ್ಲಿ ಅನುಮೋದನೆ ದೊರೆತ ನಂತರ ಸಚಿವ ಸಂಪುಟ ಸಭೆಗೆ ವಿಷಯ ಬರಲಿದೆ. ಈ ಯೋಜನೆಗೆ ಮಂಜೂರಾತಿ ದೊರೆತಲ್ಲಿ ಸದಾಕಾಲ ಬರಗಾಲಕ್ಕೆ ತುತ್ತಾಗುವ 3 ತಾಲ್ಲೂಕುಗಳ 167 ಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಕೆರೆಗಳಲ್ಲಿ ಅಯ್ಯನಕೆರೆ ಮತ್ತು ಮದಗದ ಕೆರೆಯನ್ನೂ ಸೇರಿಸಲಾಗಿದೆ ಎಂದು ತಿಳಿಸಿದರು.

ಪ್ರತಿವರ್ಷದಂತೆ ಈ ವರ್ಷವು ಅಯ್ಯನಕೆರೆ ತುಂಬಿ ಹರಿಯುತ್ತಿದೆ. ಅದಕ್ಕಾಗಿ ಪೂಜೆ ನೆರವೇರಿಸಲಾಗಿದೆ. ಇದೆ ರೀತಿಯಾಗಿ ಮುಂದಿನ ದಿನಗಳಲ್ಲೂ ಕೆರೆ ಕಟ್ಟೆಗಳು ತುಂಬಿ ಹರಿಯಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು.

ವಿಧಾನ ಪರಿಷತ್‌ ಉಪ ಸಭಾಪತಿ ಎಸ್‌. ಎಲ್‌.ಧರ್ಮೇಗೌಡ, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಬೋಜೆಗೌಡ, ಜಿಪಂ ಉಪಾಧ್ಯಕ್ಷ ವಿಜಯಕುಮಾರ್‌, ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷ ದಾಕ್ಷಾಯಣಮ್ಮ, ಉಪಾಧ್ಯಕ್ಷ ಶಾಮಲಾಬಾಯಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.