ಕೈ-ದಳ ಶಾಸಕರ ಕ್ಷೇತ್ರದಲ್ಲೂ ಕಮಲ ಕಮಾಲ್!

•ಮೊಳಕಾಲ್ಮೂರು, ಚಳ್ಳಕೆರೆ, ಪಾವಗಡದಲ್ಲಷ್ಟೇ ದೋಸ್ತಿಗೆ ಲೀಡ್‌ •5 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾರಮ್ಯ

Team Udayavani, May 26, 2019, 1:34 PM IST

Udayavani Kannada Newspaper

ಚಿತ್ರದುರ್ಗ: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಆನೇಕಲ್ ನಾರಾಯಣಸ್ವಾಮಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಇರುವ ಕ್ಷೇತ್ರಗಳಲ್ಲೂ ಲೀಡ್‌ ಪಡೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು ಪ್ರನಿಧಿಸುವ ಮೊಳಕಾಲ್ಮೂರು, ಕಾಂಗ್ರೆಸ್‌ನ ಟಿ. ರಘುಮೂರ್ತಿ ಶಾಸಕರಾಗಿರುವ ಚಳ್ಳಕೆರೆ ಹಾಗೂ ಕಾಂಗ್ರೆಸ್‌ನ ವೆಂಕಟರಮಣಪ್ಪ ಪ್ರತಿನಿಧಿಸುವ ಪಾವಗಡ ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ ಅವರಿಗೆ ಮುನ್ನಡೆ ಸಿಕ್ಕಿದೆ. ಇನ್ನುಳಿದಂತೆ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಲೀಡ್‌ ಪಡೆದುಕೊಂಡಿದ್ದಾರೆ.

ಒಂದು ವರ್ಷದ ಹಿಂದೆ ನಡೆದಿದ್ದ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ 2019ರ ಲೋಕಸಭೆ ಚುನಾವಣೆಯ ಮತ ಗಳಿಕೆಯಲ್ಲಿ ಅಜಗಜಾಂತರ ವ್ಯತ್ಯಾಸ ಕಂಡು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಶಿರಾ, ಪಾವಗಡ ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 28 ಸಾವಿರ ಮತಗಳನ್ನು ಪಡೆದಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 1.29 ಲಕ್ಷ ಮತ ಗಳಿಸುವ ಮೂಲಕ ದೋಸ್ತಿಗಳಿಗೆ ಚುರುಕು ಮುಟ್ಟಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಎಚ್.ಡಿ. ದೇವೇಗೌಡರಿಗೆ ಮತ ನೀಡುತ್ತಿಲ್ಲ ಎನ್ನುವ ಖಚಿತ ಮಾಹಿತಿ ಪಡೆದ ಶಿರಾ, ಪಾವಗಡ ಕ್ಷೇತ್ರಗಳ ಜೆಡಿಎಸ್‌ ಕಾರ್ಯಕರ್ತರು ಮೈತ್ರಿಕೂಟದ ಅಭ್ಯರ್ಥಿಗೆ ಕೈ ಕೊಟ್ಟಿದ್ದಾರೆ. ಹಾಗಾಗಿ ಮೈತ್ರಿಕೂಟಕ್ಕೆ ಹೋಗಬೇಕಾಗಿದ್ದ ಮತಗಳೆಲ್ಲ ಬಿಜೆಪಿ ಅಭ್ಯರ್ಥಿಗೆ ಚಲಾವಣೆಯಾಗಿದೆ ಎಂಬುದು ಗುಟ್ಟಾಗಿ ಉಳಿದಿಲ್ಲ.

ವಿಧಾನಸಭಾ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಪಡೆದ ಮತಗಳ ವಿವರ ಇಲ್ಲಿದೆ.

ಚಿತ್ರದುರ್ಗ: ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ 82,896 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಮೈತ್ರಿ ಅಭ್ಯರ್ಥಿಗಳ ಮತಗಳನ್ನು ಸೇರಿಸಿದರೆ 98,925 ಆಗುತ್ತದೆ. ಲೋಕ ಸಮರದಲ್ಲಿ ಬಿ.ಎನ್‌. ಚಂದ್ರಪ್ಪ 66,735 ಮತ ಹಾಗೂ ಎ. ನಾರಾಯಣಸ್ವಾಮಿ 98,743 ಮತ ಪಡೆದಿದ್ದಾರೆ. ಬಿಜೆಪಿ 32,007 ಮತಗಳ ಲೀಡ್‌ ಪಡೆದಿದೆ.

ಹಿರಿಯೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಅಭ್ಯರ್ಥಿಗಳು 1,06,902 ಮತಗಳನ್ನು ಪಡೆದಿದ್ದರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ 3946 ಮತಗಳ ಲೀಡ್‌ ಸಿಕ್ಕಿದೆ. ಬಿ.ಎನ್‌. ಚಂದ್ರಪ್ಪ, 73071 ಹಾಗೂ ಎ. ನಾರಾಯಣಸ್ವಾಮಿ 77,017 ಮತಗಳನ್ನು ಪಡೆದುಕೊಂಡಿದ್ದಾರೆ.

ಹೊಸದುರ್ಗ: ವಿಧಾನಸಭಾ ಚುನಾವಣೆಯಲ್ಲಿ 64,570 ಮತಗಳನ್ನು ಪಡೆದಿದ್ದ ಕಾಂಗ್ರೆಸ್‌ ಪಕ್ಷ, ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣ ನೆಲ ಕಚ್ಚಿದೆ. ಬಿ.ಎನ್‌. ಚಂದ್ರಪ್ಪ 50,121, ಎ. ನಾರಾಯಣಸ್ವಾಮಿ 79,658 ಮತ ಗಳಿಸಿದ್ದಾರೆ. ಬಿಜೆಪಿ 29,537 ಲೀಡ್‌ ಪಡೆದಿದೆ.

ಹೊಳಲ್ಕೆರೆ: ಮಾಜಿ ಸಚಿವ ಎಚ್. ಆಂಜನೇಯ ಅವರ ಸ್ವಕ್ಷೇತ್ರದಲ್ಲಿ ಬಿಜೆಪಿ 38,082 ಮತಗಳ ಲೀಡ್‌ ಪಡೆದುಕೊಂಡಿದೆ. ಬಿ.ಎನ್‌. ಚಂದ್ರಪ್ಪ 59,398 ಹಾಗೂ ಎ. ನಾರಾಯಣಸ್ವಾಮಿ 97,480 ಮತ ಗಳಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಂ. ಚಂದ್ರಪ್ಪ 1,07,976 ಮತಗಳನ್ನು ಪಡೆದಿದ್ದರು. ಅವರಿಗಿಂತ ನಾರಾಯಣಸ್ವಾಮಿ 10,496 ಮತಗಳನ್ನು ಕಡಿಮೆ ಪಡೆದಿರುವುದು ಬಿಜೆಪಿ ನಾಯಕರು ಯೋಚನೆ ಮಾಡುವಂತೆ ಮಾಡಿದೆ.

ಚಳ್ಳಕೆರೆ: ವಿಧಾನಸಭಾ ಚುನಾವಣೆಯಲ್ಲಿ ಟಿ. ರಘುಮೂರ್ತಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ ಪಕ್ಷದ ಮಾನ ಉಳಿಸಿದ್ದರು. ರಘುಮೂರ್ತಿಯವರು ಕ್ಷೇತ್ರದ ಮೇಲೆ ಹಿಡಿತ ಹೊಂದಿರುವುದರಿಂದ ಅಲ್ಲಿ ಮೈತ್ರಿ ಅಭ್ಯರ್ಥಿಗೆ ಅತ್ಯಲ್ಪ ಲೀಡ್‌ ದೊರೆತಿದೆ. ಬಿ.ಎನ್‌. ಚಂದ್ರಪ್ಪ 72,987 ಹಾಗೂ ಎ. ನಾರಾಯಣಸ್ವಾಮಿ 70,223 ಮತಗಳನ್ನು ಪಡೆದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 33,471 ಮತ ಗಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ 72,874 ಹಾಗೂ ಜೆಡಿಎಸ್‌ ಅಭ್ಯರ್ಥಿ 59,335 ಮತಗಳನ್ನು ಪಡೆದಿದ್ದರು. ಮೈತ್ರಿ ಪಕ್ಷಗಳ ಮತಗಳನ್ನು ಒಟ್ಟುಗೂಡಿಸಿದರೆ 1,32,209 ಮತಗಳಾಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕೇವಲ 2764 ಮತಗಳ ಮುನ್ನಡೆಯನ್ನು ಮೈತ್ರಿ ಅಭ್ಯರ್ಥಿ ಪಡೆದಿದ್ದಾರೆ. ಹಾಗಾಗಿ ಈ ಬಗ್ಗೆ ದೋಸ್ತಿ ಪಕ್ಷಗಳ ಮುಖಂಡರು ಗಂಭೀರ ಚಿಂತನೆ ನಡೆಸಬೇಕಿದೆ.

