ನೆರೆ; ಪ್ರವಾಸಿಗರ ಸಂಖ್ಯೆ ಇಳಿಮುಖ

ಕಳೆದ ವರ್ಷ 55.47 ಲಕ್ಷ ಪ್ರವಾಸಿಗರು•ಈ ವರ್ಷ 48.75 ಲಕ್ಷ ಪ್ರವಾಸಿಗರು ಭೇಟಿ

Team Udayavani, Sep 18, 2019, 4:07 PM IST

18-Sepctember-11

ಎಸ್‌.ಕೆ.ಲಕ್ಷ್ಮೀ ಪ್ರಸಾದ್‌

ಚಿಕ್ಕಮಗಳೂರು: ಮಳೆಯ ಅಬ್ಬರ ಮತ್ತು ಭೂ ಕುಸಿತ ಉಂಟಾಗಿದ್ದರಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ ಅಂತ್ಯಕ್ಕೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.

ಕಳೆದ ವರ್ಷ ಶೃಂಗೇರಿ, ಕಳಸಾ, ಹೊರನಾಡು, ಬಾಳೆಹೊನ್ನೂರು ರಂಭಾಪುರಿ ಮಠ, ಇನಾಂ ದತ್ತಾತ್ರೇಯ ಪೀಠ, ಕೆಮ್ಮಣ್ಣು ಗುಂಡಿ ಮತ್ತು ಚಿಕ್ಕಮಗಳೂರು ಸುತ್ತಮುತ್ತಲ ಪ್ರದೇಶಗಳಿಗೆ 55.47 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದರು. ಈ ವರ್ಷ 48.75 ಲಕ್ಷ ಪ್ರವಾಸಿಗರು ಭೇಟಿ ನೀಡಿ ಯಾತ್ರಾ ಸ್ಥಳ ಮತ್ತು ಹೃನ್ಮನ ತಣಿಸುವ ಹಚ್ಚ ಹಸಿರಿನ ಗಿರಿ ಶ್ರೇಣಿಗಳನ್ನು ವೀಕ್ಷಿಸಿದ್ದಾರೆ.

ಕಳೆದ ವರ್ಷ ಶೃಂಗೇರಿ ಶಾರದಾ ಪೀಠಕ್ಕೆ ಜನವರಿಯಿಂದ ಡಿಸೆಂಬರ್‌ವರೆಗೆ 27.75 ಲಕ್ಷ ಪ್ರವಾಸಿಗರು, ಕಳಸಕ್ಕೆ 2.70 ಲಕ್ಷ, ಹೊರನಾಡಿಗೆ 17.83 ಲಕ್ಷ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ 10.17 ಲಕ್ಷ, ದತ್ತಪೀಠಕ್ಕೆ 2.39 ಲಕ್ಷ, ಕೆಮ್ಮಣ್ಣು ಗುಂಡಿಗೆ 1.21 ಲಕ್ಷ, ಹಿರೇಮಗಳೂರು, ಬೆಳವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ 44.975 ಲಕ್ಷ ಹಾಗೂ ಜಿಲ್ಲೆಗೆ ದೇಶೀಯ ಪ್ರವಾಸಿಗರು 62.50 ಲಕ್ಷ ಹಾಗೂ ವಿದೇಶಿಯರು 2057 ಮಂದಿ ಭೇಟಿ ನೀಡಿದ್ದರು.

ಈ ವರ್ಷ ಜನವರಿಯಿಂದ ಆಗಸ್ಟ್‌ ಅಂತ್ಯದವರೆಗೆ ಶೃಂಗೇರಿಗೆ 32 ಲಕ್ಷ, ಹೊರನಾಡು 13.5 ಲಕ್ಷ, ಕಳಸಕ್ಕೆ 2.10 ಲಕ್ಷ, ದತ್ತಪೀಠಕ್ಕೆ 2.44 ಲಕ್ಷ, ಚಿಕ್ಕಮಗಳೂರು ಸುತ್ತಮುತ್ತಲಿನ ಪ್ರವಾಸಿ ತಾಣ ಮತ್ತು ಯಾತ್ರಾ ಸ್ಥಳಗಳಿಗೆ 56,000, ಕೆಮ್ಮಣ್ಣು ಗುಂಡಿಯ ಕೃಷ್ಣರಾಜೇಂದ್ರ ಗಿರಿಧಾಮಕ್ಕೆ 1.02 ಲಕ್ಷ ಪ್ರವಾಸಿಗರು ಭೇಟಿ ಕೊಟ್ಟಿದ್ದಾರೆ.

ಮಳೆಯ ಅಬ್ಬರಕ್ಕೆ ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿದಿದ್ದರಿಂದ ಕೆಲವು ದಿನಗಳ ಕಾಲ ಈ ಮಾರ್ಗದಲ್ಲಿ ಜಿಲ್ಲಾಡಳಿತ ವಾಹನ ಸಂಚಾರ ನಿಷೇಧಿಸಿತ್ತು. ಬಳಿಕ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಬಿಡುವು ನೀಡಿದ್ದ ಮಳೆ ಮುಂದುವರಿದ ಪರಿಣಾಮ ಮತ್ತೆ ಗುಡ್ಡ ಕುಸಿದಿದ್ದರಿಂದ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಬೆಳಗಿನಿಂದ ಸಂಜೆ ವರೆಗೆ ಅವಕಾಶ ನೀಡಲಾಗಿದೆ. ಆದರೆ, ಭಾರೀ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಗಳು ಪ್ರವಾಸಿಗರಿಗೆ ಮುದ ನೀಡುವ ಸ್ಥಳಗಳಾಗಿವೆ. ದತ್ತಪೀಠ ಮಾರ್ಗದ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದರಿಂದ ಕೆಲ ದಿನ ಪ್ರವಾಸಿಗರ ಸಂಚಾರ ನಿಷೇಧಿಸಲಾಗಿತ್ತು. ಕಳಸಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ಮೇಲೆ ನೀರು ಹರಿದು ಆಗಾಗ ಸಂಪರ್ಕ ಕಡಿತಗೊಂಡಿತ್ತು. ಅನೇಕ ಗ್ರಾಮಗಳಿಗೂ ಸಂಪರ್ಕ ಕಲ್ಪಿಸುವ ರಸ್ತೆ ತುಂಡಾಗಿ ಹಲವರು ಸಂಚಾರಕ್ಕಾಗಿ ಪ್ರಯಾಸ ಪಡಬೇಕಾಗಿತ್ತು.

ಮಲೆನಾಡು ಭಾಗದ ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚು ಹಾನಿ ಉಂಟಾಗಿದ್ದರೆ, ಬಲ್ಲಾಳರಾಯನ ದುರ್ಗ ಬಿರುಕು ಬಿಟ್ಟಿದೆ. ವರ್ಷಧಾರೆ ಜತೆಗೆ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಸೇರಿದಂತೆ ಪ್ರಮುಖ ಪ್ರವಾಸಿ ಸ್ಥಳಗಳ ರಸ್ತೆಯಲ್ಲಿ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಹವಾಮಾನ ಪರಿಸ್ಥಿತಿ ಸುಧಾರಿಸಿದರೆ ಮುಂದಿನ ತಿಂಗಳಿಂದ ಪ್ರವಾಸಿಗರ ಆಗಮನ ಹೆಚ್ಚಾಗುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.