ಅಭ್ಯಾಸಕ್ಕೆ ಮಹತ್ವ ನೀಡಿ: ಹಾಕೆ

ಅಕ್ರಮ ಮದ್ಯ ಮಾರಾಟ ಕಂಡರೆ ಕ್ರಮ•ಸಾಲ ಮನ್ನಾ ಭಾವನೆ ಬಿಟ್ಟು ಬಿಡಿ

Team Udayavani, Jul 22, 2019, 9:58 AM IST

ಚಿಂಚೋಳಿ: ಹಲಚೇರಾ ಗ್ರಾಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರ ಮಕ್ಕಳನ್ನು ಸನ್ಮಾನಿಸಲಾಯಿತು. ಡಿವೈಎಸ್ಪಿ ಅಕ್ಷಯ ಹಾಕೆ, ಗ್ರಾಪಂ ಅಧ್ಯಕ್ಷ ಶರಣಪ್ಪ ಬೆಳಗುಂಪಿ ಇದ್ದರು.

ಚಿಂಚೋಳಿ: ಓದಿನ ಕಡೆಗೆ ಹೆಚ್ಚಿನ ಸಮಯ ನೀಡಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಡಿವೈಎಸ್‌ಪಿ, ಐಪಿಎಸ್‌ ಅಧಿಕಾರಿ ಅಕ್ಷಯ ಹಾಕೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಹಲಚೇರಾ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಗ್ರಾಮ ಪಂಚಾಯತಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿಪರ ರೈತರಿಗೆ ಸನ್ಮಾನ ಮತ್ತು ರೈತರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ಗಳನ್ನು ಅವಶ್ಯಕ್ಕಿಂತ ಹೆಚ್ಚಿಗೆ ಬಳಸಬೇಡಿ. ಜೀವನದಲ್ಲಿ ಗುರಿ ಸಾಧಿಸಬೇಕಾದರೆ ಕಲಿಕೆಯಲ್ಲಿ ಆಸಕ್ತಿ ಮುಖ್ಯ. ರೈತರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.

ನಂತರ ಅಕ್ರಮ ಮದ್ಯ ಮಾರಾಟ ಕುರಿತು ಎಚ್ಚರಿಕೆ ನೀಡಿದ ಅವರು, ಕಿರಾಣಿ ಮತ್ತು ಚಹಾ ಅಂಗಡಿ, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ಗಿರೀಶ ಹೆಬ್ಟಾರ ಮಾತನಾಡಿ, ರೈತರು ಬ್ಯಾಂಕಿನಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿ ಮಾಡಿದರೆ ಸರಕಾರದಿಂದ ಸಿಗುವ ಸಾಲ ಮನ್ನಾ ಅನ್ವಯ ಆಗಲಿದೆ. ಸಾಲ ಮನ್ನಾ ಎನ್ನುವ ಭಾವನೆ ಇದ್ದರೆ ಅದನ್ನು ಬಿಟ್ಟು ಬಿಡಬೇಕು ಎಂದರು.

ಜಿಲ್ಲಾ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಶರಣಪ್ಪ ಬೆಳಗುಂಪಿ ಅಧ್ಯಕ್ಷತೆ ವಹಿಸಿದ್ದರು.

ಭೀಮಶೆಟ್ಟಿ ಎಂಪಳ್ಳಿ, ಗೌರಿಶಂಕರ ಕಿಣ್ಣಿ, ಪ್ರದೀಪ ತಿರಲಾಪುರ, ನರಸಯ್ಯ ಗುತ್ತೇದಾರ, ಮಹೇಂದ್ರ, ಗುರುನಾಥ, ಸಂತೋಷ ಮಾಳಗಿ, ಭರತ ಬುಳ್ಳ ಇನ್ನಿತರರಿದ್ದರು. ಸಂತೋಷಕುಮಾರ ಹೊಸಳ್ಳಿ ಸ್ವಾಗತಿಸಿದರು, ಗೌರಿಶಂಕರ ರಟಕಲ್ ವಂದಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