ವಿದ್ಯಾರ್ಹತೆಗಿಂತ ಕೌಶಲ್ಯಕ್ಕೇ ಮಹತ್ವ ಹೆಚ್ಚು

ಧರ್ಮಸ್ಥಳ ಧರ್ಮಾಧಿಕಾರಿಯವರ ಸಾಮಾಜಿಕ ಕಾಳಜಿ ಶ್ಲಾಘನೀಯ: ಶಾಸಕ ತಿಪ್ಪಾರೆಡ್ಡಿ

Team Udayavani, Aug 25, 2019, 12:18 PM IST

25-Agust-18

ಚಿತ್ರದುರ್ಗ: ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ತರಬೇತಿ ಪಡೆದ ಫಲಾನುಭವಿಗಳಿಗೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಪ್ರಮಾಣಪತ್ರ ವಿತರಿಸಿದರು.

ಚಿತ್ರದುರ್ಗ: ಸಮಸ್ಯೆಗಳು ಬಂದಾಗ ಧೈರ್ಯವಾಗಿ ಎದುರಿಸಬೇಕು. ಯಾವ ಕಾರಣಕ್ಕೂ ಆತುರದ ನಿರ್ಧಾರ ತೆಗೆದುಕೊಳ್ಳಬಾರದು. ಏಕೆಂದರೆ ಭೂಮಿ ಮೇಲೆ ಮನುಷ್ಯರಾಗಿ ಹುಟ್ಟಿರುವುದೇ ಪುಣ್ಯ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.

ನಗರದ ರುಡ್‌ಸೆಟ್ ಸಂಸ್ಥೆ ಆವರಣದಲ್ಲಿ ಶನಿವಾರ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಬರಪೀಡಿತ ಜಿಲ್ಲೆಯಾಗಿದ್ದು, ಇಲ್ಲಿ ಕೈಗಾರಿಕೆ, ನೀರಾವರಿ ಯಾವುದೂ ಇಲ್ಲ. ಜೀವನ ನಡೆಸುವುದೇ ಕಷ್ಟ. ಇದನ್ನು ಮನಗಂಡು ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ರುಡ್‌ಸೆಟ್ ಸಂಸ್ಥೆಯನ್ನು ಆರಂಭಿಸಿದ್ದಾರೆ. ಸ್ವಯಂ ಉದ್ಯೋಗ ನಡೆಸಲು ಈ ಭಾಗದ ಜನರಿಗೆ ಹತ್ತಾರು ತರಬೇತಿ ನೀಡುತ್ತಿರುವುದು ಅವರಿಗಿರುವ ಸಾಮಾಜಿಕ ಕಾಳಜಿಯನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.

ಈ ರೀತಿಯ ತರಬೇತಿ ಕಾರ್ಯಕ್ರಮಗಳಿಗೆ ಎಲ್ಲಾ ತಾಲೂಕುಗಳಿಂದ ಸಮಾನವಾಗಿ ಫಲಾನುಭವಿಗಳ ಆಯ್ಕೆ ಮಾಡುವುದಕ್ಕಿಂತ ಜಿಲ್ಲಾ ಕೇಂದ್ರದ ಜನಸಂಖ್ಯೆ ಆಧರಿಸಿ ಹೆಚ್ಚು ಜನರಿಗೆ ಅವಕಾಶ ನೀಡಬೇಕು ಎಂದು ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಓದಿದವರಿಗೆ ಕೆಲಸ ಕೊಡುವ ಪದ್ಧತಿ ಯಾವ ದೇಶದಲ್ಲೂ ಇಲ್ಲ. ಓದು ಜ್ಞಾನಕ್ಕಾಗಿ. ಉದ್ಯೋಗವನ್ನು ನಮ್ಮ ಪ್ರತಿಭೆ ಹಾಗೂ ಕೌಶಲ್ಯದಿಂದ ಸಂಪಾದಿಸಿಕೊಳ್ಳುವ ಕಾಲದಲ್ಲಿದ್ದೇವೆ. ಆದರೆ ಓದಿದ್ದೇವೆ, ಕೆಲಸ ಇಲ್ಲ ಎಂದು ತಪ್ಪುದಾರಿ ಹಿಡಿಯಬಾರದು ಎಂದರು.

