ಕೊರೊನಾತಂಕದಲ್ಲೂ ಎಸ್ಸೆಸ್ಸೆಲ್ಸಿ ಆನ್‌ಲೈನ್‌ ಪರೀಕ್ಷೆ ಯಶಸ್ವಿ

Team Udayavani, May 18, 2021, 9:41 PM IST

18-20

ನಾಯಕನಹಟ್ಟಿ: ಕೊರೊನಾ ಆತಂಕದ ನಡುವೆಯೂ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಸೋಮವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಜೂನ್‌ 21 ರಿಂದ ಆರಂಭವಾಗಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಹಾಗೂ ನಿರಂತರತೆಯನ್ನು ಕಾಪಾಡುವ ಉದ್ದೇಶದಿಂದ ಆನ್‌ಲೈನ್‌ ಪರೀಕ್ಷೆ ನಡೆಯಿತು. ಪ್ರತಿ ಶಾಲೆಯ ಮುಖ್ಯಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಾಟ್‌ Õಆ್ಯಪ್‌ ಗ್ರೂಪ್‌ಗ್ಳನ್ನು ರಚಿಸಿದ್ದಾರೆ.

ಪರೀಕ್ಷೆ ಆರಂಭವಾಗುವ ಬೆಳಗ್ಗೆ 10 ಗಂಟೆಗೆ ಮುಖ್ಯಶಿಕ್ಷಕರ ಮೊಬೈಲ್‌ಗೆ ಪ್ರಶ್ನೆಪತ್ರಿಕೆಗಳನ್ನು ಕಳುಹಿಸಲಾಯಿತು. ಮುಖ್ಯಶಿಕ್ಷಕರು ಪ್ರಶ್ನೆಪತ್ರಿಕೆಯನ್ನು ವಿದ್ಯಾರ್ಥಿಗಳ ಗುಂಪಿಗೆ ಶೇರ್‌ ಮಾಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಕುಳಿತು ಪರೀಕ್ಷೆ ಬರೆದರು.

ಆಯಾ ಶಾಲೆಯ ಮುಖ್ಯಶಿಕ್ಷಕರು ಹಾಗೂ ವಿಷಯ ಶಿಕ್ಷಕರು ವಿದ್ಯಾರ್ಥಿಗಳ ಮೊಬೈಲ್‌ ವಿಡಿಯೋ ಆನ್‌ ಮಾಡಿಕೊಂಡು ವಿದ್ಯಾರ್ಥಿಗಳನ್ನು ಪರಿಶೀಲನೆ ಮಾಡಲು ಸಾಧ್ಯವಿದೆ. ಪರೀಕ್ಷೆ ಅವ ಧಿ ಮುಗಿದ ತಕ್ಷಣ ವಿದ್ಯಾರ್ಥಿಗಳು ಉತ್ತರಪತ್ರಿಕೆಯನ್ನು ಸ್ಕಾನ್‌ ಅಥವಾ ಫೋಟೋ ತೆಗೆದು ವಿಷಯವಾರು ಶಿಕ್ಷಕರ ಅಥವಾ ಮುಖ್ಯಶಿಕ್ಷಕರ ಮೊಬೈಲ್‌ಗೆ ಕಳಿಸುತ್ತಾರೆ. ಕೆಲವು ಶಾಲೆಗಳು ವಾಟ್ಸ್‌ಆ್ಯಪ್‌ ಮೂಲಕ ಪ್ರಶ್ನೆಪತ್ರಿಕೆ ಕಳಿಸಿವೆ.

ಅನೇಕ ಶಾಲೆಗಳು ಗೂಗಲ್‌ ಮೀಟ್‌ ಮತ್ತು ಝೂಮ್‌ ಆ್ಯಪ್‌ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರ ಮೇಲ್ವಿಚಾರಣೆ ನಡೆಸಿದರು. ಚಿತ್ರದುರ್ಗ ತಾಲೂಕಿನ 106, ಚಳ್ಳಕೆರೆ 75, ಹಿರಿಯೂರು 73, ಹೊಳಲ್ಕೆರೆ 47, ಹೊಸದುರ್ಗ 52 ಹಾಗೂ ಮೊಳಕಾಲ್ಮೂರು ತಾಲೂಕಿನ 34 ಶಾಲೆಗಳು ಸೇರಿದಂತೆ ಜಿಲ್ಲೆಯ 450 ಶಾಲೆಗಳಲ್ಲಿ 387 ಶಾಲೆಗಳ ವಿದ್ಯಾರ್ಥಿಗಳು ಇಂದಿನ ಆನ್‌ಲೈನ್‌ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. 127 ಸರಕಾರಿ ಶಾಲೆಗಳು, 121 ಅನುದಾನಿತ ಶಾಲೆಗಳು ಹಾಗೂ 78 ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. ಜಿಲ್ಲೆಯ 18,815 ವಿದ್ಯಾರ್ಥಿಗಳಲ್ಲಿ 15,691 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ಆನ್‌ ಲೈನ್‌ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆಯ ಮಾಹಿತಿ ಕೆಲವು ವಿದ್ಯಾರ್ಥಿಗಳಿಗೆ ತಲುಪಿಲ್ಲ. ಒಂದೆರಡು ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ ಎನ್ನುವುದು ಇಲಾಖೆ ಅಭಿಪ್ರಾಯ.

ಒಟ್ಟಾರೆ ಜಿಲ್ಲೆಯಲ್ಲಿ ಶೇ. 83.3 ವಿದ್ಯಾರ್ಥಿಗಳು ಆನ್‌ಲೈನ್‌ ಪರೀಕ್ಷೆ ಬರೆದಿದ್ದಾರೆ. ಮೇ 18ರಂದು ಗಣಿತ, 19 ರಂದು ಇಂಗ್ಲಿಷ್‌, 20 ರಂದು ವಿಜ್ಞಾನ, 21 ರಂದು ಹಿಂದಿ, 22 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ಜರುಗಲಿವೆ. ಕೊರೊನಾ ಸಂಕಷ್ಟದ ನಡುವೆಯೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಖಾತ್ರಿಗೊಳಿಸಲು ಶಿಕ್ಷಣ ಇಲಾಖೆ ಹೊಸ ಹೆಜ್ಜೆ ಇರಿಸಿದೆ.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.