ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ

ಸ್ಥಳದಲ್ಲೇ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ

Team Udayavani, Feb 3, 2020, 1:02 PM IST

3-Febrauary-11

ಚಳ್ಳಕೆರೆ: ಜನಸ್ಪಂದನ ಕಾರ್ಯಕ್ರಮದಿಂದ ಸಾರ್ವಜನಿಕರು ಸರ್ಕಾರಕ್ಕೆ ಸಂಬಂಧಪಟ್ಟ ಯಾವುದೇ ದಾಖಲಾತಿಗಳು, ಇನ್ನಿತರೆ ವಿಚಾರಗಳ ಬಗೆಹರಿಯದೇ ಇದ್ದಲ್ಲಿ ಸಭೆಯಲ್ಲಿಯೇ ಮಾಹಿತಿ ನೀಡಿ ಪರಿಹಾರ ಕಂಡುಕೊಳ್ಳುವಂತೆ ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ ತಿಳಿಸಿದರು.

ತಳಕು ಹೋಬಳಿಯ ದೊಣೆಹಳ್ಳಿ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಚಳ್ಳಕೆರೆ ತಾಲೂಕಿನ ಈ ಹೋಬಳಿ ಕೇಂದ್ರದ ಬಹುತೇಕ ಗ್ರಾಮಗಳು ಆಂಧ್ರ ಪ್ರದೇಶದ ವ್ಯಾಪ್ತಿಗೆ ಬರುತ್ತಿದ್ದು, ಅಲ್ಲಿನ ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ಹಿಂಜರಿಯದೆ ನೇರವಾಗಿ ಸಭೆಯಲ್ಲಿ ಭಾಗವಹಿಸಿ ಸಮಸ್ಯೆ ತಿಳಿಸಿದಲ್ಲಿ ಇಲ್ಲಿರುವ ಅಧಿಕಾರಿಗಳ ಸಹಕಾರ ಪಡೆದು ಪರಿಹಾರ ನೀಡಲಾಗುವುದು. ಈ ಸಭೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು,  ತಾಲೂಕು ಮಟ್ಟದ ಅಧಿ ಕಾರಿಗಳು ಸಹ ಇದ್ದು, ಇದು ಜನರಿಗೆ ಹೆಚ್ಚಿನ ರೀತಿಯಲ್ಲಿ ಉಪಯುಕ್ತವಾಗುತ್ತದೆ ಎಂದರು.

ಸಭೆಯಲ್ಲಿ ಗ್ರಾಮದ ವೃದ್ಧಾಪ್ಯ ವೇತನವೂ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪ್ರತಿ ನೀಡಲಾಯಿತು. ತಾಲೂಕು ಆಡಳಿತವೇ ನಿಮ್ಮ ಗ್ರಾಮಕ್ಕೆ ಬಂದಿದ್ದು, ಇದರ ಪೂರ್ಣ ಪ್ರಮಾಣದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಪಂ ಸದಸ್ಯ ತಿಮ್ಮಾರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರು ತಾಲೂಕು ಕಚೇರಿ ಹಾಗೂ ಇತರೆ ಕಚೇರಿಗೆ ಭೇಟಿ ನೀಡಿದರೆ, ಅಧಿಕಾರಿಗಳು ಸಿಗುವುದಿಲ್ಲವೆಂಬ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಸಿಬ್ಬಂದಿ ವರ್ಗವೂ ಸಹ ಸ್ಪಂದಿಸುತ್ತಿಲ್ಲವೆಂಬ ಮಾಹಿತಿ ಇದೆ. ಇಂದಿನ ಸಭೆಯಲ್ಲಿರುವ ಎಲ್ಲಾ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ವಿಚಾರದಲ್ಲಿ ಸದಾ ಜಾಗೃತರಾಗಿರಬೇಕು. ಕಾರಣ, ಗ್ರಾಮೀಣ ಭಾಗದಲ್ಲಿ ಹೆಚ್ಚು ತೊಂದರೆಯಲ್ಲಿರುವ ಬಡವರೇ ಕಚೇರಿಗಳಿಗೆ ಅಲೆಯುತ್ತಾರೆ. ಇವರ ಕಷ್ಟಗಳ ಬಗ್ಗೆ ಪರಿಹಾರ ಹುಡುಕುವುದು ಎಲ್ಲಾ ಅಧಿಕಾರಿಗಳ ಆದ್ಯ ಕರ್ತವ್ಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಂದಾಯಾ ಧಿಕಾರಿ ಮಹಮ್ಮದ್‌ ರಫೀ, ಇಂದಿನ ಸಭೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ನಿವೇಶನ, ಮನೆ, ರಸ್ತೆ ಮುಂತಾದ ಸಮಸ್ಯೆಗಳ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ. ಜಮೀನುಗಳ ಖಾತೆ ಹಾಗೂ ವರ್ಗಾವಣೆ ಸಂಬಂಧಪಟ್ಟಂತೆ ಕೆಲವೊಂದು ಸ್ಪಷ್ಟ ಮಾಹಿತಿ ನೀಡಬೇಕು. ಬೆಳೆ ವಿಮೆ ಸಂಬಂಧಪಟ್ಟಂತೆ ತಿದ್ದುಪಡಿ ಇದ್ದಲ್ಲಿ ಅದನ್ನು ಪರಿಶೀಲಿಸಲಾಗುವುದು ಎಂದರು.

ಪ್ರಭಾರ ಸಿಡಿಪಿಒ ಮೋಹನ್‌ಕುಮಾರಿ, ಸಮಾಜ ಕಲ್ಯಾಣಾಧಿಕಾರಿ ಮಂಜಪ್ಪ, ಲೋಕೋಪಯೋಗಿ ಇಂಜಿನಿಯರ್‌ ಸತ್ಯಪ್ಪ, ಪರಿಶಿಷ್ಟ ವರ್ಗದ ಕಲ್ಯಾಣಾಧಿ ಕಾರಿ ಮಾಲತಿ, ಕೃಷಿ ಅಧಿಕಾರಿ ಮೋಹನ್‌ಕುಮಾರ್‌ ಮುಂತಾದವರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.