ಕೋಡಿಹಳ್ಳಿ ಚಂದ್ರಶೇಖರ್‌ ಸಭೆ ಬಹಿಷ್ಕರಿಸಲು ನಿರ್ಧಾರ


Team Udayavani, Jun 20, 2021, 10:00 PM IST

20-20

ಚಿತ್ರದುರ್ಗ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಸಾರಿಗೆ ನೌಕರರ ಚಳವಳಿಗೆ ಹೋಗಿದ್ದು ತಪ್ಪು. ಹಾಗಾಗಿ ಇನ್ನು ಮುಂದೆ ಕೋಡಿಹಳ್ಳಿ ಚಂದ್ರಶೇಖರ್‌ ಕರೆಯುವ ಸಭೆಗಳಿಗೆ ಹೋಗಬಾರದು ಎಂದು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಪ್ರವಾಸಿಮಂದಿರದಲ್ಲಿ ನಡೆದ ರೈತ ಸಂಘದ ಜಿಲ್ಲಾ ಸಮಿತಿ ಸಭೆಯಲ್ಲಿ ಪೆಟ್ರೋಲ್‌- ಡೀಸೆಲ್‌, ಬೆಲೆ ಏರಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಕೃಷಿ ಇಲಾಖೆಯಿಂದ ರೈತರಿಗೆ ವಿತರಣೆ ಮಾಡುತ್ತಿರುವ ತಾಡಪಾಲುಗಳು ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಸರ್ಕಾರ ಬೆಂಬಲ ಬೆಲೆಯಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸುವ ಬಗ್ಗೆ ತೀರ್ಮಾನ ಸಮರ್ಪಕವಾಗಿ ಕೈಗೊಳ್ಳದಿದ್ದಲ್ಲಿ ಕೃಷಿ ಇಲಾಖೆ ಮುಂದೆ ಕೃಷಿ ಉತ್ಪನ್ನಗಳನ್ನು ಸುರಿದು ಪ್ರತಿಭಟನೆ ಮಾಡಬೇಕು. ರೈತರಿಗೆ ವಿತರಿಸುವ ಶೇಂಗಾ ಬೀಜ ಕಳಪೆಯಾಗಿದೆ, ಬಗರ್‌  ಹುಕುಂ ರೈತರಿಗೆ ಹಕ್ಕುಪತ್ರ ವಿತರಿಸಿಲ್ಲ, ರೈತರಿಗೆ ಬೆಳೆ ವಿಮೆ ಸಮರ್ಪಕವಾಗಿ ಜಾರಿ ಮಾಡುತ್ತಿಲ್ಲ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ ರೈತರ ಸಾಲವನ್ನು ಬಡ್ಡಿ ರಹಿತವಾಗಿ ಸಾಲಿನಲ್ಲಿ ರಿಯಾಯಿತಿ ಕೊಟ್ಟು ಪಾವತಿಸಿಕೊಳ್ಳದಿದ್ದರೆ ಮರುಪಾವತಿ ಮಾಡುವುದನ್ನು ರದ್ದುಗೊಳಿಸಬೇಕು. ಮರಳು ಗಣಿಗಾರಿಕೆಯನ್ನು ಜನಾಭಿಪ್ರಾಯಕ್ಕೆ ವಿರುದ್ಧವಾಗಿ ಮಾಡಬಾರದು.

ಜಿಲ್ಲೆಗೆ ಸಮಗ್ರ ನೀರಾವರಿ ಮಾಡುವ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಬಹಿರಂಗ ಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ಚರ್ಚಿಸಿದರು.

ಜಿಲ್ಲೆಯಲ್ಲಿ ಅಳವಡಿಸಿರುವ ಗಾಳಿಯಂತ್ರಗಳು ಪರಿಸರ ವಿರೋ ಧಿಯಾಗಿವೆ ಅವುಗಳನ್ನು ಸ್ಥಗಿತಗೊಳಿಸಬೇಕು. ಜಿಲ್ಲೆಯಲ್ಲಿ ಮಧ್ಯವರ್ತಿಗಳಿಲ್ಲದ ರೈತರ ಸಂತೆ ಯೋಜನೆ ಅನುಷ್ಠಾನಗೊಳಿಸಬೇಕೆಂಬ ವಿಷಯಗಳೂ ಸಭೆಯಲ್ಲಿ ಚರ್ಚೆಯಾದವು.

ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು. ಸಭೆಯಲ್ಲಿ ರೈತ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಈಚಘಟ್ಟದ ಸಿದ್ಧವೀರಪ್ಪ, ಜಿ. ತಿಪ್ಪೇಸ್ವಾಮಿ, ಚಿಕ್ಕಬ್ಬಿಗೆರೆ ನಾಗರಾಜ್‌, ಡಿ.ಎಸ್‌.ಹಳ್ಳಿ, ಮಲ್ಲಿಕಾರ್ಜುನ್‌, ಪ್ರವೀಣ, ರಾಜಶೇಖರಪ್ಪ, ಬಸವನಗೌಡ, ಮಹೇಶ್‌, ಶ್ರೀಕಂಠಮೂರ್ತಿ, ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.