ಬರಿದಾದ ಜೀವನದಿ ಕೃಷ್ಣ ಒಡಲು

ಮಹಾರಾಷ್ಟ್ರ ಕೃಪೆಗೆ ಕಾಯ್ದ ಜನರು•ವರತಿ ನೀರು ಬಸಿದು ಅಗತ್ಯ ಪೂರೈಕೆ

Team Udayavani, Apr 27, 2019, 10:31 AM IST

27-April-4

ಚಿಕ್ಕೋಡಿ: ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿದ್ದು, ಪಾತ್ರದಲ್ಲಿ ನೀರಿಗಾಗಿ ರೈತ ತನ್ನ ಜಾನುವಾರುಗಳೊಂದಿಗೆ ಅರಸುತ್ತಿರುವುದು.

ಚಿಕ್ಕೋಡಿ: ಒಂದು ಕಡೆ ನೆತ್ತಿ ಸುಡುವ ಬಿಸಿಲಿನ ತಾಪ ಮತ್ತೂಂದು ಕಡೆ ನದಿ ಬತ್ತುವ ಜೊತೆಗೆ ಬಾವಿ, ಕೊಳವೆಬಾವಿ ಬತ್ತಿ ಹೋಗಿ ನೀರಿನ ಕೊರತೆಯ ಪರಿತಾಪ. ಇದರಿಂದ ಬರದ ನಾಡಾಗಿರುವ ಚಿಕ್ಕೋಡಿ ಉಪವಿಭಾಗದ ನದಿ ತೀರದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇಂದು ನಾಳೆ ನದಿಗೆ ನೀರು ಬರುತ್ತದೆಂದು ನದಿ ತೀರದ ಗ್ರಾಮಗಳ ಜನರು ಚಾತಕ ಪಕ್ಷಿಗಳಂತೆ ಮಹಾರಾಷ್ಟ್ರದತ್ತ ಮುಖ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಜನರ ಜೀವನಾಡಿಯಾದ ಕೃಷ್ಣಾ ನದಿ ಒಡಲು ಸಂಪೂರ್ಣ ಬತ್ತಿ ಹೋಗಿ ತಿಂಗಳು ಕಳೆದಿದೆ. ಹೀಗಾಗಿ ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕಿನಲ್ಲಿ ಹರಿದು ಹೋಗಿರುವ ಕೃಷ್ಣಾ ನದಿ ಎರಡು ದಡದ ಗ್ರಾಮಗಳಲ್ಲಿ ಜನ ಜಾನುವಾರಗಳು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ನದಿ ತೀರದ ಗ್ರಾಮಗಳಲ್ಲಿ ಒಂದು ಕೊಡ ನೀರಿಗಾಗಿ ನದಿಯಲ್ಲಿ ವರತಿ(ತಗ್ಗು) ತೆಗೆದು ನೀರು ತೆಗೆದುಕೊಂಡು ಹೋಗುವ ಪ್ರಸಂಗ ಬಂದೊದಗಿದೆ.

ಉಪವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದ್ದರೂ ಜಿಲ್ಲಾ ಆಡಳಿತ ಮಾತ್ರ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುತ್ತಿಲ್ಲ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂಬುದು ನದಿ ತೀರದ ಗ್ರಾಮಸ್ಥರ ಆಕ್ರೋಶ.

ಗ್ರಾಮೀಣ ಭಾಗದಲ್ಲಿ ಸಮಸ್ಯೆ ಉಲ್ಬಣ: ಇಂಥ ಬಿರು ಬೇಸಿಗೆಯಲ್ಲಿ ಕೃಷ್ಣಾ ನದಿ ಬತ್ತಿ ಹೋಗಿ ಗುಟುಕು ನೀರಿಗೆ ಪರದಾಡುವ ಪರಿಸ್ಥಿತಿ ನದಿ ತೀರದ ಗ್ರಾಮದ ಜನರಿಗಾದರೆ ಮಡ್ಡಿ ಭಾಗದ ಜನರ ಪರಿಸ್ಥಿತಿ ಇದಕ್ಕಿಂತಲೂ ಶೋಚನೀಯ. ನದಿಯಲ್ಲಿ ನೀರು ಇಲ್ಲದೆ ಹತ್ತಾರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡಿದ್ದರಿಂದ ಅಥಣಿ ಮತ್ತು ಕಾಗವಾಡ ತಾಲೂಕುಗಳ 78 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ರಾಯಬಾಗ ತಾಲೂಕಿನಲ್ಲಿಯೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಂಚಲಿ, ದಿಗ್ಗೇವಾಡಿ, ನಸಲಾಪುರ, ಬಾ.ಸವದತ್ತಿ, ಬೆಂಡವಾಡ, ಜಲಾಲಪುರ ಮುಂತಾದ ಗ್ರಾಮಗಳಲ್ಲಿ ಜನ ನೀರಿಗಾಗಿ ಪರದಾಡುತ್ತಿದ್ದಾರೆ.

ಚಿಕ್ಕೋಡಿ ತಾಲೂಕಿನ ನದಿ ತೀರದ ಅಂಕಲಿ, ಮಾಂಜರಿ, ಕಲ್ಲೋಳ, ಯಡೂರ, ಇಂಗಳಿ ಮತ್ತು ಕೆರೂರ, ಕಾಡಾಪೂರ, ಬಂಬಲವಾಡ, ಜೈನಾಪುರ, ಕರೋಶಿ ಸೇರಿದಂತೆ 30 ಕ್ಕೂ ಹೆಚ್ಚಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಗಂಭೀರ ಪರಿಸ್ಥಿತಿ ಎದುರಾಗಿದೆ.

