ಗಾಳಿ-ಬೆಳಕಿನಷ್ಟೇ ಯೋಗವೂ ಅನಿವಾರ್ಯ


Team Udayavani, May 22, 2018, 4:40 PM IST

cta-2.jpg

ಚಿತ್ರದುರ್ಗ: ಮನುಷ್ಯನಿಗೆ ಗಾಳಿ, ಬೆಳಕು, ನೀರು ಎಷ್ಟು ಮುಖ್ಯವೋ ಯೋಗವೂ ಅಷ್ಟೇ ಅನಿವಾರ್ಯ. ಇದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಈಶ್ವರೀಯ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಗದ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ವಿಶ್ವ ಯೋಗ ದಿನ ಘೋಷಿಸಿದರು. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನ ನೀಡಿ ಗೌರವಿಸಲಾಗಿದೆ. ಆಧುನಿಕ ವೈದ್ಯಕೀಯ ಚಿಕಿತ್ಸೆಯಿಂದ ಗುಣವಾಗದ ಕಾಯಿಲೆಗಳನ್ನು ಯೋಗ ಗುಣಪಡಿಸಿದೆ ಎಂದು ತಿಳಿಸಿದರು. 

ಪ್ರತಿಯೊಬ್ಬರೂ ಯೋಗ ಮಾಡುವುದರಿಂದ ಏಕಾಗ್ರತೆ ಸಾಧಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಯೋಗ ಸಾಧನೆಯ ಅವಶ್ಯಕತೆ ಹೆಚ್ಚಿದೆ. ನಾವು ಉಪಯೋಗಿಸುವ ಆಹಾರ, ನೀರು, ಉಸಿರಾಡುವ ಗಾಳಿ ಎಲ್ಲವೂ ಮಲಿನಗೊಂಡಿದೆ. ಇದರಿಂದ ರೋಗ ರುಜಿನಗಳಿಂದ ಬಳಲುವಂತಾಗಿದೆ. 

ಇವುಗಳಿಂದ ಸಾಧ್ಯವಿರುವಷ್ಟು ವಿಮುಕ್ತರಾಗಿ ಆರೋಗ್ಯವಂತರಾಗಿ, ದೀರ್ಘಾಯುಗಳಾಗಿ ಬದುಕಿ ಬಾಳಲು ಯೋಗಾಭ್ಯಾಸ, ಪ್ರಕೃತಿ ಚಿಕಿತ್ಸೆ ಅಗತ್ಯ. ಯೋಗಾಸನ ಮನುಷ್ಯನ ಶರೀರದ ರಚನಾ ಶಾಸ್ತ್ರದ ಆಧಾರದ ಮೇಲೆ ನಿಂತಿದೆ.

ಯೋಗಾಸನವೆಂಬುದು ಜಗತ್ತಿಗೆ ಭಾರತದ ದೊಡ್ಡ ಕೊಡುಗೆ. ಯೋಗಾಭ್ಯಾಸದಿಂದ ಜೀರ್ಣಾಂಗಗಳ ಶಕ್ತಿ ವೃದ್ಧಿಗೊಳ್ಳುತ್ತದೆ. ಇದರಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಶರೀರ ಸ್ವಾಸ್ಥ್ಯಕ್ಕಾಗಿ ಕೆಲವು ಯೋಗಾಸನಗಳನ್ನಾದರೂ ನಮ್ಮ ನಿತ್ಯ ಜೀವನದಲ್ಲಿ ಆಚರಣೆಯಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಹೇಳಿದರು.

ಮುಖ್ಯ ಆಯುಷ್‌ ಅಧಿಕಾರಿ ಸಿದ್ಧೇಶ್ವರ, ಯೋಗ ಗುರುಗಳಾದ ರಾಘವೇಂದ್ರ, ಸೋಮಣ್ಣ, ಹೇಮಾವತಿ, ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಇದ್ದರು.

ಬದಲಾಗುತ್ತಿರುವ ಆಧುನಿಕ ಆಹಾರ ಪದ್ಧತಿಯಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಉಂಟಾಗುತ್ತಿದೆ.
ಯೋಗ ಮಾಡುವುದರಿಂದ ಕಾಯಿಲೆಯಿಂದ ದೂರ ಇರಬಹುದು. ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಪ್ರತಿ ದಿನ ಯೋಗ ಮಾಡುವುದನ್ನು ಕಲಿಯಬೇಕು. 
 ಜಿ.ಎಚ್‌. ತಿಪ್ಪಾರೆಡ್ಡಿ, ಶಾಸಕರು

ಟಾಪ್ ನ್ಯೂಸ್

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

k s eshwarappa

ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ: ಈಶ್ವರಪ್ಪ ಸಮರ್ಥನೆ

ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಮೈಸೂರು: ಪಾನಮತ್ತನಾಗಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ!

ಮೈಸೂರು: ಪಾನಮತ್ತನಾಗಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ!

1-sfdsf-a

‘ರೈಡ್ ಫಾರ್ ಅಪ್ಪು’ ಪುನೀತ್ ನೆನಪಿಗಾಗಿ ಬೈಕ್ ಮೆರವಣಿಗೆ; ಹೆಲ್ಮೆಟ್ ಜಾಗೃತಿ

ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಾವು, ಇಬ್ಬರಿಗೆ ಗಾಯ

ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಾವು, ಇಬ್ಬರಿಗೆ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾನ ಕಾನೂನು-ನ್ಯಾಯ ಕಲ್ಪಿಸಿದ ಸಂವಿಧಾನ

ಸಮಾನ ಕಾನೂನು-ನ್ಯಾಯ ಕಲ್ಪಿಸಿದ ಸಂವಿಧಾನ

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

hiriyooru news

ಉಡುವಳ್ಳಿ ಕೆರೆಗೆ ಮಾಜಿ ಸಚಿವ ಸುಧಾಕರ್‌ ಬಾಗಿನ ಅರ್ಪಣೆ

hosapete news

ಪ್ರಕಾಶ ನಗರದಲ್ಲಿ ಸ್ಪಚ್ಚತೆ ಮರೀಚಿಕೆ-ಆಕ್ರೋಶ

chitradurga news

ಜಂತುಹುಳು ಬಾಧೆ ನಿವಾರಣೆಗೆ ಶ್ರಮಿಸಿ

MUST WATCH

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

ಹೊಸ ಸೇರ್ಪಡೆ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

15bjp

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

14price

ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ

ಕುಟುಂಬಗಳ ನಡುವೆ ಮಾರಾಮಾರಿ

ಕುಟುಂಬಗಳ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.