ಚಿತ್ರದುರ್ಗ: 132 ಜನರಿಗೆ ಹೊಸದಾಗಿ ಕೋವಿಡ್ 19 ಸೋಂಕು
Team Udayavani, Aug 26, 2020, 12:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 132 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 2,136 ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಹಿರಿಯೂರು 24, ಚಳ್ಳಕೆರೆ 46, ಹೊಸದುರ್ಗ 30, ಮೊಳಕಾಲ್ಮುರು 19 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 03 ಸೇರಿದಂತೆ ಒಟ್ಟು 132 ಕೋವಿಡ್ 19 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ ಸೋಂಕಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 603 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 132 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,136 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 34 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,522 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 589 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 549 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 15,231 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 34,416 ಜನರ ಮಾದರಿ ಸಂಗ್ರಹಿಸಲಾಗಿದ್ದು, 30,487 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,405 ಜನರ ವರದಿ ಬರುವುದು ಬಾಕಿ ಇದೆ. 388 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್