ಕಲ್ಲಿನ ಕೋಟೆಯನ್ನು ಹಸಿರು ನಾಡಾಗಿಸಿ


Team Udayavani, Jul 28, 2021, 6:44 PM IST

28-14

ಹೊಸದುರ್ಗ: ಕಲ್ಲಿನ ಕೋಟೆಗೆ ಹೆಸರಾಗಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳಸುವ ಮೂಲಕ ಹಸಿರು ಕೋಟೆಯನ್ನಾಗಿ ಪರಿವರ್ತಿಸಲು ಮುಂದಾಗಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾ ಧೀಶೆ ಎಂ.ಎಸ್‌. ಶಶಿಕಲಾ ಕರೆ ನೀಡಿದರು. ಪಟ್ಟಣದ ಎನ್‌ಇಎಸ್‌ ಬಡಾವಣೆ ಹಿಂಭಾಗದಲ್ಲಿರುವ ಹನುಮನ ಗುಡ್ಡದಲ್ಲಿ ದಳವಾಯಿ ಗ್ರೂಪ್ಸ್‌, ಮುರಗೇಶ್‌ ಫಾರ್ಮ್, ಲಯನ್ಸ್‌ ಕ್ಲಬ್‌ ಹಾಗೂ ಪತಂಜಲಿ ಯೋಗ ಶಿಕ್ಷಣ ಟ್ರಸ್ಟ್‌ ವತಿಯಿಂದ ಆಯೋಜಿಸಲಾಗಿದ್ದ ಬೀಜದ ಉಂಡೆ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ.

ಪರಿಸರ ನಾಶ ಮಾಡಿದಲ್ಲಿ ಏನೆಲ್ಲಾ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆಯೆಂದು ಈಗಾಗಲೇ ಪ್ರಕೃತಿ ಮನುಷ್ಯನಿಗೆ ಪಾಠ ಕಲಿಸಿದೆ. ಮಾನವರು ಇನ್ನಾದರೂ ಬುದ್ದಿ ಕಲಿತುಕೊಂಡು ಪರಿಸರ ಉಳಿವಿಗೆ ಶ್ರಮಿಸಬೇಕು. ವಿವಿಧ ಬೀಜದ ಉಂಡೆಗಳನ್ನು ಬಿತ್ತನೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಸಂಘ-ಸಂಸ್ಥೆಗಳು ನಿರಂತರವಾಗಿ ಆಯೋಜನೆ ಮಾಡುವ ಮೂಲಕ ಇಂದಿನ ಪೀಳಿಗೆಯಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದರು.

ಹೈಕೋರ್ಟ್‌ ನಿವೃತ್ತ ನ್ಯಾಯಾ ಧೀಶ ಎಚ್‌. ಬಿಲ್ಲಪ್ಪ ಮಾತನಾಡಿ, ಒಳ್ಳೆಯ ಗಾಳಿ, ಬೆಳಕು, ನೀರು ಪೂರೈಸುವ ಉತ್ತಮ ಪರಿಸರ ಮನುಷ್ಯನಿಗೆ ಸಂತೋಷದ ಮೂಲ. ಇಂತಹ ಪರಿಸರದಲ್ಲಿ ಮನುಷ್ಯ ನೆಮ್ಮದಿಯಾಗಿ ಜೀವಿಸಬಹುದು. ಆದರೆ ಅತಿಯಾದ ಸ್ವಾರ್ಥದಿಂದ ಪರಿಸರ ವಿನಾಶಕ್ಕೆ ಮುಂದಾಗಿದ್ದಾನೆ. ಮನುಷ್ಯರ ಬದುಕು ಇಲ್ಲಿಗೆ ಕೊನೆಯಾಗುವುದಿಲ್ಲ.

ಅದು ಮುಂದಿನ ಪೀಳಿಗೆಗೆ ವರ್ಗಾವಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಜೀವಿತಾವ ಧಿಯಲ್ಲಿ ಪರಿಸರವನ್ನು ಬೆಳೆಸುವ ಕೆಲಸವಾಗಬೇಕು. ಇಲ್ಲದಿದ್ದಲ್ಲಿ ಮಾನವ ಕುಲದ ವಿನಾಶಕ್ಕೆ ಒಂದು ಬಗೆಯ ವೈರಸ್‌ ಸಾಕಾಗುತ್ತದೆ. ಈಗಲಾದರೂ ಮನುಷ್ಯ ಜೀವಿ ಎಚ್ಚರಗೊಳ್ಳಬೇಕು ಎಂದು ತಿಳಿಸಿದರು. ನೇರಳ, ಹೊಂಗೆ, ಹೊಳೆಮತ್ತಿ, ಸಿಮರುಬಾ, ಕಮರ, ತಬಸಿ, ಹೊನ್ನೆ, ಬೀಟೆ, ಬಾಗೆ, ಗುಲ್‌ ಮೊಹರ್‌ ಸೇರಿದಂತೆ ವಿವಿಧ ತಳಿಯ 20 ಸಾವಿರಕ್ಕೂ ಹೆಚ್ಚು ಬೀಜದುಂಡೆಗಳನ್ನು ಬಿತ್ತನೆ ಮಾಡಲಾಯಿತು.

ಈ ವೇಳೆ ಜೆಎಂಎಫ್‌ಸಿ ನ್ಯಾಯಾ  ಧೀಶ ಗಂಗಾಧರ ಬಡಿಗೇರ, ಮಾಜಿ ಶಾಸಕ ಟಿ.ಎಚ್‌. ಬಸವರಾಜಪ್ಪ, ಸಹಕಾರ ಇಲಾಖೆ ಜಂಟಿ ನಿಬಂಧಕ ಪಾಂಡುರಂಗ ಗರಗ, ಜಿಪಂ ಮಾಜಿ ಸದಸ್ಯ ಕೆ. ಅನಂತ್‌, ಡಾ| ಮುರುಗೇಶ್‌, ಪುರಸಭೆ ಮಾಜಿ ಸದಸ್ಯ ವೆಂಕಟೇಶ್‌ ದಳವಾಯಿ, ಗಾಳಿರಂಗಯ್ಯನಹಟ್ಟಿ ಶ್ರೀನಿವಾಸ್‌, ಎಂಆರ್‌ಸಿ ಮೂರ್ತಿ, ನಾಗೇನಹಳ್ಳಿ ಮಂಜುನಾಥ್‌, ಕೋಡಿಹಳ್ಳಿ ತಮ್ಮಣ್ಣ, ಗೋಪಾಲ್‌, ವಕೀಲರ ಸಂಘದ ಅಧ್ಯಕ್ಷ ಗಂಗಾಧರ, ವಕೀಲ ಗುರುಬಸಪ್ಪ, ಉದ್ಯಮಿ ಮಠ ಶಿವು, ಬೋಕಿಕೆರೆ ಸತೀಶ್‌, ಅಶೋಕ್‌, ಬಾಗೂರು ಯತೀಶ್‌, ಪಿಡಿಓ ಜಯಣ್ಣ, ಶಾಂತಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.