ಕಾಂಗ್ರೆಸ್‌ಗೆ ಆಪರೇಷನ್‌ ಕಮಲ ಭೀತಿ!

ಇನ್ನೂ ಆಗಿಲ್ಲ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ

Team Udayavani, Dec 29, 2019, 3:18 PM IST

29-December-18

ಶಾಮರಾವ ಚಿಂಚೋಳಿ
ಚಿಂಚೋಳಿ:
ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಕುರಿತು ರಾಜ್ಯ ಚುನಾವಣಾ ಆಯೋಗ ಪಟ್ಟಿ ಪ್ರಟಿಸುವ ಮುನ್ನವೇ ಆಪರೇಶನ್‌ ಕಮಲದ ಭೀತಿಯಿಂದ ಕಾಂಗ್ರೆಸ್‌ ಪಕ್ಷದ ಪುರಸಭೆ ಚುನಾಯಿತ ಸದಸ್ಯರೆಲ್ಲ ಒಟ್ಟಾಗಿ ತೆಲಂಗಾಣಕ್ಕೆ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಪುರಸಭೆಯ 23 ಸ್ಥಾನಗಳಿಗೆ ಕಳೆದ 2018 ಸೆ.3ರಂದು ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ 12 ಕಾಂಗ್ರೆಸ್‌, ಐವರು ಬಿಜೆಪಿ, ಒಬ್ಬರು ಜೆಡಿಎಸ್‌, ಒಬ್ಬರು ಬಿಎಸ್‌ಪಿ, ನಾಲ್ವರು ಪಕ್ಷೇತರರು ಗೆಲುವು ಸಾ ಧಿಸಿದ್ದರು. ಆಗ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯ ಚುನಾವಣೆ ಆಯೋಗ ಪುರಸಭೆ ಅಧ್ಯಕ್ಷ ಬಿಸಿಎ ಮತ್ತು ಬಿಸಿಬಿ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಘೋಷಣೆ ಮಾಡಿತ್ತು. ಆದರೆ ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವುದಕ್ಕಾಗಿ ಕೆಲವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರಿಂದ ಕಳೆದ 15 ತಿಂಗಳಿಂದ ಇನ್ನುವರೆಗೆ ಯಾವುದೇ ಮೀಸಲಾಗಿ ಪ್ರಕಟವಾಗಿಲ್ಲ.

ಪುರಸಭೆಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮಹಿಳೆ), ಉಪಾಧ್ಯಕ್ಷ ಸ್ಥಾನ ಬಿಸಿಬಿ (ಮಹಿಳೆ) ಇಲ್ಲವೇ ಎಸ್‌ಟಿಗೆ ಬದಲಾವಣೆ ಆಗಲಿದೆ. ಇನ್ನು ಕೆಲವೆಡೆ ಈ ಮೊದಲು ಹೊರಡಿಸಿದ ಮೀಸಲಾತಿಯೇ ಪ್ರಕಟವಾಗಲಿದೆ ಎನ್ನುವ ವದಂತಿ ಹರಡಿದೆ. ಹೀಗಾಗಿ ಸ್ಪಷ್ಟ ಬಹುಮತ ಹೊಂದಿದ ಕಾಂಗ್ರೆಸ್‌ ಪಕ್ಷದ 12 ಸದಸ್ಯರು ಬಿಜೆಪಿಯ
ಆಪರೇಶನ್‌ ಕಮಲ ಭೀತಿಯಿಂದ ಶುಕ್ರವಾರ ಸಂಜೆ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಚಿಂಚೋಳಿ ಮೀಸಲು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪುರಸಭೆ ಸದಸ್ಯರು ತೆರೆಮರೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಪ್ರಚಾರ ನಡೆಸಿದ್ದರಿಂದ ವಾರ್ಡ್‌ 21 ಕಾಂಗ್ರೆಸ್‌ ಪಕ್ಷದ ಪುರಸಭೆ ಸದಸ್ಯೆ ಸವಿತಾಬಾಯಿ ರಾಜು ಪವಾರ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಪತಿ ರಾಜು ಪವಾರ ಬಿಜೆಪಿ ಪರ ಚುನಾವಣೆ ಪ್ರಚಾರ ನಡೆಸಿದ್ದರಿಂದ ಅವರು ಬಿಜೆಪಿಗೆ ಹೋಗುವುದು ಖಚಿತವಾಗಿದೆ. ಆದರೆ ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ವಿಪ್‌ ಜಾರಿ ಮಾಡುವ ಸಾಧ್ಯತೆ ಇದೆ ಪುರಸಭೆ ಪಕ್ಷೇತರ ಸದಸ್ಯರಾದ ಆನಂದ ಟೈಗರ್‌, ಬಸವರಾಜ ಶಿರಸಿ, ರಾಧಾಬಾಯಿ ವಲಗಿರಿ, ಭೀಮರಾವ್‌ ಸುಬ್ಬಣ್ಣ ರಾಠೊಡ ಅವರನ್ನು ಬಿಜೆಪಿಯತ್ತ ಸೆಳೆಯಲು ತೆರೆಮರೆಯಲ್ಲಿ ಕಸರಸ್ತು ನಡೆಸುತ್ತಿದೆ. ಅಲ್ಲದೇ ಜೆಡಿಎಸ್‌ ಸದಸ್ಯನಾಗೀಂದ್ರಪ್ಪ ಗುರಂಪಳ್ಳಿ, ಬಿಎಸ್‌ಪಿ
ಸದಸ್ಯ ಸುಶೀಲಕುಮಾರ ಬೊಮ್ಮನಳ್ಳಿ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿ ಬಿಜೆಪಿಗೆ ಬೆಂಬಲ ಸೂಚಿಸುವಂತೆ ಮನವೊಲಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷೇತರ, ಜೆಡಿಎಸ್‌ ಮತ್ತು ಬಿಎಸ್‌ಪಿ ಪುರಸಭೆ ಸದಸ್ಯರು ಬಿಜೆಪಿಗೆ ಬೆಂಬಲಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.

ಪುರಸಭೆಯಲ್ಲಿ 2013ರಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಅಲ್ಲದೇ 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್‌ 12 ಸ್ಥಾನಗಳಲ್ಲಿ ಬಹುಮತ ಹೊಂದಿತ್ತು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.