ಬಿಜೆಪಿ ತತ್ವ-ಸಿದ್ಧಾಂತ ಆಧಾರಿತ ಪಕ್ಷ: ಶಾಸಕ ತಿಪ್ಪಾರೆಡ್ಡಿ


Team Udayavani, Jul 21, 2021, 6:31 PM IST

21-16

ಚಿತ್ರದುರ್ಗ: ಬಿಜೆಪಿ ಎಂದೂ ಅಧಿ ಕಾರಕ್ಕಾಗಿ ಹೋರಾಡಲಿಲ್ಲ. ದೇಶ ಮೊದಲು, ಅಧಿಕಾರ ನಂತರ ಎನ್ನುವ ಸಿದ್ಧಾಂತ ನಮ್ಮ ಪಕ್ಷದ್ದು. ಪಕ್ಷದಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುವವರನ್ನು ಹುಡುಕಿ ಅಧಿಕಾರ ನೀಡುವ ಸಂಪ್ರದಾಯ ಇರುವುದು ನಮ್ಮ ಪಕ್ಷದಲ್ಲಿ ಮಾತ್ರ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಎಸ್‌ಎಸ್‌ಕೆಎಸ್‌ ಸಭಾಂಗಣದಲ್ಲಿ ಜೆಡಿಎಸ್‌ ಮುಖಂಡ ವಿ.ಎಲ್‌. ಪ್ರಶಾಂತ್‌ ತಮ್ಮ ಕುಟುಂಬ ಹಾಗೂ ಬೆಂಬಲಿಗರ ಜತೆಗೆ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶ ಕಟ್ಟುವಲ್ಲಿ ಬಿಜೆಪಿ ಎಂದೂ ಹಿಂದೆ ಬಿದ್ದಿಲ್ಲ. ಪಂಡಿತ್‌ ದೀನ್‌ದಯಾಳ್‌ ಉಪಾಧ್ಯಾಯ, ಶ್ಯಾಮಪ್ರಸಾದ್‌ ಮುಖರ್ಜಿಯವರು ಕಟ್ಟಿದ ಪಕ್ಷ ಇದಾಗಿದೆ. ಸಿದ್ಧಾಂತಕ್ಕಾಗಿ ಕೆಲಸ ಮಾಡುವ ಪಕ್ಷ ನಮ್ಮದು. ವಿ.ಎಲ್‌. ಪ್ರಶಾಂತ್‌ ಅವರ ತಂದೆ ಹಿಂದೆ ಜಿಪಂ ಸದಸ್ಯರಾಗಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಬಿಜೆಪಿ ಸೇರಿದ್ದಾರೆ ಎಂದು ಸ್ವಾಗತಿಸಿದರು.

ವಿಧಾನ ಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ಮಾತನಾಡಿ, ಬಿಜೆಪಿಯ ಸಿದ್ಧಾಂತ ಒಪ್ಪಿ ವಿ.ಎಲ್‌. ಪ್ರಶಾಂತ್‌ ತಮ್ಮ ಕುಟುಂಬ ಹಾಗೂ ಐವತ್ತು ಯುವಕರ ತಂಡದೊಂದಿಗೆ ಬಿಜೆಪಿ ಸೇರಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯಕರ್ತರು, ಚುನಾಯಿತ ಪ್ರತಿನಿ ಧಿಗಳಿಗೆ ಕೊರತೆಯಿಲ್ಲ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕಡೆ ಪಕ್ಷದ ಧ್ವಜ ಹಾರಾಡುತ್ತಿದೆ.

ಇದು ಮುಗಿಲೆತ್ತರಕ್ಕೆ ಹಾರಬೇಕು. ಪಕ್ಷವನ್ನು ವಿಭಜಿಸುವ ಕೆಲಸ ಬಿಜೆಪಿಯಲ್ಲಿಲ್ಲ ಎಂದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌ ಮಾತನಾಡಿ, ಪಕ್ಷದಲ್ಲಿ ಪ್ರಮುಖರು ಕಾರ್ಯಕರ್ತರನ್ನು ಕೈಹಿಡಿದು ಬೆಳೆಸುತ್ತಾರೆ. ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಲು ಇಲ್ಲಿ ಸಾಕಷ್ಟು ಅವಕಾಶವಿದೆ. ಜೆಡಿಎಸ್‌ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿ.ಎಲ್‌. ಪ್ರಶಾಂತ್‌ ಅಲ್ಲಿನ ಉಸಿರುಗಟ್ಟುವ ವಾತಾವರಣದಿಂದ ಬೇಸತ್ತು ಬಿಜೆಪಿ ಸೇರಿದ್ದಾರೆ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಎ. ಮುರುಳಿ ಅಧ್ಯಕ್ಷತೆ ವಹಿಸಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರೀನಾಥ್‌, ವಿಭಾಗ ಸಂಘಟನಾ ಕಾರ್ಯದರ್ಶಿ ಜ್ಯೇಷ್ಠ ಪಡಿವಾಳ್‌, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್‌ ಯಾದವ್‌, ಮುಖಂಡರಾದ ಭೀಮಸಮುದ್ರದ ಜಿ.ಎಸ್‌. ಅನಿತ್‌, ರಘುಚಂದನ್‌, ವೆಂಕಟೇಶ್‌ ಯಾದವ್‌, ನಗರಸಭೆ ಸದಸ್ಯ ಶಶಿ, ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

Untitled-1

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

covid-19

ಕೋವಿಡ್ 19; ಭಾರತದಲ್ಲಿ ಕಳೆದ 24 ಕೋವಿಡ್ ಪ್ರರಕಣಗಳ ಸಂಖ್ಯೆ, ಸಾವು ಮತ್ತೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chitradurga news

ಚನ್ನಮ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

chitradurga news

ಕಪ್ಪುಪಟ್ಟಿ ಧರಿಸಿ ಶಿಕ್ಷಕರು ಕೆಲಸಕ್ಕೆ ಹಾಜರ್‌

covid news

ಲಸಿಕೆ ವಿತರಣೆಯಲ್ಲಿ  ಭಾರತವೇ ನಂ.1

The Ramayana

ರಾಮಾಯಣದಲ್ಲಿದೆ ಆದರ್ಶ ಬದುಕಿನ ಸಾರ

19clk01p

ವೀರಯೋಧರ ಕಾರ್ಯ ಸದಾಸ್ಮರಿಸೋಣ: ಬಸವರೆಡ್ಡಿ

MUST WATCH

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

ಹೊಸ ಸೇರ್ಪಡೆ

52ನೇ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜೋರಾದ ತಯಾರಿ

52ನೇ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜೋರಾದ ತಯಾರಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.