ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ


Team Udayavani, May 9, 2021, 10:09 PM IST

9-19

ಹೊಳಲ್ಕೆರೆ: ಕೋವಿಡ್‌ ವೈರಸ್‌ ಸೋಂಕು ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಶ್ರಮಿಸಬೇಕು ಎಂದು ಪುರಸಭೆ ಅಧ್ಯಕ್ಷ ಆರ್‌.ಎ. ಅಶೋಕ್‌ ಸೂಚಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸಿದ್ಧತೆ ಹಾಗೂ ಆಸ್ಪತ್ರೆಯಲ್ಲಿರುವ ಕುಂದು ಕೊರತೆ ಪರಿಶೀಲಿಸಿ ಅವರು ಮಾತನಾಡಿದರು. ರಾಜ್ಯದ ಕೋವಿಡ್‌ ಸನ್ನಿವೇಶದಿಂದ ಜನರು ಭಯಭೀತರಾಗಿದ್ದಾರೆ. ತಾಲೂಕಿನ ಜನರನ್ನು ಕೋವಿಡ್‌ ಸೋಂಕಿನಿಂದ ರಕ್ಷಣೆ ಮಾಡಲು ಆರೋಗ್ಯ ಪೂರಕ ಸೇವೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಪುರಸಭೆಯಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ಭರವಸೆ ನೀಡಿದರು.

ಪುರಸಭೆ ಉಪಾಧ್ಯಕ್ಷ ಕೆ.ಸಿ.ರಮೇಶ್‌ ಮಾತನಾಡಿ, ಆಡಳಿತಾಧಿ ಕಾರಿಗಳು ಆಸ್ಪತ್ರೆಯಲ್ಲಿ ಗುಣಮಟ್ಟದ ಸೇವೆ ನೀಡುವ ನಿಟ್ಟಿನಲ್ಲಿ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ಸಹಕಾರ ನೀಡಲಿದ್ದೇವೆ. ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಸಾರ್ವಜನಿಕರಿಗೆ ತೊಂದೆಯಾಗುತ್ತಿದೆ. ವಿದ್ಯುತ್‌,ಕುಡಿಯುವ ನೀರು, ಸ್ವತ್ಛತೆಗೆ ಆದ್ಯತೆ ನೀಡಬೇಕೆಂದರು. ಮಾಜಿ ಅಧ್ಯಕ್ಷ ಬಿ.ಎಸ್‌. ರುದ್ರಪ್ಪ ಮಾತನಾಡಿ, ಆಸ್ಪತ್ರೆಯಲ್ಲಿ ಸರಿಯಾದ ಸೌಲಭ್ಯಗಳಿಲ್ಲದೆ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ.

ಇರುವ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿಲ್ಲ. ಬೇಕಾಬಿಟ್ಟಿಯಾಗಿ ಕೆಲಸ ಮಾಡಿದರೆ ಆರೋಗ್ಯ ಸೇವೆ ಜನರಿಗೆ ಸಿಗುವುದಿಲ್ಲ. ಕೋವಿಡ್‌ ನಿಯಂತ್ರಿಸಲು ಎಲ್ಲರೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕೆಂದು ತಿಳಿಸಿದರು. ಸದಸ್ಯ ಸೈಯದ್‌ ಸಜೀಲ್‌ ಮಾತನಾಡಿ, ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಮೇಲೆ ವೈದ್ಯಾಧಿಕಾರಿಗಳಿಗೆ ಹಿಡಿತವಿಲ್ಲ. ಸರ್ಕಾರ ಸೌಲಭ್ಯ ಕಲ್ಪಿಸಿದ್ದರೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡತ್ತಿಲ್ಲ. ಸಾಕಷ್ಟು ಸಮಸ್ಯೆಗಳಿದ್ದರೂ ವೈದ್ಯಾಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ.

ಇದರಿಂದ ಸಮಸ್ಯೆಗಳು ಹೆಚ್ಚಾಗಿ ಜನರಿಗೆ ಸರ್ಕಾರಿ ಸೌಲಭ್ಯ ಮರಿಚಿಕೆ ಎನ್ನುವಂತಾಗಿದೆ ಎಂದು ಆರೋಪಿಸಿದರು. ವಿಜಯಸಿಂಹ ಖಟ್ರೋತ್‌ ಮಾತನಾಡಿ, ವೈದ್ಯರು ಅಸ್ಪತ್ರೆಯ ಹೃದಯ ಎನ್ನಲಾಗುವ ತುರ್ತು ಚಿಕಿತ್ಸಾ ಘಟಕಕ್ಕೆ ಬೇಕಾದ ಸೌಲಭ್ಯ ಕಲ್ಪಿಸಿಲ್ಲ. ಶುಚಿತ್ವ, ಔಷಧ, ಸಿಬ್ಬಂದಿ, ವಿದ್ಯುತ್‌, ಆಂಬ್ಯುಲೆನ್ಸ್‌ ಸೌಲಭ್ಯ ಜನರಿಗೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸದಸ್ಯರಾದ ಮಲ್ಲಿಕಾರ್ಜುನ್‌, ಸೈಯದ್‌ ಮನ್ಸೂರು ಮಾತನಾಡಿದರು. ವೈದ್ಯಾಧಿಕಾರಿ ಡಾ| ಕೃಷ್ಣಮೂರ್ತಿ, ತಾಲೂಕು ಆರೋಗ್ಯಾ ಧಿಕಾರಿ ಡಾ| ಜಯಸಿಂಹ, ಸದಸ್ಯರಾದ ಪಿ.ಆರ್‌. ಮಲ್ಲಿಕಾರ್ಜುನಸ್ವಾಮಿ, ವಕೀಲ ಎಸ್‌. ವೇದಮೂರ್ತಿ, ಸಂತೋಷಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.