ಶಾಂತಿ-ಸುವ್ಯವಸ್ಥೆಗೆ ಸಹಕರಿಸಿ

•ಕೆಎಸ್‌ಆರ್‌ಪಿ-ಡಿಎಆರ್‌ ಸೇರಿ 120 ಪೊಲೀಸ್‌ ಸಿಬ್ಬಂದಿ ನಿಯೋಜನೆ

Team Udayavani, Aug 14, 2019, 3:30 PM IST

ಚಿತ್ತಾಪುರ: ಪೊಲೀಸ್‌ ಬಿಗಿ ಬಂದೋಬಸ್ತ್ ಮಾಡಿರುವುದು.

ಚಿತ್ತಾಪುರ: ರವಿವಾರ ತಡರಾತ್ರಿ ಅಕ್ರಮ ಗೋವುಗಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ದಂತೆ ಸೋಮವಾರ ರಾತ್ರಿ ಕೆಲ ಕಿಡಿಗೇಡಿಗಳು ಜೀಪ್‌ ಒಂದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದರಿಂದ ವಾತಾವರಣ ಮತ್ತಷ್ಟು ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಪಟ್ಟಣದಲ್ಲಿಯೇ ಬಿಡಾರ ಹೂಡಿದ್ದು, ಶಾಂತಿ ಕಾಪಾಡಲು ಸಹಕರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ತಾಪುರ ಪಟ್ಟಣದಲ್ಲಿ ಇಲ್ಲಿವರೆಗೆ ಇಂತಹ ಘಟನೆಗಳು ನಡೆದಿಲ್ಲ ಮತ್ತು ಯಾವತ್ತೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವ ಉದಾಹರಣೆಗಳಿಲ್ಲ. ಇಲ್ಲಿ ಎಲ್ಲ ಧರ್ಮದವರು ಸಹೋದರತೆ ಮತ್ತು ಸಮನ್ವಯತೆಯಿಂದ ಜೀವನ ಮಾಡುತ್ತಾರೆ ಎನ್ನುವ ಮಾಹಿತಿ ಇದೆ. ಹೀಗಾಗಿ ಚಿತ್ತಾಪುರಕ್ಕೆ ಒಳ್ಳೆ ಹೆಸರು ತರುವ ನಿಟ್ಟಿನಲ್ಲಿ ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.

ಪಟ್ಟಣದಲ್ಲಿ ವಾತಾವರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಬೀಗಿ ಬಂದೋಬಸ್ತ್ ಮಾಡಲಾಗಿದೆ. ಭದ್ರತಾ ದೃಷ್ಠಿಯಿಂದ ಕೆಎಸ್‌ಆರ್‌ಪಿ 2, ಡಿಎಆರ್‌ 6, ಡಿಎಸ್‌ಪಿ 2, ಸಿಪಿಐ 9, ಪಿಎಸ್‌ಐ 13 ಸೇರಿದಂತೆ ಒಟ್ಟು 120 ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

ಪಟ್ಟಣದಲ್ಲಿ ಕಳೆದ ರವಿವಾರ ತಡರಾತ್ರಿ ನಡೆದ ಅಕ್ರಮ ಗೋವುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಆದ ಘರ್ಷಣೆ ಪ್ರಕರಣ ಮತ್ತು ಸೋಮವಾರ ಮಧ್ಯರಾತ್ರಿ 3:30ಕ್ಕೆ ಸ್ಟೇಷನ್‌ ರಸ್ತೆಯಲ್ಲಿ ಇಸ್ಮಾಯಿಲ್ ಅವರಿಗೆಸೇರಿದ ಜೀಪ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಗಳಲ್ಲಿ ಅನುಮಾನಸ್ಪದ ಕೆಲವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಷ್ಟ ಮಾಹಿತಿ ಮತ್ತು ಸಾಕ್ಷಿ ಕಲೆ ಹಾಕಲಾಗುತ್ತಿದೆ. ಹೀಗಾಗಿ ಯಾರನ್ನೂ ಇನ್ನೂ ಬಂಧಿಸಿಲ್ಲ ಎಂದು ತಿಳಿಸಿದರು.

ಈ ಘಟನೆಗಳು ಸೂಕ್ಷ್ಮವಾಗಿದೆ. ಇದರಲ್ಲಿ ಅಮಾಯಕರು ಇರಬಹುದು. ಹೀಗಾಗಿ ಸತ್ಯಾಸತ್ಯೆ ಪತ್ತೆ ಹಚ್ಚಿ ಇದರಲ್ಲಿ ಯಾರೂಭಾಗಿಯಾಗಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡು ಎಫ್‌ಐಆರ್‌ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದರು. ಚಿಂಚೋಳಿ ಡಿವೈಎಸ್‌ಪಿ ಅಕ್ಷಯ ಹಾಕೆ, ಶಹಾಬಾದ್‌ ಡಿವೈಎಸ್‌ಪಿ ಕೆ.ಬಸವರಾಜ, ಸೇಡಂ ಸಿಪಿಐ ಶಂಕರಗೌಡ ಪಾಟೀಲ ಇದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಹೊಳಲ್ಕೆರೆ: ಮಾನವ ತನ್ನ ಅರಿವಿಗೆ ಬಾರದೇ ದುರ್ಬುದ್ಧಿಗೆ ಒಳಗಾಗುತ್ತಾನೆ. ದುರ್ಬುದ್ಧಿಯ ಮಾತನ್ನು ಕೇಳಿದವರು ಸಂಕಷ್ಟ ಅನುಭವಿಸಿದರೆ, ಸದ್ಭುದ್ಧಿಯ ಮಾತನ್ನು...

  • ತರೀಕೆರೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬದ ಕುರಿತು ಗಂಭೀರ ಚರ್ಚೆ ನಡೆಯಿತು. ಸಭೆಯಲ್ಲಿ ಮಾತನಾಡಿದ...

  • ಚಿಕ್ಕಮಗಳೂರು: ಅತಿವೃಷ್ಟಿಯಿಂದ ಮನೆ ಕಳೆದುಕೊಂಡಿರುವ ನೈಜ ಫಲಾನುಭವಿಗಳನ್ನು ಆಯ್ಕೆ ಮಾಡಿ ಸೌಲಭ್ಯ ಕಲ್ಪಿಸಬೇಕೆಂದು ತಾಲೂಕು ಪಂಚಾಯತ್‌ ಅಧ್ಯಕ್ಷ ಜಯಣ್ಣ...

  • ವೆಂಕೋಬಿ ಸಂಗನಕಲ್ಲು ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲು ಮುಂದಾಗಿರುವ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ...

  • ಹರಪನಹಳ್ಳಿ: ಬಸವ ವಸತಿ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಕಡ್ಡಾಯವಾಗಿ ಗ್ರಾಮ ಸಭೆ ಮೂಲಕವೇ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಮನೆ ನಿರ್ಮಿಸಿ ಕೊಡಬೇಕು...

ಹೊಸ ಸೇರ್ಪಡೆ