ಜಿಲ್ಲಾ ಕೋವಿಡ್‌ ಆಸ್ಪತ್ರೆ ಅವ್ಯವಸ್ಥೆ ಬಯಲು


Team Udayavani, May 17, 2021, 10:35 PM IST

17-18

ಚಿತ್ರದುರ್ಗ: ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಕಡಿಮೆ ಇದೆ ಎಂದು ಸಮಾಧಾನಪಡುತ್ತಿರುವಾಗಲೇ ಜಿಲ್ಲಾ ಕೋವಿಡ್‌ ಆಸ್ಪತ್ರೆಯ ಅವ್ಯವಸ್ಥೆ ಬಯಲಾಗಿದೆ. ಜಿಲ್ಲಾಸ್ಪತ್ರೆ ಪಕ್ಕದಲ್ಲೇ ಇರುವ ಜಿಲ್ಲಾ ಕೋವಿಡ್‌ ಆಸ್ಪತ್ರೆಯ ವಾರ್ಡ್‌ ನಂ. 13 ರಲ್ಲಿ ಒಂದೇ ಕೊಠಡಿಯಲ್ಲಿ ಮೂರು ಜನ ಮೃತಪಟ್ಟು ಬೆಡ್‌ಗಳ ಮೇಲೆಯೇ ಇರುವುದು, ಸ್ವತ್ಛತೆ ಇಲ್ಲದಿರುವುದು, ರೋಗಿಗಳನ್ನು ಸರಿಯಾಗಿ ಉಪಚರಿಸದಿರುವುದು ಸೇರಿದಂತೆ ಹಲವು ವಿಚಾರಗಳನ್ನು ವಕೀಲರಾದ ಹನುಮಂತರಾಜು ಎಂಬುವವರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಶನಿವಾರ ಹೊರ ಬಂದಿರುವ ವಿಡಿಯೋ ವೈರಲ್‌ ಆಗಿದ್ದು, ಸೋಂಕಿತರಾಗಿರುವ ವಕೀಲರು ಸೇರಿದಂತೆ ವಾರ್ಡ್‌ನಲ್ಲಿರುವ ರೋಗಿಗಳು ಆತಂಕದಲ್ಲಿ ಮೃತಪಟ್ಟವರ ಪಕ್ಕದಲ್ಲೇ ಕುಳಿತಿರುವುದು, ವೈದ್ಯರು ಸರಿಯಾಗಿ ಸ್ಪಂದಿಸಿ ಚಿಕಿತ್ಸೆ ನೀಡದಿರುವುದು, ಬೆಳಗ್ಗೆ 10 ಗಂಟೆಯಾದರೂ ಉಪಹಾರ ನೀಡದಿರುವುದು ಸೇರಿದಂತೆ ಹಲವು ವಿಚಾರಗಳನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿದಾಕ್ಷಣ ಅಕ್ಷರಶಃ ನರಕಸದೃಶ ಅನ್ನಿಸುತ್ತದೆ. ರಾತ್ರಿ 2 ಗಂಟೆಗೆ ಮೃತಪಟ್ಟಿರುವ ವ್ಯಕ್ತಿಗಳ ಶವವನ್ನು ಬೆಳಗ್ಗೆ 10 ಗಂಟೆಯಾದರೂ ಅಲ್ಲಿಂದ ತೆಗೆಯದೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ನಿರ್ಲಕ್ಷé ವಹಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕೋವಿಡ್‌ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾದವರ ಪಕ್ಕದಲ್ಲೇ ಒಂದೇ ವಾರ್ಡ್‌ನಲ್ಲಿ ಮೂರು ಮಂದಿ ಮೃತಪಟ್ಟು ನಾಲ್ಕೈದು ತಾಸು ಅಲ್ಲಿಯೇ ಮೃತದೇಹಗಳಿದ್ದರೆ ಇತರೆ ಸೋಂಕಿತರ ಮನಸ್ಸಿನಲ್ಲಿ ಎಂತಹ ಭಯ ಹುಟ್ಟಬಹುದು, ಅವರು ಚೇತರಿಸಿಕೊಳ್ಳಲು ಸಾಧ್ಯವೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಸಾಕಷ್ಟು ಹರಿದಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜಿಲ್ಲಾ ಧಿಕಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ, ಜಿಲ್ಲಾ ಆರೋಗ್ಯಾ ಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ವ್ಯಾಪಕ ಅಸಮಧಾನ ವ್ಯಕ್ತವಾಗಿದೆ. ವಿಡಿಯೋದಲ್ಲಿ ಏನಿದೆ?: ವಕೀಲರಾದ ಹನುಮಂತರಾಜು ಅವರು, ಜಿಲ್ಲಾಸ್ಪತ್ರೆಗೆ ನಾನು ಬಂದು ಎಂಟು ದಿನ ಆಗಿದೆ. ಸರಿಯಾದ ಚಿಕಿತ್ಸೆ ಇಲ್ಲ. ಜಿಲಾಧಿಕಾರಿ, ವೈದ್ಯರು ಯಾರಿಗೆ ಹೇಳಿದರೂ ಸ್ಪಂದಿಸುತ್ತಿಲ್ಲ. ರಾತ್ರಿ ಮೃತಪಟ್ಟ ವ್ಯಕ್ತಿಯ ಮೃತದೇಹ ಇಲ್ಲಿಯೇ ಇದೆ. ಇದೇನಾ ನಿಮ್ಮ ಆಡಳಿತ, ಯಡಿಯೂರಪ್ಪ, ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಉಸ್ತುವಾರಿ ಸಚಿವ ಶ್ರೀರಾಮುಲು ಇದ್ದೀರಾ ನೀವು. ಈ ರಾಜ್ಯದಲ್ಲಿ ಜೀವಕ್ಕೆ ಬೆಲೆ ಇಲ್ಲವೇ, ನೀವೆಲ್ಲಾ ಸತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಹೀಗೆ ಮುಂದುವರೆದರೆ ಪ್ರತಿಭಟನೆ ಮಾಡುತ್ತೇವೆ. ನಮ್ಮ ಜೀವಕ್ಕೆ ಹೆಚ್ಚು ಕಡಿಮೆ ಆದರೆ ಜಿಲ್ಲಾಡಳಿತವೇ ಹೊಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೃದ್ಧೆಯೊಬ್ಬರು ಮಾತನಾಡಿ, ರಾತ್ರಿ 2:30ಕ್ಕೆ ಮƒತಪಟ್ಟ ವ್ಯಕ್ತಿಯ ಮೃತದೇಹದ ಪಕ್ಕದಲ್ಲೇ ಇದ್ದೇವೆ. ಊಟ, ತಿಂಡಿ, ನೀರು, ಗಂಜಿ ಏನೂ ಇಲ್ಲ, ಸ್ವಲ್ಪವೂ ಸ್ವತ್ಛತೆ ಇಲ್ಲ ಎಂದು ದುಃಖ ತೋಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಭೇಟಿ: ಕೋವಿಡ್‌ ಆಸ್ಪತ್ರೆಯ ಅವ್ಯವಸ್ಥೆ ದರ್ಶನ ಮಾಡಿಸುವ ವಿಡಿಯೋ ವೈರಲ್‌ ಆಗುತ್ತಲೇ ಎಚ್ಚೆತ್ತ ಜಿಲ್ಲಾ ಕಾರಿ ಕವಿತಾ ಎಸ್‌. ಮನ್ನಿಕೇರಿ ಭಾನುವಾರ ಕೋವಿಡ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಡಿಯೋ ಚಿತ್ರಿಕರಣವಾಗಿದ್ದ ಕೋವಿಡ್‌ ವಾರ್ಡ್‌ ಸಂಖ್ಯೆ 13ಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿ ಕಾರಿಗಳು, ಅಲ್ಲಿನ ಸೋಂಕಿತರನ್ನು ಮಾತನಾಡಿಸಿ ಸಮಸ್ಯೆ ಆಲಿಸಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ವೃದ್ಧೆಯ ಆರೋಗ್ಯವನ್ನೂ ವಿಚಾರಿಸಿರುವ ಜಿಲ್ಲಾಧಿಕಾರಿಗಳು, ಊಟದ ಸಮಸ್ಯೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವೃದ್ಧೆ ಊಟದ ಸಮಸ್ಯೆ ಇಲ್ಲ, ಸ್ವತ್ಛತೆ ಇಲ್ಲ ಎಂದಿದ್ದಾರೆ. ಸ್ವತ್ಛತೆ ಕಾಪಾಡಿ ಮೃತದೇಹಗಳನ್ನು ಸಕಾಲಕ್ಕೆ ತೆಗೆಯಬೇಕು ಎಂದು ಆಸ್ಪತ್ರೆ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಖಡಕ್‌ ಸೂಚನೆ ನೀಡಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.