ಶಿರಾ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 16 ಸಾವಿರ ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಬಿ. ಸತ್ಯನಾರಾಯಣ 74,338 ಮತಗಳು ಹಾಗೂ ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ 63,973 ಮತಗಳನ್ನು ಪಡೆದಿದ್ದರು. ಇಬ್ಬರ ಮತಗಳನ್ನು ಸೇರಿಸಿರೆ 1,38,311 ಮತಗಳಾಗುತ್ತವೆ. ಆದರೆ ಆಶ್ವರ್ಯ ಎಂದರೆ ಇಲ್ಲಿ ಬಿಜೆಪಿ 11,566 ಮುನ್ನಡೆ ಪಡೆದುಕೊಂಡಿದೆ. ಬಿ.ಎನ್‌. ಚಂದ್ರಪ್ಪ 67,937 ಮತ ಪಡೆದರೆ, ಎ. ನಾರಾಯಣಸ್ವಾಮಿ 79,503 ಮತ ಪಡೆದು ಅಚ್ಚರಿಗೆ ಕಾರಣರಾಗಿದ್ದಾರೆ.

ಪಾವಗಡ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 12 ಸಾವಿರ ಮತ ಪಡೆದಿದ್ದರು. ಬಿ.ಎನ್‌. ಚಂದ್ರಪ್ಪ 69,303, ಎ. ನಾರಾಯಣಸ್ವಾಮಿ 49,731 ಮತಗಳನ್ನು ಪಡೆದಿದ್ದಾರೆ. ಮೈತ್ರಿ ಅಭ್ಯರ್ಥಿಗೆ 19,572 ಮತಗಳ ಮುನ್ನಡೆ ಸಿಕ್ಕಿದೆ. ಕಾಂಗ್ರೆಸ್‌ನ ವೆಂಕಟರಮಣಪ್ಪ 72,974 ಜೆಡಿಎಸ್‌ನ ಕೆ.ಎಂ. ತಿಮ್ಮರಾಯಪ್ಪ 72,565 ಮತಗಳನ್ನು ಪಡೆದಿದ್ದರು. ಇಬ್ಬರ ಮತಗಳನ್ನು ಸೇರಿಸಿದರೆ 1,45,539 ಆಗುತ್ತದೆ. ಆದರೆ ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಗೆ ಸಿಕ್ಕ ಲೀಡ್‌ ಗಮನಿಸಿದರೆ ಈ ಎರಡು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ತಾಳ ಮೇಳ ತಪ್ಪಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ತಗ್ಗಿದ ರಾಮುಲು ವರ್ಚಸ್ಸು?
ವಿಧಾನಸಭಾ ಚುನಾವಣೆಯಲ್ಲಿ ಬಿ. ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದರು. 84,018 ಮತಗಳನ್ನು ಗಳಿಸಿದ್ದ ಅವರು 42,045 ಮತಗಳ ಅಂತರದಿಂದ ಜಯಶಾಲಿಯಾಗಿದ್ದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ 85,607 ಮತಗಳನ್ನು ಗಳಿಸಿ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ (71,845 ಮತಗಳು) ಅವರಿಗಿಂತ 13,762 ಮತಗಳ ಲೀಡ್‌ ಪಡೆದಿದ್ದಾರೆ. ಮೋದಿ ಅಲೆ ಹಾಗೂ ಶ್ರೀರಾಮುಲು ನಾಯಕತ್ವ ಇದ್ದಾಗ್ಯೂ ಮೈತ್ರಿಕೂಟದ ಅಭ್ಯರ್ಥಿ ಲೀಡ್‌ ಪಡೆದಿರುವುದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವಂತೆ ಮಾಡಿದೆ.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.