95 ಕೋಟಿ ರೂ. ಕ್ರಿಯಾ ಯೋಜನೆಗೆ ಅಸ್ತು

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ತಾಲೂಕುಗಳಿಗೆ ತಲಾ 1 ಕೋಟಿ ರೂ. ಹಂಚಿಕೆ: ಶಾಲಿನಿ ರಜನೀಶ್‌

Team Udayavani, Aug 18, 2019, 11:47 AM IST

18-Agust-17

ಚಿತ್ರದುರ್ಗ: ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅಧ್ಯಕ್ಷತೆಯಲ್ಲಿ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಸರ್ವ ಸದಸ್ಯರ ಸಭೆ ನಡೆಯಿತು.

ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ 95 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.

ನಗರದ ತಮಟಕಲ್ಲು ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಶನಿವಾರ ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ.

ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಶಾಸಕರು, ಜಿಲ್ಲಾ ಪಂಚಾಯತ್‌ ಅಧ್ಯಕ್ಷರು, ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ 25ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಬರುವ 95 ತಾಲೂಕುಗಳಿಗೆ ತಲಾ 1 ಕೋಟಿ ರೂ. ಅನುದಾನ ನಿಗದಿಪಡಿಸಲಾಯಿತು.

ಅರಸಿಕೆರೆ ಶಾಸಕ ಶಿವಲಿಂಗೇಗೌಡ ಮಾತನಾಡಿ, ಶಾಸಕರ ಕಡೆಯಿಂದ ಮಂಜೂರಾದ ಕಾಮಗಾರಿಗಳನ್ನು ತಹಶೀಲ್ದಾರ್‌ ಪರಿಶೀಲನೆ ನಡೆಸುತ್ತಾರೆ. ಇದು ಸರಿಯಲ್ಲ. ಅವರಿಗೆ ಕಾಮಗಾರಿಗಳ ಬಗ್ಗೆ ಯಾವ ಜ್ಞಾನ ಇರುತ್ತದೆ ಎಂದು ಪ್ರಶ್ನಿಸಿದರು. ಮೂರನೇ ಪಾರ್ಟಿ ಅಥವಾ ಸಂಬಂಧಪಟ್ಟ ಇಂಜಿನಿಯರ್‌ಗಳಿಂದ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮಾತನಾಡಿ, ಬಯಲುಸೀಮೆ ಪ್ರದೇಶಭಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ 14 ಜಿಲ್ಲೆಗಳ 87 ತಾಲೂಕುಗಳಿವೆ. ಎಲ್ಲಾ ಕಡೆ ಕೃಷಿ ಸಂಬಂಧಿತ ಮಣ್ಣು ಮತ್ತು ನೀರು ಸಂರಕ್ಷಣೆ, ಅರಣ್ಯೀಕರಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಎರಡನೇ ಆದ್ಯತೆಯಾಗಿ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ, ಚರಂಡಿ, ಶಾಲೆಗಳ ಕೊಠಡಿ, ಅಂಗನವಾಡಿ, ಆರೋಗ್ಯ ಕೇಂದ್ರ ಕಟ್ಟಡಗಳನ್ನು ನಿರ್ಮಿಸಲಾಗುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರಿ ಜಮೀನಿನಲ್ಲಿ ಸಮುದಾಯ ಭವನ, ವ್ಯಾಯಾಮ ಶಾಲೆ, ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದರು.

ಮಂಡಳಿಯಿಂದ ಕೈಗೊಂಡ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಇದಕ್ಕಾಗಿ ವರ್ಕ್‌ಸಾಫ್ಟ್‌ ಎಂಬ ನೂತನ ಸಾಫ್ಟ್‌ವೇರ್‌ ಇದ್ದು, ಇದರಲ್ಲಿ ಕಾಮಗಾರಿಗಳ ವಿವರಗಳನ್ನು ಅಪ್‌ಲೋಡ್‌ ಮಾಡಿದ ತಿಂಗಳೊಳಗೆ ಶಾಸಕರಿಗೆ ಮಾಹಿತಿ ಹೋಗುತ್ತದೆ. ಸಂಬಂಧಿಸಿದ ಏಜೆನ್ಸಿಗಳು 30 ದಿನದಲ್ಲಿ ಅಂದಾಜು ಪಟ್ಟಿ ತಯಾರಿಸಿ ಕೊಡಬೇಕು. ನಂತರ ಶೇ. 70 ರಷ್ಟು ಮುಂಗಡ ಬರುತ್ತದೆ. ಈ ಬಗ್ಗೆ ಶಾಸಕರ ಆಪ್ತ ಸಹಾಯಕರಿಗೂ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.

ಶಾಸಕರಾದ ಜೆ.ಸಿ. ಮಾಧುಸ್ವಾಮಿ, ವೀರಭದ್ರಯ್ಯ, ನಾಗೇಶ್‌, ಟಿ. ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್‌, ಜಿ.ಎಚ್. ತಿಪ್ಪಾರೆಡ್ಡಿ, ವಿಧಾನ ಪರಿಷತ್‌ ಸದಸ್ಯ ತಿಪ್ಪೇಸ್ವಾಮಿ, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ, ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ, ಕಾರ್ಯದರ್ಶಿ ಕೃಷ್ಣ ನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.