ಚಿಕ್ಕೋಡಿ ನಗರದಲ್ಲಿ ನೀರಿಗಾಗಿ ಪರದಾಟ: ಜಿಲ್ಲಾ ಕೇಂದ್ರಸ್ಥಾನ ಚಿಕ್ಕೋಡಿ ನಗರ ಕೂಡ ಕುಡಿಯುವ ನೀರಿನ ಸಮಸ್ಯೆಯಿಂದ ಹೊರತಾಗಿಲ್ಲ. ನದಿಯಲ್ಲಿ ನೀರು ಬತ್ತಿ ಹೋಗಿ ನಗರಕ್ಕೆ ನೀರು ಪೂರೈಕೆಯಾಗುತ್ತಿಲ್ಲ, ಹೀಗಾಗಿ ನಗರದಲ್ಲಿರುವ ಕೊಳವೆ ಬಾವಿ ಮೂಲಕ ನೀರು ಪೂರೈಕೆ ಮಾಡುತ್ತಿದ್ದರೂ ಸಹ ಅದು ಸಾಕಾಗುತ್ತಿಲ್ಲ, ಈಗಾಗಲೇ ನಗರದಲ್ಲಿ 24*7 ಕುಡಿಯುವ ನೀರಿನ ಯೋಜನೆ ಮೂಲಕ ನೀರು ಸರಬರಾಜು ಆಗುತ್ತಿತ್ತು. ಇದೀಗ ನಾಲ್ಕೈದು ದಿನಕ್ಕೊಮ್ಮೆ ನೀರು ಬರುವುದರಿಂದ ನಗರದ ಜನ ನೀರಿಗಾಗಿ ಪರದಾಡುತ್ತಿದ್ದಾರೆ.

ನಗರದಲ್ಲಿ 120 ಕೊಳವೆ ಬಾವಿ ನಿರ್ಮಿಸಲಾಗಿದೆ. ಎರಡು ಕೊಳವೆ ಬಾವಿ ದುರಸ್ತಿ ಮಾಡಲಾಗಿದೆ. ಸಾಧ್ಯವಿದ್ದಷ್ಟು ಜನರಿಗೆ ನೀರು ಕೊಡುವ ವ್ಯವಸ್ಥೆ ಕಲ್ಪಿಸಲಾಗುತ್ತದೆಯೆಂದು ಪುರಸಭೆ ಮುಖ್ಯಾಧಿಕಾರಿ ಡಾ. ಸುಂದರ ರೂಗಿ ತಿಳಿಸಿದರು.

ಈಡೇರದ ಭರವಸೆ: ಲೋಕಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ-ಕಾಂಗ್ರೆಸ್‌ ಮುಖಂಡರು ಮಹಾರಾಷ್ಟ್ರದಿಂದ ನದಿಗೆ ನೀರು ಹರಿಸುವುದಾಗಿ ಜನರಿಗೆ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿದರೂ ನದಿಗೆ ನೀರು ಬಂದಿಲ್ಲ, ಚುನಾವಣೆ ಮುಗಿದ ಬಳಿಕ ನೀರು ಬರುತ್ತದೆಂಬ ನದಿ ತೀರದ ಜನರ ನಂಬಿಕೆ ಹುಸಿಯಾಗಿದೆ. ಚಿಕ್ಕೋಡಿ ಉಪವಿಭಾಗದ ಮುಖಂಡರು ಪಕ್ಷಾತೀತವಾಗಿ ನದಿಗೆ ನೀರು ಬರಲು ಪ್ರಯತ್ನ ಮಾಡಬೇಕು ಇಲ್ಲದಿದ್ದರೆ ಜೀವಜಲಕ್ಕಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎನ್ನುವುದು ಜನರ ಅಳಲು.

ಚಿಕ್ಕೋಡಿ ಉಪವಿಭಾಗದಲ್ಲಿ ಕುಡಿಯುವ ನೀರಿಗಾಗಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಕುಡಿಯಲು ನೀರು ಬಿಡಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ವಿಡಿಯೋ ಸಂವಾದದಲ್ಲಿ ಮನವಿ ಮಾಡಲಾಗಿದೆ. ಇದರ ಜೊತೆಗೆ ಚಿಕ್ಕೋಡಿ ಉಪವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ನೀರು ಕೊಡಬೇಕು.
ಡಾ. ಕೆ.ವಿ.ರಾಜೇಂದ್ರ,
ಪ್ರಭಾರಿ ಜಿಲ್ಲಾಧಿಕಾರಿ ಬೆಳಗಾವಿ.

ಕೃಷ್ಣಾ ನದಿ ಬತ್ತಿ ಹೋಗಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಕೂಡಲೇ ನದಿಗೆ ನೀರು ಬಿಡಬೇಕೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅದಕ್ಕೆ ಫಡ್ನವೀಸ್‌ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.
•ದುರ್ಯೋಧನ ಐಹೊಳೆ
ಶಾಸಕರು ರಾಯಬಾಗ.

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.