ಭದ್ರಾ ಯೋಜನೆ ಪ್ರಸ್ತಾಪಿಸುವ ನೈತಿಕತೆ ಮೋದಿಗಿಲ್ಲ

ರಾಷ್ಟ್ರೀಯ ಯೋಜನೆಯಾಗಿಸುವಂತೆ ಮನವಿ ಮಾಡಿದರೂ ನಿರ್ಲಕ್ಷ್ಯ ಈಗೇಕೆ ಭದ್ರಾ ಮೇಲ್ದಂಡೆ ಯೋಜನೆ ನೆನಪು?: ಆಂಜನೇಯ

Team Udayavani, Apr 13, 2019, 4:19 PM IST

ಚಿತ್ರದುರ್ಗ: ಮಾಜಿ ಸಚಿವ ಎಚ್‌. ಆಂಜನೇಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಿತ್ರದುರ್ಗ: ಸಜ್ಜನ ರಾಜಕಾರಣಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪನವರ ಗೆಲುವಿಗೆ ಎರಡೂ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸುತ್ತಿದ್ದಾರೆ. ಹಾಗಾಗಿ ಚಂದ್ರಪ್ಪ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಚ್‌. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೋದಿ ಚಿತ್ರದುರ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿ ಯೊಳಗೆ ಪೂರ್ಣಗೊಳಿಸುವುದಾಗಿ ಪೊಳ್ಳು ಭರವಸೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಸಲ ಮನವಿ ಸಲ್ಲಿಸಿದರೂ ಕ್ಯಾರೇ ಎನ್ನದ ಮೋದಿ, ಈಗ ಭದ್ರಾ ಯೋಜನೆ ಪ್ರಸ್ತಾಪ ಮಾಡಿ ರೈತರ ವಿಶ್ವಾಸ
ಗಳಿಸುವ ಮಾತನಾಡಿರುವುದು ಎಷ್ಟು ಸರಿ ಎಂದು ಖಾರವಾಗಿ ಪ್ರಶ್ನಿಸಿದರು.

ತಾಂತ್ರಕ ಕಾರಣಗಳಿಂದ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದೆ. ಅಜ್ಜಂಪುರ ಸಮೀಪದ ಸುರಂಗ ಮಾರ್ಗದಲ್ಲಿ ಮೆದು ಮಣ್ಣು ಮತ್ತು ಮರಳು
ಬಂದಿದ್ದರಿಂದಾಗಿ ಕಾಮಗಾರಿ ನಿಧಾನವಾಗಿದೆ. ಈಗಾಗಲೇ ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ತಾಂತ್ರಿಕ ಅ ಧಿಕಾರಿಗಳು ಸುರಂಗ ಮಾರ್ಗದಲ್ಲಿ ಪರೀಕ್ಷಾರ್ಥ ಪ್ರಯೋಗ ನಡೆಸಿರುವುದು ಯಶಸ್ವಿಯಾಗಿದೆ. ಅಜ್ಜಂಪುರದಲ್ಲಿ ರೈಲ್ವೆ ಮಾರ್ಗದ ಬಳಿ ಒಂದಿಷ್ಟು ಕಾಮಗಾರಿ ಪೂರ್ಣಗೊಂಡಲ್ಲಿ ಶೀಘ್ರದಲ್ಲೇ ವಿವಿ ಸಾಗರಕ್ಕೆ ನೀರು ಹರಿಸಲಾಗುತ್ತದೆ. ಕಾಂಗ್ರೆಸ್‌ ಪಕ್ಷಕ್ಕೆ ಬದ್ಧತೆ ಇದ್ದು, ಭದ್ರಾ ಮೇಲ್ದಂಡೆ ಯೋಜನೆ ಈ ಭಾಗದ ಕನಸಿನ ಕೂಸು. ಇದನ್ನು ಪೂರ್ಣಗೊಳಿಸಿಯೇ ತೀರುತ್ತೇವೆ. ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಭರ್ತಿ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಅನುದಾನ ನೀಡಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಅಧಿ ಕಾರಕ್ಕೆ ಬಂದ ಕೂಡಲೇ ರೈತರ ಸಾಲ ಮನ್ನಾ
ಮಾಡಿದ್ದಾರೆ. ಮಾತ್ರವಲ್ಲ, ರೈತರ ಖಾತೆಗಳಿಗೆ ಸಾಲ ಮನ್ನಾ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು 24 ಗಂಟೆಯೊಳಗೆ ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ಹೇಳಿ ವರ್ಷಗಳೇ ಕಳೆದಿವೆ. ಆದರೂ
ಏಕೆ ಮಹದಾಯಿ ಯೋಜನೆ ಜಾರಿ ಮಾಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಬಿಜೆಪಿಯವರು ಭದ್ರಾ ಯೋಜನೆಗೆ ಅನುದಾನ ನೀಡಿಲ್ಲ ಎನ್ನುವ ಆರೋಪ ಮಾಡುತ್ತಿದ್ದಾರೆ. ಆದರೆ ಪ್ರತಿ ವರ್ಷ ನೀರಾವರಿ ಯೋಜನೆಗಳಿಗಾಗಿ 10 ಸಾವಿರ ಕೋಟಿ ರೂ. ಗಳನ್ನು ಖರ್ಚು ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ನಿಗಮವಿದ್ದು ಆ ನಿಗಮದ ಮೂಲಕ ಎಷ್ಟು ಬೇಕಾದರೂ
ಅನುದಾನವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ 2500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಬಿಜೆಪಿ ಸರ್ಕಾರ ಅಧಿ ಕಾರದಲ್ಲಿದ್ದಾಗ
ಕೇವಲ 500 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದು ಬಿಟ್ಟರೆ ಯಾವುದೇ ಕೆಲಸ ಆಗಿರಲಿಲ್ಲ. ಕಾಮಗಾರಿ ಅಡೆತಡೆಯಿಲ್ಲದೆ ನಡೆಯುತ್ತಿದೆ ಎಂದರು.

ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ, ಜಿಲ್ಲಾ ಲೋಕಸಭಾ ಉಸ್ತುವಾರಿ ಆರ್‌.ವಿ. ವೆಂಕಟೇಶ್‌, ಮಾಜಿ ಶಾಸಕ ಎ.ವಿ. ಉಮಾಪತಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ. ಯಶೋಧರ, ಪ್ರಧಾನ ಕಾರ್ಯದರ್ಶಿ ಬಿ. ಕಾಂತರಾಜ್‌, ಜೆಡಿಎಸ್‌ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಸಿ.ಟಿ. ಕೃಷ್ಣಮೂರ್ತಿ, ಜೆಡಿಎಸ್‌ ಮುಖಂಡರಾದ ಎಂ. ಜಯಣ್ಣ, ಗೋಪಾಲಸ್ವಾಮಿ ನಾಯಕ, ಪ್ರತಾಪ್‌ ಜೋಗಿ, ಗದ್ದಿಗೆ ಶ್ರೀನಿವಾಸ್‌, ಜೆಡಿಎಸ್‌ ಚಿತ್ರದುರ್ಗ ತಾಲೂಕು ಅಧ್ಯಕ್ಷ ತಿಮ್ಮಣ್ಣ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಶೇಖರ್‌, ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್‌.
ಮಂಜುನಾಥ್‌, ಕಾಂಗ್ರೆಸ್‌ ಮುಖಂಡರಾದ ಹನುಮಲಿ ಷಣ್ಮುಖಪ್ಪ, ಆರ್‌. ಶೇಷಣ್ಣ ಕುಮಾರ್‌, ಸಂಪತ್‌ ಕುಮಾರ್‌, ಎಪಿಎಂಸಿ ನಿರ್ದೇಶಕ ಜಯಣ್ಣ, ಮೈಲಾರಪ್ಪ ಮತ್ತಿತರರು ಇದ್ದರು.

ಸುಳ್ಳು ಹೇಳ್ಳೋದ್ರಲ್ಲಿ ಬಿಜೆಪಿ ನಾಯಕರು ನಿಸ್ಸೀಮರು
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸದಾ ಸುಳ್ಳುಗಳನ್ನೇ ಹೇಳುತ್ತಾ ಮುಗ್ಧ ಜನತೆಯನ್ನು ನಂಬಿಸುತ್ತಿದ್ದಾರೆ. ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಭರವಸೆ ಹುಟ್ಟಿಸಿ ಅಧಿಕಾರಕ್ಕೆ
ಬಂದ ಮೋದಿ, ನಂತರ 15 ಪೈಸೆಯನ್ನೂ ಹಾಕದೆ ಜನರನ್ನು ವಂಚಿಸಿದರು. ಉದ್ಯೋಗ ಸೃಷ್ಟಿಯನ್ನೂ ಮಾಡಲಿಲ್ಲ. ಇಂತಹ ಬಿಜೆಪಿಯಿಂದ ದೇಶಕ್ಕೆ ಯಾವುದೇ ಪ್ರಯೋಜನವಾಗದು ಎಂದು ಆಂಜನೇಯ ಟೀಕಿಸಿದರು.

ಮೋದಿಯವರ ಐದು ವರ್ಷದ ಆಡಳಿತ ನೋಡಿ ರೋಸಿ ಹೋಗಿರುವ ಜನತೆ
ಕಾಂಗ್ರೆಸ್‌ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲಿದ್ದಾರೆ. ರಾಜ್ಯದಲ್ಲಿ 20ಕ್ಕೂ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಗೆಲ್ಲಲಿದೆ.
.ಎಚ್‌. ಆಂಜನೇಯ, ಮಾಜಿ ಸಚಿವರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