ಆರಂಭವಾಗುವುದೇ ಸಕ್ಕರೆ ಕಾರ್ಖಾನೆ?

ಕಾರ್ಖಾನೆ ಆರಂಭವಾದರೆ ಕಬ್ಬು ಬೆಳೆಗಾರರಿಗೆ ಅನುಕೂಲ

Team Udayavani, Jul 29, 2019, 12:26 PM IST

29-July-22

ಚಿಂಚೋಳಿ: ಪಟ್ಟಣದ ಹೊರವಲಯದಲ್ಲಿ ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಸಕ್ಕರೆ ಕಾರ್ಖಾನೆ.

ಚಿಂಚೋಳಿ: ಮೀಸಲು ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಕಳೆದ ಮೇ 19 ರಂದು ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರು ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ತಾಲೂಕಿನಲ್ಲಿ ಹೊಸದಾಗಿ, ಇಲ್ಲವೇ ನನೆಗುದಿಗೆ ಬಿದ್ದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರಲ್ಲಿ ಆಸೆ ಚಿಗುರೊಡೆದಿದೆ.

ಚಿಂಚೋಳಿ ಮೀಸಲು ವಿಧಾನಸಭೆ ಉಪ ಚುನಾವಣೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮುಂದಿನ ಎರಡು ತಿಂಗಳಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಮುಂದಿನ ಮುಖ್ಯಮಂತ್ರಿ ನಾನೇ ಆಗಲಿದ್ದೇನೆ. ಆಗ ಅನೇಕ ವರ್ಷಗಳಿಂದ ಹೊರ ವಲಯದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿ ಬಳಿಯಲ್ಲಿ ನನೆಗುದಿಗೆ ಬಿದ್ದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸುತ್ತೇನೆ ಎಂದು ಭರವಸೆ ನೀಡಿದ್ದರು. ಅಲ್ಲದೇ ಮಾಜಿ ಕೇಂದ್ರ ಸಚಿವ ಬಸವಣ್ಣಗೌಡ ಯತ್ನಾಳ ಅವರು ಭರವಸೆ ನೀಡಿದ್ದರು. ಅದೀಗ ಈಡೇರುವುದೇ ಎನ್ನುವ ಆಶಾ ಭಾವನೆ ಕಬ್ಬು ಬೆಳೆವ ರೈತರದ್ದಾಗಿದೆ.

ಆಗ ಶಾಸಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಮತ್ತು ಕಲಬುರಗಿ ಲೋಕಸಭೆಗೆ ಸ್ಪರ್ಧಿಸಿದ್ದ ಡಾ| ಉಮೇಶ ಜಾಧವ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಇವರಿಬ್ಬರೂ ಗೆಲವು ಸಾಧಿಸಿದ್ದಾರೆ. ಅಲ್ಲದೇ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ. ಹೀಗಿರುವಾಗ ಹೊಸ ಸಕ್ಕರೆ ಸ್ಥಾಪನೆ ಆಗೇ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿ ಕಬ್ಬುಬೆಳೆಗಾರರಿದ್ದಾರೆ.

ಚಿಂಚೋಳಿ ಸಕ್ಕರೆ ಕಾರ್ಖಾನೆಯನ್ನು 1998ರಲ್ಲಿ ಆಗಿನ ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರ ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು. 200 ಎಕರೆ ಜಮೀನು ಪ್ರದೇಶ ಹೊಂದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಚೆನ್ನೈ ಕೊಯಮತ್ತೂರನ ರಾಜಶ್ರೀಪತಿ ಮತ್ತು ಹೈದ್ರಾಬಾದ್‌ನ ಟರ್ಬೋ ಕಂಪನಿಗೆ ನೀಡಲಾಗಿತ್ತು. ಎರಡು ಕಂಪನಿಗಳು ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಅತ್ಯಾಧುನಿಕ ಯಂತ್ರೋಪಕರಣ ಅಳವಡಿಸಿದ್ದವು. ನಂತರ ಹಣಕಾಸಿನ ಸಮಸ್ಯೆಯಿಂದಾಗಿ ಕಾರ್ಖಾನೆ ಕಾರ್ಯಾರಂಭವಾಗದೇ ಎರಡು ದಶಕಗಳಿಂದ ನನೆಗುದಿಗೆ ಬಿದ್ದಿದೆ.

ತಾಲೂಕಿನಲ್ಲಿ ಕಬ್ಬು ಬೆಳೆದ ರೈತರು ಹುಮನಾಬಾದನ ಹಳ್ಳಿಖೇಡ, ಯಾದಗಿರಿ ಮತ್ತು ಮನ್ನಾಎಕ್ಕೆಳ್ಳಿಗೆ ಕಬ್ಬನ್ನು ಸಾಗಿಸುತ್ತಾರೆ. ಚಿಂಚೋಳಿ ಪಟ್ಟಣದಲ್ಲಿಯೇ ಹೊಸದಾಗಿ ಸಕ್ಕರೆ ಕಾರ್ಖಾನೆ ಇಲ್ಲವೇ ನನೆಗುದಿಗೆ ಬಿದ್ದಿರುವ ಕಾರ್ಖಾನೆ ಪ್ರಾರಂಭಿಸಿದರೆ ಹಿಂದುಳಿದ ಭಾಗದ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತದೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.