ಕಾರು-ಕ್ರೂಸರ್ ನಡುವೆ ಭೀಕರ ಅಪಘಾತ: ನಾಲ್ವರ ಸಾವು, 7 ಜನರಿಗೆ ಗಂಭೀರ ಗಾಯ

Team Udayavani, Sep 22, 2019, 8:15 AM IST

ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿ, 7 ಜನ ಗಂಭೀರ ಗಾಯಗೊಂಡ ದುರ್ಘಟನೆ  ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗೌತಮ್ ಸಿಂಗ್ , ಮದನ್ ಸಿಂಗ್ , ಮುಖೇಶ್ ಸಿಂಗ್ , ಲೋಕೇಶ್ ಎಂದು ಗುರುತಿಸಲಾಗಿದದ್ದು, ಮೃತ ಲೋಕೇಶ್ ಹಾಸನ ಜಿಲ್ಲೆ ಅರಸಿಕೆರೆ ಮೂಲದವರು.

ಗಣೇಶೋತ್ಸವ ಸಮಾರಂಭಕ್ಕೆ ತೆರಳಿದ್ದ ಲೋಕೇಶ್ ಕ್ರೂಸರ್ ನಲ್ಲಿ ಮಧ್ಯರಾತ್ರಿ ವೇಳೆ ಹಿಂದಿರುಗುತ್ತಿದ್ದೆರು. ಈ ವೇಳೆ ಕಾರಿಗೆ ಮುಖಾಮುಖಿ ಅಪಘಾತವಾಗಿದ್ದು, ಕಾರಿನಲ್ಲಿದ್ದ ಮೂವರು ಸೇರಿ ಲೋಕೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಗಾಯಗೊಂಡವರನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚರ್ಯರ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