ಇಂದು ಟೈಲರಿಂಗ್‌ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳಿವೆ. ಬೆಂಗಳೂರಿನಿಂದ ಜಿಲ್ಲೆ, ತಾಲೂಕು ಕೇಂದ್ರಕ್ಕೆ ಗಾರ್ಮೆಂಟ್ಸ್‌ ಬರುತ್ತಿವೆ. ಇಲ್ಲಿ ತರಬೇತಿ ಪಡೆದವರು ಇಂತಹ ಕಡೆಗಳಲ್ಲಿ ಉದ್ಯೋಗ ಕಂಡುಕೊಳ್ಳಬಹುದು. ಜತೆಗೆ ಧರ್ಮಸ್ಥಳ ಸಂಸ್ಥೆಯಲ್ಲಿ ತರಬೇತಿ ಪಡೆದು ಪ್ರಮಾಣ ಪತ್ರ ತೆಗೆದುಕೊಂಡು ಹೋದರೆ ಬ್ಯಾಂಕುಗಳು ಸ್ವಉದ್ಯೋಗಕ್ಕೆ ಸಾಲ ಒದಗಿಸುತ್ತವೆ ಎಂದು ತಿಳಿಸಿದರು.

ಶಾಸಕರ ಅನುದಾನದ ಅಡಿಯಲ್ಲಿ ಹೌಸಿಂಗ್‌ ಬೋರ್ಡ್‌, ಬನಶಂಕರಿ ಬಡಾವಣೆ ಸುತ್ತಮುತ್ತಲಿನ ರಸ್ತೆ ನಿರ್ಮಾಣಕ್ಕೆ 1.5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.

ರುಡ್‌ಸೆಟ್ ಸಂಸ್ಥೆ ನಿರ್ದೇಶಕಿ ಜಿ. ಮಂಜುಳಾ ಮಾತನಾಡಿ, ತರಬೇತಿ ಅವಧಿಯಲ್ಲಿ ಕಲಿತ ಕೌಶಲ್ಯವನ್ನು ವೃತ್ತಿ ಬದುಕಿನಲ್ಲಿ ಅಳವಡಿಸಿಕೊಂಡು ಯಶಸ್ಸು ಸಾಧಿಸಿ ಎಂದು ಶುಭ ಹಾರೈಸಿದರು. ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ನಿರೀಕ್ಷಕಿ ಸುವರ್ಣಮ್ಮ ಇದ್ದರು. ರುಡ್‌ಸೆಟ್ ಉಪನ್ಯಾಸಕ ತೋಟಪ್ಪ ಎಸ್‌. ಗಾಣಿಗೇರ್‌ ನಿರೂಪಿಸಿದರು. ಉಪನ್ಯಾಸಕಿ ಲತಾಮಣಿ ವಂದಿಸಿದರು. ಆ. 19 ರಿಂದ 6 ದಿನಗಳ ಕಾಲ, ಕಂಪ್ಯೂಟರ್‌ ಅಕೌಂಟ್ಸ್‌, ಹೈನುಗಾರಿಕೆ, ಟೈಲರಿಂಗ್‌ ಮತ್ತು ಉದ್ಯೋಗಿನಿ ಯೋಜನೆಯ ಇ.ಡಿ.ಪಿ ತರಬೇತಿ ಮತ್ತಿತರೆ ಕೌಶಲ್ಯಗಳನ್ನು ತರಬೇತಿಯಲ್ಲಿ ಕಲಿಸಲಾಗಿದೆ. 125 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು ಎಂದು ತಿಳಿಸಲಾಯಿತು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.