ಔಷಧ-ಆಕ್ಸಿಜನ್‌ ಪೂರೈಕೆಗೆ ಅಗತ್ಯ ಕ್ರಮ

Team Udayavani, May 12, 2021, 6:48 PM IST

12-11

ಚಿತ್ರದುರ್ಗ: ಜಿಲ್ಲೆಗೆ ಖಾಸಗಿ ಆಸ್ಪತ್ರೆಯಲ್ಲಿನ ಕೋವಿಡ್‌ ರೋಗಿಗಳ ಚಿಕಿತ್ಸೆಗಾಗಿ ಪ್ರತಿ ನಿತ್ಯ 300 ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ 800 ಸೇರಿ 1100 ರೆಮ್‌ ಡೆಸಿವರ್‌ ಚುಚ್ಚುಮದ್ದು ಅಗತ್ಯವಿದೆ. ಇದಕ್ಕಿಂತಲೂ ಕಡಿಮೆ ಪೂರೈಕೆಯಾಗುತ್ತಿರುವುದರಿಂದ ಸಮಸ್ಯೆಯಾಗಿದೆ.

ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪೂರೈಕೆಗೆ ಕ್ರಮ ವಹಿಸಲಾಗುತ್ತದೆ ಎಂದು ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಾಸಕರು ಹಾಗೂ ಜಿಲ್ಲಾ ಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿ ಕಾರಿಗಳೊಂದಿಗೆ ನಡೆಸಿದ ಕೋವಿಡ್‌ ನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆಯಲ್ಲಿ ಈಗಿರುವ 175 ಬೆಡ್‌ಗಳ ಜೊತೆಗೆ 200 ಹೆಚ್ಚುವರಿ ಬೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಪ್ರತಿನಿತ್ಯ 6 ಸಾವಿರ ಲೀಟರ್‌ ಆಕ್ಸಿಜನ್‌ ಬೇಕಾಗುತ್ತದೆ. ಇತರೆ ಸಾರ್ವಜನಿಕ ಆಸ್ಪತ್ರೆ, ಡೆಡಿಕೇಟೆಡ್‌ ಕೋವಿಡ್‌ ಕೇರ್‌ ಸೆಂಟರ್‌ಗಳು ಸೇರಿದಂತೆ ಒಟ್ಟು 16,154 ಲೀಟರ್‌ ಆಕ್ಸಿಜನ್‌ ಅಗತ್ಯವಿದ್ದು, ಸುಮಾರು 15,000 ಲೀಟರ್‌ ಪೂರೈಕೆಯಾಗುತ್ತಿದೆ ಎಂದರು.

ಎಸ್‌ಡಿಆರ್‌ಎಫ್‌ನಡಿ ಜಿಲ್ಲೆಗೆ 20 ಕೋಟಿ ರೂ. ಮಂಜೂರಾಗಿದ್ದು, ಇದರಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಇದು ನಿರ್ಮಾಣವಾಗಲಿದೆ. ಪ್ರತಿ ತಾಲೂಕಿನಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆ ಸೇರಿದಂತೆ ಜಿಲ್ಲೆಯಲ್ಲಿನ ಸ್ಟೀಲ್‌ ಇಂಡಸ್ಟ್ರೀಸ್‌ಗಳಲ್ಲಿ ಆಕ್ಸಿಜನ್‌ ಉತ್ಪಾದನೆ ಮಾಡಲು ಉತ್ತೇಜಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ವೇದಾಂತ ಕಂಪನಿಯಿಂದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ 100 ಹಾಸಿಗೆ ಸಾಮರ್ಥ್ಯದ ಟೆಂಟ್‌ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತಿದೆ. ಆದಷ್ಟು ಬೇಗ ಜನಸೇವೆಗೆ ಲಭ್ಯವಾಗಲಿದೆ ಎಂದ ಸಚಿವರು, ಜಿಲ್ಲೆಯ ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ರಕ್ಷಣಾ ಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾ ಧಿಕಾರಿ ಇ. ಬಾಲಕೃಷ್ಣ, ಡಿಎಚ್‌ಒ ಡಾ| ಸಿ.ಎಲ್‌. ಪಾಲಾಕ್ಷ, ಜಿಲ್ಲಾ ಸರ್ಜನ್‌ ಡಾ| ಬಸವರಾಜಪ್ಪ, ಜಿಲ್ಲಾ ಸರ್ವೇಕ್ಷಣಾಧಿ  ಕಾರಿ ಡಾ| ರಂಗನಾಥ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.