ಕೊರೊನಾ ಕಾಲದಲ್ಲಿ ಮೈಮರೆಯದಿರಿ


Team Udayavani, May 5, 2021, 10:04 PM IST

5-14

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿನೇಟೆಡ್‌ ಬೆಡ್‌ ಗಳ ಸಂಖ್ಯೆಯನ್ನು 200ಕ್ಕೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಿ. ಇದಕ್ಕೆ ಬೇಕಾದ ಎಲ್ಲಾ ಅನುಮತಿಯನ್ನೂ ನಾನು ಕೊಡಿಸುತ್ತೇನೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಕೋವಿಡ್‌ನಿಂದ ಗುಣಮುಖರಾಗಿ ಬಂದಿರುವ ಶಾಸಕರು ಮಂಗಳವಾರ ನಗರದ ಪ್ರವಾಸಿಮಂದಿರದ ಆವರಣದಲ್ಲಿ ಕರೆದಿದ್ದ ಆರೋಗ್ಯ, ಶಿಕ್ಷಣ ಇಲಾಖೆ ಅ ಧಿಕಾರಿಗಳ ಸಭೆಯಲ್ಲಿ ಕೋವಿಡ್‌ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.

ಆರೋಗ್ಯ ಇಲಾಖೆ ಅ ಧಿಕಾರಿಗಳು ಈ ಸಂದರ್ಭದಲ್ಲಿ ಮೈಮರೆಯದೆ ಮುಂದಿನ ಒಂದೆರಡು ತಿಂಗಳು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜನ ಕೋವಿಡ್‌ 19 ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿದ್ದಾರೆ ಎಂದು ಎಚ್ಚರಿಸಿದರು. ಸದ್ಯ ಜಿಲ್ಲಾಸ್ಪತ್ರೆಯಲ್ಲಿ 175 ಆಮ್ಲಜನಕ ಸೌಲಭ್ಯ ಇರುವ ಬೆಡ್‌ಗಳಿದ್ದು, ಎಲ್ಲವೂ ಭರ್ತಿಯಾಗಿವೆ. 10 ವೆಂಟಿಲೇಟರ್‌ ಇರುವ ಬೆಡ್‌ ಹಾಗೂ 20 ಐಸಿಯು ಬೆಡ್‌ಗಳಿವೆ. ತಾಲೂಕುಗಳಲ್ಲಿ ಕೊರೊನಾ ತಪಾಸಣೆ ಮಾಡಿಸಿಕೊಂಡವರು ನೇರವಾಗಿ ಜಿಲ್ಲಾಸ್ಪತ್ರೆಗೆ ಬರುತ್ತಿರುವುದರಿಂದ ಇಲ್ಲಿ ಒತ್ತಡ ಹೆಚ್ಚಾಗಿದೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ಮಾಹಿತಿ ನೀಡಿದರು.

ಆಮ್ಲಜನಕ ಕಂಟೇನರ್‌ಗೆ ಚಿಂತನೆ: ಆಮ್ಲಜನಕ ಪೂರೈಕೆ ಮಾಡುವ ಜಂಬೂ ಸಿಲಿಂಡರ್‌ಗಳ ಕೊರತೆ ಉಂಟಾಗಿರುವುದರಿಂದ ಕಂಟೇನರ್‌ಗಳನ್ನು ಖರೀದಿಸಲು ಜಿಲ್ಲಾಡಳಿತ ಮುಂದಾಗಿದೆ. ಜಂಬೂ ಸಿಲಿಂಡರ್‌ಗಳು ಎಲ್ಲಿಯೂ ಲಭ್ಯವಾಗುತ್ತಿಲ್ಲ. ಪುಣೆಯಲ್ಲಿ ಇದಕ್ಕೆ ಪರ್ಯಾಯವಾಗಿ ಕಂಟೇನರ್‌ ತಯಾರಿಸಲಾಗುತ್ತಿದೆ. ಒಂದು ಕಂಟೇನರ್‌ 20 ಜಂಬೂ ಸಿಲಿಂಡರ್‌ಗೆ ಸಮ. ಪ್ರತಿ ತಾಲ್ಲೂಕು ಆಸ್ಪತ್ರೆಗೆ ಒಂದು ಕಂಟೇನರ್‌ ನೀಡುವ ಬಗ್ಗೆ ಜಿಲ್ಲಾಕಾರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿ ಕಾರಿ ತಿಳಿಸಿದರು. ಪ್ರತಿ ತಾಲೂಕಿಗೆ 40 ಲೀಟರ್‌ ಸಾಮರ್ಥ್ಯದ 12 ಜಂಬೂ ಸಿಲಿಂಡರ್‌ ಒದಗಿಸಲಾಗಿದೆ. ಪ್ರತಿ ಸಿಲಿಂಡರ್‌ನಲ್ಲಿ ನಿತ್ಯ 10 ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆಮ್ಲಜನಕ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ ಎಂದರು.

