ಗ್ರಂಥಾಲಯ ಅಭಿವೃದ್ಧಿಗೆ ಅನುಮೋದನೆ

ನಗರ ಪ್ರಾಧಿಕಾರ ನಿಧಿಯಿಂದ 2020-21ನೇ ಸಾಲಿನ ಆಯವ್ಯಯದಲ್ಲಿ 3.14 ಲಕ್ಷಗಳನ್ನು ನೀಡಲಾಗಿದೆ

Team Udayavani, Mar 22, 2022, 6:15 PM IST

ಗ್ರಂಥಾಲಯ ಅಭಿವೃದ್ಧಿಗೆ ಅನುಮೋದನೆ

ಚಿತ್ರದುರ್ಗ: ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 87ನೇ ಜಿಲ್ಲಾ ಗ್ರಂಥಾಲಯ ಪ್ರಾಧಿ ಕಾರದ ಹಾಗೂ 2022-23ನೇ ಸಾಲಿನ ಆಯ-ವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಓದುಗರ ಬೇಡಿಕೆ ಹಾಗೂ ಸಾರ್ವಜನಿಕ ಸ್ಪರ್ಧಾತ್ಮಕ ಓದುಗರಿಂದ ಪುಸ್ತಕಗಳ ಬೇಡಿಕೆ ಪಟ್ಟಿ ಪಡೆದು ಓದುಗರಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಒದಗಿಸಬೇಕು. ಶಾಖಾ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ, ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಬೇಕು. ಗ್ರಂಥಾಲಯದಲ್ಲಿ ಓದುಗರಿಗೆ ಪುಸ್ತಕ ಸುಲಭವಾಗಿ ದೊರಕುವಂತೆ ವ್ಯವಸ್ಥಿತವಾಗಿ ಕ್ರಮವಹಿಸಿ, ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್‌. ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲಾ ಗ್ರಂಥಾಲಯದ ಕಾಂಪೌಂಡ್‌ ಗೋಡೆ ಪುನರ್‌ ನಿರ್ಮಾಣಕ್ಕೆ ನಿರ್ಮಿತಿ ಕೇಂದ್ರದಿಂದ ಅಂದಾಜುಪಟ್ಟಿ ಪಡೆಯಲಾಗಿದೆ. ಜಿಲ್ಲಾ ಮತ್ತು ನಗರ ಪ್ರಾಧಿಕಾರ ನಿಧಿಯಿಂದ 2020-21ನೇ ಸಾಲಿನ ಆಯವ್ಯಯದಲ್ಲಿ 3.14 ಲಕ್ಷಗಳನ್ನು ನೀಡಲಾಗಿದೆ.ಉಳಿದ ಅನುದಾನವನ್ನು ಕಾಮಗಾರಿ ಮುಕ್ತಾಯವಾದ ಬಳಿಕ ನೀಡಲಾಗುವುದು. ಹಿರಿಯೂರು ಶಾಖಾ ಗ್ರಂಥಾಲಯಕ್ಕೆ ಹೆಚ್ಚಿನ ಓದುಗರು ಬರುವುದರಿಂದ ಹೆಚ್ಚುವರಿಯಾಗಿ 2ನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ಬೇಡಿಕೆ ಇದೆ. ಹಾಗಾಗಿ ಇಲಾಖೆಯಿಂದ ಹಣ ಬಿಡುಗಡೆಯಾದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.

12 ಲಕ್ಷ ಡಿಜಿಟಲ್‌ ಸದಸ್ಯತ್ವ ನೋಂದಣಿ:
ಚಿತ್ರದುರ್ಗ ಜಿಲ್ಲೆಯಲ್ಲಿ 2022ರ ಮಾರ್ಚ್‌ 20ರ ಅಂತ್ಯಕ್ಕೆ 12,71,838 ಡಿಜಿಟಲ್‌ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದಾರೆ. ರಾಜ್ಯದಲ್ಲಿ ಚಿತ್ರದುರ್ಗ ಆರನೇ ಸ್ಥಾನದಲ್ಲಿದೆ. 2022 ಮಾರ್ಚ್‌ 20ರ ಅಂತ್ಯಕ್ಕೆ ಇಲಾಖೆಯಲ್ಲಿ 2,23 ಕೋಟಿ ಡಿಜಿಟಲ್‌ ಸದಸ್ಯತ್ವ ಹೊಂದಿದ್ದಾರೆ. 2022-23ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾ ಧಿಕಾರದಲ್ಲಿ ಒಟ್ಟು ರೂ.98 ಲಕ್ಷ ಅಂದಾಜು ಆದಾಯದ ನಿರೀಕ್ಷೆ ಇದೆ. ಇದರಲ್ಲಿ ಅಂದಾಜು 77.90 ಲಕ್ಷ ವ್ಯಯವಾಗುವ ನಿರೀಕ್ಷೆ ಇದೆ. ರೂ.2.10ಲಕ್ಷ
ಉಳಿತಾಯವಾಗಲಿದೆ ಎಂದರು.

ಗ್ರಂಥಾಲಯ ಅಭಿವೃದ್ಧಿಗೆ ಹಲವು ವಿಷಯಗಳಿಗೆ ಸಭೆ ಅನುಮೋದನೆ ನೀಡಿತು. ಸಭೆಯಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಸಿ.ಬಿ.ಶೈಲ, ಲಿಂಗರಾಜು, ಚೋಳಗಟ್ಟ ಗ್ರಾಪಂ ಸದಸ್ಯ ಸುರೇಶ್‌ ಉಗ್ರಾಣ, ಎಂ.ಕೆ. ಹಟ್ಟಿ ಗ್ರಾಪಂ ಸದಸ್ಯೆ ನಾಗರತ್ನಮ್ಮ, ಡಿಡಿಪಿಇ ಕೆ.ರವಿಶಂಕರ್‌ ರೆಡ್ಡಿ, ಹೊಳಲ್ಕೆರೆ ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಸೇರಿದಂತೆ ಗ್ರಂಥಾಲಯ ಸಿಬ್ಬಂದಿ ಇದ್ದರು.

ಪ್ರಾಧಿಕಾರಕ್ಕೆ ಡಾ| ಲೋಕೇಶ ಅಗಸನಕಟ್ಟೆ ಉಪಾಧ್ಯಕ್ಷ ಜಿಲ್ಲಾ ಗ್ರಂಥಾಲಯ ಪ್ರಾ ಧಿಕಾರ ಸಮಿತಿಯ ಉಪಾಧ್ಯಕ್ಷರಾಗಿ ಕವಿ, ವಿಮರ್ಶಕ, ಕಥೆಗಾರ
ಡಾ| ಲೋಕೇಶ ಅಗಸನಕಟ್ಟೆ ಅವರನ್ನು ಸಭೆಯು ಸರ್ವಾನುಮತದಿಂದ ನೇಮಕ ಮಾಡಿತು. ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರು ನೂತನ ಉಪಾಧ್ಯಕ್ಷರಿಗೆ ಪುಸ್ತಕ ನೀಡುವ ಶುಭ ಕೋರಿದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.