
Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ
ಬಿಎಸ್‌ವೈ ಬಿಜೆಪಿ ಸಂಸದರನ್ನು ಪ್ರಧಾನಿ ಬಳಿ ಕರೆದೊಯ್ಯಲಿ
Team Udayavani, Sep 27, 2023, 7:48 PM IST

ಚಳ್ಳಕೆರೆ:ಕಾವೇರಿ ನೀರಿನ ಸಮಸ್ಯೆ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಮಾಡುವುದನ್ನು ಬಿಟ್ಟು ಬಿಜೆಪಿ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಬಳಿ ಕರೆದುಕೊಂಡು ಹೋಗಿ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಲಿ. ತಮ್ಮ ರಾಜಕೀಯ ಸ್ವಪ್ರತಿಷ್ಠೆಗಾಗಿ ಕಾಂಗ್ರೆಸ್ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಹಿರಿಯ ಮುತ್ಸದ್ಧಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನ್ಯಾಯಾಲಯದ ಆದೇಶದ ಬಗ್ಗೆ ಅರಿವಿದೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಿದೆ. ಜತೆಗೆ ರಾಜ್ಯದ ಜನರ ಹಿತರಕ್ಷಣೆಯನ್ನೂ ಮಾಡಬೇಕಿದೆ.
ನ್ಯಾಯಾಲಯದಲ್ಲಿ ನಮ್ಮ ವಕೀಲರು ಸಮರ್ಥ ವಾದ ವಾದ ಮಂಡಿಸಿದರೂ 2018ರ ತೀರ್ಪಿನಂತೆ ನಡೆದುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದರು.
ಅಸ್ತಿತ್ವ ಉಳಿಸಿಕೊಳ್ಳಲು ಮೈತ್ರಿ ನಾಟಕ:
ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಸೋಲಿನ ರುಚಿ ತೋರಿಸಿದ್ದಾರೆ. 69 ಸ್ಥಾನ ಪಡೆದ ಬಿಜೆಪಿ, 19 ಸ್ಥಾನ ಪಡೆದ ಜೆಡಿಎಸ್‌ನಿಂದ ಏನು ಮಾಡಲೂ ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ವೇಳೆ ಎರಡೂ ಪಕ್ಷಗಳು ಅಸ್ತಿತ್ವದಲ್ಲಿ ಇರುವುದಿಲ್ಲವೆಂಬ ಭಯ ಆ ಪಕ್ಷಗಳ ನಾಯಕರನ್ನು ಕಾಡುತ್ತಿದೆ. ಹಾಗಾಗಿ ಅಸ್ತಿತ್ವ ಉಳಿಸಿಕೊಳ್ಳಲು ಮೈತ್ರಿ ನಾಟಕ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ನಿಯಮಗಳಲ್ಲಿ ಮಾರ್ಪಾಡು ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ. ಪಠ್ಯ ಬದಲಾವಣೆ ಮಾಡಬೇಕೆಂಬ ಒತ್ತಾಯವೂ ಇದೆ. ಸರ್ಕಾರ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಬದಲಾವಣೆಯ ಅಗತ್ಯ ಇದ್ದಲ್ಲಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought ರಾಜ್ಯ ಸರಕಾರದಿಂದ ಜನತೆಗೆ ಬರಗಾಲ ಉಡುಗೊರೆ

Chiradurga; ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ

Chitradurga: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಜಾಮೀನು ರಹಿತ ಬಂಧನ ವಾರೆಂಟ್

Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ…

ಕಾಂಗ್ರೆಸ್ ಅರೆಬರೆ ಬೆಂದ ಗ್ಯಾರಂಟಿಗಳನ್ನು ನೀಡಿ ಜನರಿಗೆ ವಂಚಿಸುತ್ತಿದೆ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ

Election Result; ತೆಲಂಗಾಣ ಸರ್ಕಾರದ ವಿರುದ್ದ ಜನಾಕ್ರೋಶ: ಸಚಿವ ಪ್ರಿಯಾಂಕ್ ಖರ್ಗೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್ ಯಂತ್ರಗಳು