ಬೆಳೆ ನಷ್ಟ ಅಂದಾಜಿಗೆ ಸಮಿತಿ ರಚಿಸಿ

Team Udayavani, Jun 20, 2021, 9:31 PM IST

20-19

ಚಿತ್ರದುರ್ಗ : ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ರೈತರು ಅನುಭವಿಸಿರುವ ನಷ್ಟದ ಬಗ್ಗೆ ಅಂದಾಜು ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಶನಿವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ ಮಡಿದವರಿಗೆ ಮತ್ತು ಇದೇ ರೀತಿ ರಾಜ್ಯದಾದ್ಯಂತ ಮಡಿದ ಕೊರೊನಾ ಸೋಂಕಿತರ ಕುಟುಂಬಕ್ಕೆ ತಲಾ ಹತ್ತು ಲಕ್ಷ ರೂ. ಪರಿಹಾರ ಒದಗಿಸಬೇಕು. ಈ ಕುಟುಂಬದ ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ಸರ್ಕಾರವೇ ಹೊರಬೇಕು.

ಗ್ರಾಮೀಣ ಭಾಗದಲ್ಲಿ ಕೊರೊನಾ ಪರೀಕ್ಷೆ ಹೆಚ್ಚಿಸಬೇಕು. ಡೀಸೆಲ್‌, ಪೆಟ್ರೋಲ್‌, ವಿದ್ಯುತ್‌ ದರವನ್ನು ಇಳಿಸಬೇಕು. ಕೃಷಿ ಪರಿಕರಗಳ ಮೇಲೆ ವಿ ಸುವ ಜಿಎಸ್‌ಟಿ ಹಾಗೂ ರಾಜ್ಯದ ವ್ಯಾಪ್ತಿಯ ತೆರಿಗೆಯನ್ನೂ ಸಂಪೂರ್ಣ ಕೈಬಿಡಬೇಕು. ಉಚಿತವಾಗಿ ಬಿತ್ತನೆ ಬೀಜ ಪೂರೈಸಬೇಕು. ರಸಗೊಬ್ಬರ ಕೀಟನಾಶಕಗಳನ್ನು ರಿಯಾಯಿತಿ ದರದಲ್ಲಿ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಎಲ್ಲಾ ಕೃಷಿ ಚಟುವಟಿಕೆಗಳಿಗೂ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಖರೀದಿ ಕೇಂದ್ರದ ಮೂಲಕ ಖರೀದಿಸಲಾದ ಭತ್ತ, ಜೋಳ ಮತ್ತು ರಾಗಿ ಬಾಕಿಯನ್ನು ಕೂಡಲೇ ಪಾವತಿಸಬೇಕು. ಕಬ್ಬಿನ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆ ಪರಿಹಾರದ ಬಾಕಿ ಮತ್ತು ಬರ ಹಾಗೂ ಅತಿವೃಷ್ಟಿ ಪರಿಹಾರದ ಬಾಕಿಯನ್ನು ರೈತರ ಖಾತೆಗೆ ಜಮಾ ಮಾಡಬೇಕು.

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಡಾ| ಪ್ರಕಾಶ್‌ ಕಮ್ಮರಡಿ ನೀಡಿರುವ ವರದಿ ಅನ್ವಯ ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಹಣ್ಣು ತರಕಾರಿ ಬೆಳೆ ಬೆಳೆದು ಮಾರುಕಟ್ಟೆ ಇಲ್ಲದೆ ನಷ್ಟ ಅನುಭವಿಸಿದ್ದಾರೆ.

ಕೂಡಲೆ ಬೆಳೆ ಸಮಿಕ್ಷೆ ಮಾಡಿ ನಷ್ಟ ಪರಿಹಾರ ದೊರಕಿಸಿಕೊಡಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗಿದೆ. ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶೀ ಟಿ. ನುಲೇನೂರು ಎಂ. ಶಂಕರಪ್ಪ, ಜಿಲ್ಲಾ ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ತಾಲೂಕು ಅಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಕಾರ್ಯದರ್ಶಿ ಹುಣ್ಣಸೆಕಟ್ಟೆ ಕಾಂತರಾಜ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.