ಮಾದಾರ ಚನ್ನಯ್ಯ ಶ್ರೀಗಳಿಂದ ಕರಡಿ ದತ್ತು ಸ್ವೀಕಾರ

Team Udayavani, May 26, 2020, 10:58 AM IST

ಮಾದಾರ ಚನ್ನಯ್ಯ ಶ್ರೀಗಳಿಂದ ಕರಡಿ ದತ್ತು ಸ್ವೀಕಾರ

ಚಿತ್ರದುರ್ಗ: ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಪರವಾಗಿ ಬಿಜೆಪಿ ಮುಖಂಡರಾದ ಕೆ.ಎಸ್‌. ನವೀನ್‌, ಮೋಹನ್‌ ಕರಡಿಯನ್ನು ದತ್ತು ಸ್ವೀಕರಿಸಿದರು.

ಚಿತ್ರದುರ್ಗ: ಮೃಗಾಲಯ ಪ್ರಾಧಿಕಾರದ ಮನವಿಗೆ ಸ್ಪಂದಿಸಿರುವ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೋಮವಾರ ಆಡುಮಲ್ಲೇಶ್ವರ ಕಿರು ಮೃಗಾಲಯದ ಕರಡಿಯನ್ನು ದತ್ತು ಸ್ವೀಕರಿಸಿದರು. ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡುವ ಉದ್ದೇಶದಿಂದ ಹಾಗೂ ಚಿತ್ರದುರ್ಗ ಕಿರು ಮೃಗಾಲಯವನ್ನು ಮೇಲ್ದರ್ಜೆಗೇರಿಸುವ ಪ್ರಯತ್ನದ ಭಾಗವಾಗಿ ಪ್ರಾಣಿಗಳನ್ನು ದತ್ತು ಸ್ವೀಕರಿಸಲು ಪ್ರಾಣಿಪ್ರಿಯರಿಗೆ ಆಹ್ವಾನ ನೀಡಲಾಗಿತ್ತು.

ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಇತ್ತೀಚೆಗೆ ಬಂದಿದ್ದ ಮೂರು ಕರಡಿಗಳಲ್ಲಿ ಒಂದನ್ನು ಮಾದಾರ ಚನ್ನಯ್ಯ  ಗುರುಪೀಠ ದತ್ತು ಪಡೆದಿದೆ. ಕರಡಿಗೆ ಒಂದು ವರ್ಷದ ಆಹಾರ, ನಿರ್ವಹಣೆ ಹಾಗೂ ವೈದ್ಯಕೀಯ ವೆಚ್ಚ ಸೇರಿ 97 ಸಾವಿರ ರೂ. ಚೆಕ್‌ ಅನ್ನು ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯಕ ಅವರಿಗೆ ಹಸ್ತಾಂತರಿಸಲಾಯಿತು.

ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ ಮಾತನಾಡಿ, ಸದ್ಯ ಕಿರು ಮೃಗಾಲಯದಲ್ಲಿ 22 ಪ್ರಭೇದದ ಪ್ರಾಣಿ ಮತ್ತು ಪಕ್ಷಿಗಳಿವೆ. 48 ಪಕ್ಷಿಗಳು ಹಾಗೂ 49 ಪ್ರಾಣಿಗಳು ಆಶ್ರಯ ಪಡೆದಿವೆ. ಮೂರು ಕರಡಿ, ಏಳು ಚಿರತೆಗಳಿವೆ. ಪಕ್ಷಿಗಳ ನಿರ್ವಹಣಾ ವೆಚ್ಚ ಇತರ ಪ್ರಾಣಿಗಳಿಗಿಂತ ಹೆಚ್ಚಾಗಿದೆ. ಕೃಷ್ಣಮೃಗ, ಜಿಂಕೆ, ಮೊಸಳೆ, ನರಿ, ಹೆಬ್ಟಾವು, ಕಾಡುಕೋಳಿ ಸೇರಿ ಹಲವು ವನ್ಯಜೀವಿಗಳನ್ನು ದತ್ತು ನೀಡಲು ಮೃಗಾಲಯ ಸಿದ್ಧವಿದೆ ಎಂದು ತಿಳಿಸಿದರು. ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದರೆ ಆದಾಯ ತೆರಿಗೆಯಿಂದ ವಿನಾಯಿತಿ ಸಿಗಲಿದೆ. ಕುಟುಂಬದ ಐವರು ಸದಸ್ಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತದೆ. ದತ್ತು ಸ್ವೀಕರಿಸಿದವರ ಹೆಸರನ್ನು ಪ್ರಾಣಿಯ ಆವರಣದಲ್ಲಿ ಬಿತ್ತರಿಸಲಾಗುತ್ತದೆ. ಆಮೆ ಮತ್ತು ಮೊಲವನ್ನು ಕೆಲವರು ಈಗಾಗಲೇ ದತ್ತು ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಲಾಕ್‌ಡೌನ್‌ ಘೋಷಣೆಯಾದ ಬಳಿಕ ಪ್ರವಾಸಿ ಚಟುವಟಿಕೆ ಸ್ಥಗಿತಗೊಂಡಿದ್ದು, ಕಳೆದ ಎರಡು ತಿಂಗಳಲ್ಲಿ ಸುಮಾರು 7 ಲಕ್ಷ ರೂ. ನಷ್ಟವಾಗಿದೆ. ವನ್ಯಜೀವಿಗಳ
ನಿರ್ವಹಣೆ ಕಷ್ಟವಾಗುತ್ತಿದೆ. ಪ್ರಾಣಿಪ್ರಿಯರು ದತ್ತು ಪಡೆದರೆ ಆಡುಮಲ್ಲೇಶ್ವರ ಕಿರು ಮೃಗಾಲಯ ಸಶಕ್ತವಾಗಲಿದೆ ಎಂದು ಮೃಗಾಲಯದ ಆರ್‌ಎಫ್‌ಒ ವಸಂತಕುಮಾರ್‌ ತಿಳಿಸಿದರು. ಎಸಿಫ್‌ ರಾಘವೇಂದ್ರ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಕೆ.ಎಸ್‌. ನವೀನ್‌, ಸಂಸದರ ಆಪ್ತ ಸಹಾಯಕ ಮೋಹನ್‌, ಷಣ್ಮುಖ ಇದ್ದರು.

ಮೃಗಾಲಯ ಅಭಿವೃದ್ಧಿಗೆ ವಾರ್ಷಿಕ 115 ಕೋಟಿ ಅನುದಾನ ಬೇಕು ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಪ್ರವಾಸೋದ್ಯಮ ಸ್ಥಗಿತಗೊಂಡಿತು. ಇದರಿಂದ ರಾಜ್ಯದ 9 ಮೃಗಾಲಯ ಸಂಕಷ್ಟಕ್ಕೆ ಸಿಲುಕಿವೆ. ಮೃಗಾಲಯಗಳ ಅಭಿವೃದ್ಧಿಗೆ ವಾರ್ಷಿಕ 115 ಕೋಟಿ ರೂ. ಅನುದಾನದ ಅಗತ್ಯವಿದೆ. ಪ್ರಸಕ್ತ ವರ್ಷ ಅಂದಾಜು 60 ಕೋಟಿ ರೂ. ಅನುದಾನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಪ್ರಾಣಿಗಳನ್ನು ದತ್ತು ಸ್ವೀಕರಿಸಿದರೆ ಅನುಕೂಲವಾಗುತ್ತದೆ ಎಂದು ಬಿ.ಪಿ.
ರವಿ ಮನವಿ ಮಾಡಿದರು. ಮೃಗಾಲಯಗಳನ್ನು ತೆರೆಯಲು ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ
ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಲಾಗುವುದು. ಎಲ್ಲವೂ ಸಹಜ ಸ್ಥಿತಿಗೆ ಬರಲು ಇನ್ನೂ ಕಾಲಾವಕಾಶ ಹಿಡಿಯಲಿದೆ ಎಂದರು.

ಟಾಪ್ ನ್ಯೂಸ್

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sada

Renuka Swamy ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿಕ್ಕಬೆನ್ನೂರು ಬಳಿ ಭೀಕರ ಅಪಘಾತ… ಮೂವರು ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಗಂಭೀರ

ಚಿಕ್ಕಬೆನ್ನೂರು ಬಳಿ ಭೀಕರ ಅಪಘಾತ… ಮೂವರು ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಗಂಭೀರ

Renukaswamy Case ಆರೋಪಿ ಅನು ತಂದೆ ಚಂದ್ರಪ್ಪ ಸಾವು

Renukaswamy Case ಆರೋಪಿ ಅನು ತಂದೆ ಚಂದ್ರಪ್ಪ ಸಾವು

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.