ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ


Team Udayavani, Jun 23, 2021, 10:35 PM IST

23-19

ಚಿತ್ರದುರ್ಗ: ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೊರೊನಾ ಸಂಭಾವ್ಯ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆ ಕುರಿತ ಮುಂಜಾಗ್ರತಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌ ಮೂರನೇ ಅಲೆ ಎದುರಿಸಲು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ಕೋವಿಡ್‌ ಕೇರ್‌ ಸೆಂಟರ್‌ ಗುರುತಿಸಲಾಗಿದೆ. ಕೋವಿಡ್‌ ರೋಗ ಲಕ್ಷಣಗಳಿಲ್ಲದಿದ್ದರೆ ಮಗುವಿನೊಂದಿಗೆ ತಾಯಿಯೂ ಇರಲು ಅವಕಾಶ ಮಾಡಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಉಚಿತ ಊಟದ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಮಕ್ಕಳಿಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 5 ಬೆಡ್‌, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ಬೆಡ್‌ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 50 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಕ್ಕಳಿಗೆ ಬೇಕಾಗಿರುವ ವೆಂಟಿಲೇಟರ್‌ಗಳು ಹಾಗೂ ಔಷ  ಧಗಳು ಬಹಳ ಮುಖ್ಯವಾಗಿವೆ. ಜಿಲ್ಲೆಯಲ್ಲಿ ಸಿಎಸ್‌ಆರ್‌ ಅನುದಾನ, ಜಿಲ್ಲಾ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಚಿಕಿತ್ಸೆಗಾಗಿ ಮಕ್ಕಳಿಗಾಗಿ ಪ್ರತ್ಯೇಕವಾಗಿ 600 ಬೆಡ್‌ ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ 3803 ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ. ಇದರಲ್ಲಿ ಶೇ. 90ರಷ್ಟು ಮಕ್ಕಳಿಗೆ ಕೋವಿಡ್‌ ರೋಗ ಲಕ್ಷಣಗಳಿರಲಿಲ್ಲ. ಕೆಲವು ಮಕ್ಕಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆಲವು ಮಕ್ಕಳು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿದ್ದು, ಅಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ ಮುಗಿಸಿ ಮನೆಗೆ ಹೋಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಏಕ ಪೋಷಕರನ್ನು ಕಳೆದುಕೊಂಡ 30 ಮಕ್ಕಳಿದ್ದಾರೆ. ಕೋವಿಡ್‌ ಎರಡನೇ ಅಲೆಯಿಂದಾಗಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗಾಗಿ ಮುಖ್ಯಮಂತ್ರಿಗಳು ಈಗಾಗಲೇ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಘೋಷಣೆ ಮಾಡಿದ್ದಾರೆ. ಈ ಯೋಜನೆಯನ್ವಯ ಅನಾಥ ಮಕ್ಕಳಿಗೆ ಪ್ರತಿ ತಿಂಗಳು 3500 ರೂ. ಗಳನ್ನು ಅವರ ಖಾತೆಗೆ ಜಮಾ ಮಾಡಲಾಗುವುದು. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಅವರಿಗೆ ಉಚಿತ ಶಿಕ್ಷಣ ನೀಡುವುದು ಎಂದು ತಿಳಿಸಿದರು.

ಕಳೆದ ಒಂದು ವರ್ಷದಲ್ಲಿ 98 ಬಾಲ್ಯವಿವಾಹಗಳ ದೂರುಗಳು ಬಂದಿವೆ. ಈಗಾಗಲೇ 93 ಪ್ರಕರಣಗಳಿಗೆ ಎಫ್‌ಐಆರ್‌ ದಾಖಲಿಸಲಾಗಿದೆ. ಈ ವರ್ಷ ಏಪ್ರಿಲ್‌ನಲ್ಲಿ 41 ಬಾಲ್ಯವಿವಾಹದ ದೂರುಗಳು ಬಂದಿದ್ದವು. ಇದರಲ್ಲಿ 40 ಬಾಲ್ಯವಿವಾಹಗಳನ್ನು ತಡೆದು, ಒಂದು ಪ್ರಕರಣಕ್ಕೆ ಸಂಬ ಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದರು. ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ಸಿ.ಎಲ್‌. ಪಾಲಾಕ್ಷ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಎರಡು ಆಕ್ಸಿಜನ್‌ ಸಾಮರ್ಥ್ಯದ ಮಕ್ಕಳ ವಾರ್ಡ್‌ಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ಉಳಿದ ಐದು ತಾಲೂಕುಗಳ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಒಟ್ಟು ಆರು ಆಸ್ಪತ್ರೆಗಳನ್ನು ಗುರುತಿಸಲಾಗಿದೆ.

ಆರು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ ಸೇರಿದಂತೆ ಒಟ್ಟು 94 ಬೆಡ್‌ಗಳನ್ನು ಪ್ರತ್ಯೇಕಿಸಿ ಮಕ್ಕಳ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ. 18 ವರ್ಷದೊಳಗಿನ ಕೋವಿಡ್‌ ಸೋಂಕಿತ ರೋಗ ಲಕ್ಷಣಗಳಿಲ್ಲದ ಮಕ್ಕಳಿಗೋಸ್ಕರ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ. ಜಿಲ್ಲಾ ಮಟ್ಟದ ಮಕ್ಕಳ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 50 ಬೆಡ್‌, ಐದು ತಾಲೂಕಿನಲ್ಲಿ ತಲಾ 25 ಬೆಡ್‌ ಸೇರಿದಂತೆ ಒಟ್ಟು 175 ಬೆಡ್‌ ಸಾಮರ್ಥ್ಯದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಕಳೆದ 20 ದಿನಗಳ ಹಿಂದೆಯೇ ಸಮಿತಿ ರಚನೆ ಮಾಡಲಾಗಿದೆ. ಕ್ರಿಯಾ ಯೋಜನೆ ತಯಾರಿಸಲು ಸಂಬಂ ಧಿಸಿದ ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ. ರಾಧಿ  ಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯಕ್‌, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿ ಜೆ. ವೈಶಾಲಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.