ಅ. 2ರೊಳಗೆ ಬಹಿರ್ದೆಸೆಮುಕ್ತ ಗ್ರಾಮಗಳ ಘೋಷಣೆ: ರವೀಂದ್ರ

Team Udayavani, Sep 2, 2017, 2:46 PM IST

02-CHIT-2.jpg

ಚಿತ್ರದುರ್ಗ: ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಲಾಗಿದ್ದು, ಅಕ್ಟೋಬರ್‌ 2ರೊಳಗಾಗಿ ಬಹಿರ್ದೆಸೆ ಮುಕ್ತ ಗ್ರಾಮಗಳನ್ನು ಘೋಷಣೆ ಮಾಡಲಾಗುವುದು. ಬಾಕಿ ಇರುವ ಶೌಚಾಲಯಗಳ ನಿರ್ಮಾಣಕ್ಕೆ ಸೆಪ್ಟೆಂಬರ್‌ 9ರೊಳಗಾಗಿ ಮನೆಬಾಗಿಲಿಗೆ ಕಾರ್ಯಾದೇಶವನ್ನು ತಲುಪಿಸಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್‌. ರವೀಂದ್ರ ತಿಳಿಸಿದರು.

ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಾದ ಸಿದ್ದಾಪುರ, ಹೊಟ್ಟೆಪ್ಪನಹಳ್ಳಿ, ಲಕ್ಷ್ಮೀಪುರ ಮತ್ತು ಬುಡ್ನಹಟ್ಟಿ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 1,07,252
ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಬೇಕಾಗಿದ್ದು, ಈಗಾಗಲೇ 30,002 ಶೌಚಾಲಯ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಬಾಕಿ ಇರುವ 77,250 ಶೌಚಾಲಯಗಳ ನಿರ್ಮಾಣಕ್ಕೆ ಸೆ. 9ರೊಳಗಾಗಿ ಎಲ್ಲ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ನೀಡಲಾಗುತ್ತದೆ. 
ಮನೆಬಾಗಿಲಿಗೆ ಶೌಚಾಲಯ ಕಾರ್ಯಾದೇಶ ಮತ್ತು “ನಮ್ಮ ನಡೆ ಸ್ವಚ್ಛತೆಯೆಡೆಗೆ’ ಎಂಬ ಗುರಿಯನ್ನಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸುವ ಗುರಿ ಹೊಂದಲಾಗಿದೆ. ಮೊದಲ ಹಂತವಾಗಿ ಗ್ರಾಮ ಮಟ್ಟ, ನಂತರ ಗ್ರಾಪಂ ಮತ್ತು ತಾಲೂಕು ಮಟ್ಟದಲ್ಲಿ ಬಯಲು ಬಹಿರ್ದೆಸೆ ಮುಕ್ತವಾಗಿಸಲಾಗುವುದು. ಅಂತಿಮವಾಗಿ ನವೆಂಬರ್‌ 16ರೊಳಗೆ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸು ಪ್ರಯತ್ನ ಮಾಡಲಾಗುತ್ತಿದೆ. ಶೌಚಾಲಯ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಜಿಲ್ಲಾ ಪಂಚಾಯತ್‌ನಲ್ಲಿ 3 ಕೋಟಿ ರೂ. ಅನುದಾನ ಲಭ್ಯವಿದ್ದು, ಹೆಚ್ಚುವರಿ ಅನುದಾನದ ಅಗತ್ಯ ಇದ್ದಲ್ಲಿ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಹೇಳಿದರು. 

ಪ್ರತಿಯೊಬ್ಬ ಫಲಾನುಭವಿಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 15 ಸಾವಿರ ರೂ. ಹಾಗೂ ಸಾಮಾನ್ಯ ವರ್ಗದವರಿಗೆ 12 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಈ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.

ನಗರಂಗೆರೆ ಗ್ರಾಪಂ ವ್ಯಾಪ್ತಿಯ ಸಿದ್ದಾಪುರ, ಲಕ್ಷ್ಮೀಪುರ, ಹೊಟ್ಟೆಪ್ಪನಹಳ್ಳಿ ಗ್ರಾಮಗಳ ಸುಮಾರು 200 ಜನರಿಗೆ ಮತ್ತು ಬುಡ್ನಹಟ್ಟಿಯಲ್ಲಿ 150 ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ನೀಡಲಾಯಿತು. ತಾಪಂ ಅಧ್ಯಕ್ಷ ವೀರೇಶ್‌, ಸದಸ್ಯರಾದ ಗಿರಿಯಪ್ಪ, ಜಿಪಂ
ಉಪ ಕಾರ್ಯದರ್ಶಿ ಬಸವರಾಜಪ್ಪ, ಕಾರ್ಯನಿರ್ವಾಹಕ ಅಧಿಕಾರಿ 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.