ಕ್ಷಯರೋಗಿಗಳಿಗೆ 6 ತಿಂಗಳು ಉಚಿತ ಚಿಕಿತ್ಸೆ: ಡಾ| ಶಿವಕುಮಾರ್‌


Team Udayavani, Jul 16, 2019, 11:30 AM IST

cd-tdy-2..

ಕೊಂಡ್ಲಹಳ್ಳಿ: ಕ್ಷಯರೋಗ ಪತ್ತೆ ಆಂದೋಲನಕ್ಕೆ ಗ್ರಾಪಂ ಅಧ್ಯಕ್ಷೆ ಈರಕ್ಕ ಚಾಲನೆ ನೀಡಿದರು.

ಕೊಂಡ್ಲಹಳ್ಳಿ: ಕ್ಷಯರೋಗಿಯ ಚಿಕಿತ್ಸೆಗೆ ಆರು ತಿಂಗಳ ನೇರ ನಿಗಾವಣೆ ಮೂಲಕ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಕೊಂಡ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಿವಕುಮಾರ್‌ ಹೇಳಿದರು.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೊಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಆಂದೋಲನ ಜು. 15 ರಿಂದ ಆರಂಭಗೊಂಡಿದ್ದು 27ರವರೆಗೆ ನಡೆಯಲಿದೆ. ಇದಕ್ಕೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನೊಳಗೊಂಡ ಆರು ತಂಡಗಳನ್ನು ರಚಿಸಲಾಗಿದೆ. ಆರೋಗ್ಯ ಕೇಂದ್ರದ ವ್ಯಾಪ್ತಿಯ ಕೊಂಡ್ಲಹಳ್ಳಿ ಎಸ್‌ಸಿ ಕಾಲೋನಿ, ಮಾರಮ್ಮನಹಳ್ಳಿ,ಬೆಳವಿನಮರದಟ್ಟಿ, ಕೋನಸಾಗರ ಗ್ರಾಮಗಳಲ್ಲಿ ಗುರುತಿಸಲಾಗಿರುವ ಕ್ಷಯರೋಗ ಪೀಡಿತ ಪ್ರದೇಶ ವ್ಯಾಪ್ತಿಯ ಒಟ್ಟು 670 ಮನೆಗಳಿಗೆ ಈ ತಂಡಗಳು ಭೇಟಿ ನೀಡಿ ಕ್ಷಯ ರೋಗಿ ಪತ್ತೆ ಕಾರ್ಯ ಹಾಗೂ ಕಫ ಸಂಗ್ರಹಣೆ ಕಾರ್ಯ ಮಾಡಲಿವೆ. ಕಫವನ್ನು ಬಿ.ಜಿ. ಕೆರೆಯ ಡಿಎಂಸಿ ಲ್ಯಾಬ್‌ಗ ಕಳುಹಿಸಲಾಗುತ್ತದೆ. ಕಫದಲ್ಲಿ ಟಬ್ಯಬರ್‌ಕ್ಯುಲೋಸಿಸ್‌ ಬ್ಯಾಕ್ಟೀರಿಯ ಕಂಡು ಬಂದಲ್ಲಿ ಕ್ಷಯ ರೋಗ ಎಂದು ದೃಢಪಡಿಸಲಾಗುವುದು. ರೋಗ ಪತ್ತೆಯಾದ ವ್ಯಕ್ತಿಗೆ ಸರ್ಕಾರದಿಂದ ಆರು ತಿಂಗಳ ಕಾಲ ಉಚಿತ ಚಿಕಿತ್ಸೆ, ಪೌಷ್ಟಿಕ ಆಹಾರ ಸೇವನೆಗಾಗಿ ರೋಗಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 500 ರೂ. ನೀಡಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷೆ ಈರಕ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಫಾರ್ಮಾಸಿಸ್ಟ್‌ ವೆಂಕಟೇಶ ನಾಯಕ್‌, ಮಾರುತಮ್ಮ, ಮಾಲಾಶ್ರೀ, ಸವಿತಾ, ಶೋಭಾ ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.