BJP ತತ್ ಕ್ಷಣವೇ ಶಾಸಕ ಎಂ.ಚಂದ್ರಪ್ಪ ರನ್ನು ಉಚ್ಚಾಟಿಸಬೇಕು: ದಸಂಸ

ಕೇಂದ್ರ ಸಚಿವ ನಾರಾಯಣಸ್ವಾಮಿ, ಕಾರಜೋಳ ಸೋಲಿಗೆ ಕಾರಣೀಕರ್ತರು ಹೇಳಿಕೆ

Team Udayavani, Jun 4, 2023, 10:17 PM IST

1-saddsaddadsadasd

ಹೊಳಲ್ಕೆರೆ : ಕೇಂದ್ರ ಸಚಿವ ನಾರಾಯಣಸ್ವಾಮಿ ಹಾಗೂ ಗೋವಿಂದ ಕಾರಜೋಳ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣಿಕರ್ತರು ಎಂದು ಹೇಳಿಕೆ ನೀಡುವುದರ ಜತೆಗೆ ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ಸಮದಾಯಕ್ಕೆ ಅಪಮಾನ ಮಾಡಿರುವ ಶಾಸಕ ಎಂ.ಚಂದ್ರಪ್ಪ ಅವರನ್ನು ಬಿಜೆಪಿ ಪಕ್ಷ ತತ್ ಕ್ಷಣವೇ ಉಚ್ಚಾಟಿಸಬೇಕೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯ್ಯಣ್ಣ ಆಗ್ರಹಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಶಾಸಕ ಎಂ.ಚಂದ್ರಪ್ಪ ಇವರಿಗೆ ಪ್ರವಾಸಿ ಮಂದಿರದಲ್ಲಿ ಮುತ್ತಿಗೆ ಹಾಕಿದ ದಲಿತ ಸಂಘರ್ಷ ಸಮಿತಿ ಸದಸ್ಯರು ಕಾರ‍್ಯಕ್ರಮ ಒಂದರಲ್ಲಿ ಶಾಸಕ ಎಂ.ಚಂದ್ರಪ್ಪ ಮಾದಿಗ ಸಮುದಾಯ ಬಿಜೆಪಿಗೆ ಮತ ನೀಡಿಲ್ಲ. ಕೇಂದ್ರ ಸಚಿವ ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಮಾತು ಕೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳಮಿಸಲಾತಿ ಜಾರಿಗೆ ತಂದಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಎಂದು ಹೇಳಿಕೆ ನೀಡಿದ್ದಾರೆ. ಜತೆ ಮಾದಿಗ ಸಮುದಾಯವ ಬಗ್ಗೆ ಅಪಮಾನಕರವಾದ ರೀತಿಯಲ್ಲಿ ಮಾತನಾಡಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹಾಗಾಗಿ ತಕ್ಷಣವೇ ಬಿಜೆಪಿ ಪಕ್ಷದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಆಗ್ರಹಿಸಿದರು.

ಹಲವಾರು ದಶಕಗಳಿಂದ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಲು ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಶ್ರಮಿಸಿದ್ದಾರೆ. ಮಾದಿಗ ಸಮುದಾಯ ಸಾಕಷ್ಟು ಕಡೆಗಳಲ್ಲಿ ಬಿಜೆಪಿ ಪಕ್ಷದ ಪರವಾಗಿ ನಿಂತಿರುವ ಪರಿಣಾಮ ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಧಿಕಾರಕ್ಕೆ ಬಂದಿದೆ. ಅದರ ಅರಿವಿಲ್ಲದೆ ಪಕ್ಷದಲ್ಲಿರುವ ಮಾದಿಗ ಸಮುದಾಯದ ಮುಖಂಡರ ಬಗ್ಗೆ ಅಪಮಾನಕರ ಹೇಳಿಕೆ ನೀಡಿದ್ದಾರೆ. ಪಕ್ಷದ ಇವರ ವಿರುದ್ದ ಕೂಡಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯದ ಎಲ್ಲೆಡೆ ಸಮುದಾಯದಿಂದ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ ಎಂದು ತಿಳಿಸಿದರು.

ಮುಖಂಡರಾದ ಡಿ.ಆರ್.ಪಾಂಡುರಂಗಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸೋಲಲು ಮಾದಿಗ ಸಮುದಾಯದ ಬಿಜೆಪಿ ನಾಯಕರೇ ಕಾರಣವೆಂಬ ಹೇಳಿಕೆ ಪಕ್ಷ ವಿರೋಧಿ ಜತೆ ಸಮುದಾಯದಕ್ಕೆ ಮಾಡಿರುವ ಅಪಮಾನ. ಹಲವಾರು ದಶಕಗಳಿಂದ ಬಿಜೆಪಿಯನ್ನು ಕಟ್ಟಿಬೆಳೆಸಿದ್ದು ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಹಾಗೂ ಗೋವಿಂದಕಾರಜೋಳ, ಕ್ಷೇತ್ರದಲ್ಲಿ ಕೇಂದ್ರ ಸಚಿವರಿಗೆ ಅಪಾರವಾಗಿ ಬೆಂಬಲ ನೀಡಿದೆ. ವಿಧಾನ ಸಭಾ ಚುನಾವಣೆಯಲ್ಲಿ ಕೆಲವರು ಬಿಜೆಪಿ ಪಕ್ಷವನ್ನು ಬೆಂಬಲಿಸಿದ ಪರಿಣಾಮವಾಗಿ ಪಕ್ಷದ ಗೆಲುವು ಸಾಧಿಸಿದೆ. ಅದರೂ ಸಮುದಾಯವನ್ನು ಕುರಿತು ಹೇಳಿಕೆ ನೀಡುವಾಗ ಶಾಸಕ ಎಂ.ಚಂದ್ರಪ್ಪ ಎಚ್ಚರಿಕೆ ವಹಿಸಿ ವಹಿಸಬೇಕು. ಈ ಸಂಬಂಧ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳುವ ಬಗ್ಗೆ ಪ್ರವಾಸಿ ಮಂದಿರದಲ್ಲಿ ತಿರ್ಮಾನ ಮಾಡಿದೆ. ಹಾಗಾಗಿ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳು ಸಮುದಾಯದ ಜನರು ಬರಬೇಕು. ಒಳಮಿಸಲಾತಿಯನ್ನು ಕುರಿತು ಆಕ್ಷೇಪ ವ್ಯಕ್ತಪಡಿಸಿ ಪರಿಶಿಷ್ಟ ಜಾತಿ ಜನರನ್ನು ಒಡೆದು ಆಳುವ ನೀತಿ ವಿರುದ್ದ ಉಗ್ರ ಹೋರಾಟ ನಡೆಸಬೇಕೆಂದು ತಿಳಿಸಿದರು. ಮುಖಂಡರಾದ ಪಾಡಿಗಟ್ಟೆ ಸುರೇಶ್ ಸೇರಿದಂತೆ ಹಲವಾರು ಮುಖಂಡರು ಶಾಸಕ ಎಂ.ಚಂದ್ರಪ್ಪ ರಿಗೆ ತೀವ್ರವಾದ ತರಾಟೆ ತೆಗೆದುಕೊಂಡರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.