ನಿಮ್ಮದು ಟೆಕ್ನಿಕಲ್‌, ನನ್ನದು ಪ್ರಾಕ್ಟಿಕಲ್‌: ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾಕಷ್ಟು ಜನ ಸಾವು ನೋವು ಅನುಭವಿಸುತ್ತಿದ್ದಾರೆ. ಆದರೆ, ಆರೋಗ್ಯ ಇಲಾಖೆ ಅ ಕಾರಿಗಳು ನೀಡುತ್ತಿರುವ ಮಾಹಿತಿ ಮಾತ್ರ ಇಲ್ಲಿ ಏನೂ ಆಗಿಯೇ ಇಲ್ಲ ಎಂಬಂತೆ ಅಂಕಿ ಅಂಶ ನೀಡುತ್ತಿದೆ. ನಿಮ್ಮದು ಟೆಕ್ನಿಕಲ್‌ ಆಗಿ ಸರಿಯಾಗಿರಬಹುದು, ನನ್ನದು ಪ್ರಾಕ್ಟಿಕಲ್‌ ಆಗಿ ಸರಿಯಾಗಿದೆ. ಚಾಮರಾಜನಗರ ಘಟನೆಯ ನಂತರವಾದರೂ ಎಚ್ಚೆತ್ತು ಸರಿಯಾಗಿ ಕೆಲಸ ಮಾಡಿ ಎಂದು ಶಾಸಕರು ಸೂಚಿಸಿದರು. ರೆಮ್‌ಡಿಸಿವಿರ್‌ ಚುಚ್ಚುಮದ್ದು ವಿತರಣೆಯಲ್ಲಿ ತೊಂದರೆ ಉಂಟಾಗುತ್ತಿದೆ. ಸೂಚನೆ ನೀಡಿದ ಬಳಿಕ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೆಮ್‌ಡಿಸಿವಿರ್‌ ನೀಡಲಾಗಿದೆ. ಚಿತ್ರದುರ್ಗ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಮ್ಲಜಕದ ಕೊರತೆ ಉಂಟಾಗಿತ್ತು. ಐದು ಸಿಲಿಂಡರ್‌ ವ್ಯವಸ್ಥೆ ಮಾಡಿದ್ದೇನೆ. ಎಚ್ಚರ ತಪ್ಪಿದರೆ ಅಪಾಯ ಎದುರಾಗುತ್ತದೆ, ಜಾಗƒತೆಯಿಂದ ಕೆಲಸ ಮಾಡಿ ಎಂದರು.

ಶುಶ್ರೂಷಕರ ನೇಮಕಾತಿಗೂ ಲಂಚ: ಕಳೆದ ವರ್ಷ ಕೋವಿಡ್‌ ರೋಗಿಗಳ ಚಿಕಿತ್ಸೆಗಾಗಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವಾಗ ಅಕ್ರಮ ನಡೆದಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಪ್ರಸ್ತಾಪಿಸಿದರು. ನೇಮಕ ಮಾಡಿಕೊಂಡವರಿಗೆ 25 ಸಾವಿರ ರೂ. ವೇತನ ನೀಡುವುದಾಗಿ ಹೇಳಿ 11 ಸಾವಿರ ಮಾತ್ರ ನೀಡಲಾಗಿದೆ. ಈ ಕಾರಣಕ್ಕೆ ಒಬ್ಬ ವರ್ಗಾವಣೆಯಾಗಿದ್ದಾನೆ. ಕಳೆದ ವರ್ಷ ಕೆಲಸ ಮಾಡಿದವರು, ಈಗ ಮತ್ತೆ ಕೆಲಸ ಕೇಳಿಕೊಂಡು ಬಂದಾಗ ನಿರಾಕರಿಸದೇ ತೆಗೆದುಕೊಳ್ಳಿ, ಕಷ್ಟದ ಸಮಯದಲ್ಲಿ ಕೆಲಸ ಮಾಡಿವರಿಗೆ ಕೆಲಸ ಕೊಟ್ಟು ಮಾನವೀಯತೆ ಮೆರೆಯಿರಿ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜಪ್ಪ ಅವರಿಗೆ ಸೂಚಿಸಿದರು.

ಜೈನ ಸಮಾಜದ ಕೇರ್‌ ಸೆಂಟರ್‌: ಕಡಿಮೆ ರೋಗ ಲಕ್ಷಣಗಳನ್ನು ಹೊಂದಿದ ಸೋಂಕಿತರನ್ನು ಉಪಚರಿಸಲು ಜೈನ ಸಮಾಜ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲು ಮುಂದಾಗಿದೆ. ಇದಕ್ಕೆ ಅಗತ್ಯ ಅನುಮತಿ ನೀಡಿ ವೈದ್ಯರು, ಶುಶ್ರೂಷಕರನ್ನು ಒದಗಿಸಿ. ಇದರ ವೆಚ್ಚವನ್ನು ಸಮಾಜ ಭರಿಸಲಿದೆ ಎಂದು ಶಾಸಕರು ಸೂಚಿಸಿದರು. ಜೈನ ಸಮುದಾಯದ ಅನೇಕರು ಚಿಕ್ಕ ಮನೆಗಳನ್ನು ಹೊಂದಿದ್ದಾರೆ. ಸೋಂಕು ಕಾಣಿಸಿಕೊಂಡರೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಕಷ್ಟ ಸಾಧ್ಯ. ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಬಹುತೇಕ ಮನೆಗಳಲ್ಲಿ ಇಲ್ಲ. ಹೀಗಾಗಿ ಜೈನ ಸಮಾಜದ ಸೋಂಕಿತರಿಗೆ ಪ್ರತ್ಯೇಕವಾಗಿ ಆರೈಕೆ ಕೇಂದ್ರ ತೆರೆಯಲು ಅನುಮತಿ ಕೋರಿ ಜಿಲ್ಲಾಧಿ  ಕಾರಿಗೆ ಮನವಿ ಸಲ್ಲಿಸಿದ್ದಾರೆ. ಅವರಿಗೆ ಕೂಡಲೇ ಸ್ಪಂದಿಸಿ ಎಂದು ಹೇಳಿದರು. ಸಭೆಯಲ್ಲಿ ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ, ತಾಲೂಕು ಆರೋಗ್ಯಾ ಧಿಕಾರಿ ಡಾ| ಗಿರೀಶ್‌, ಡಿಡಿಪಿಐ ರವಿಶಂಕರ ರೆಡ್ಡಿ ಇದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.